ಗ್ರೆನೇಡ್ ಎಸೆದ ಉಗ್ರರು: ನಾಲ್ವರು ಜವಾನರಿಗೆ ಗಾಯ

ಅನಂತ್‌ನಾಗ್, ಸೆ. 4: ಅನಂತ್‌ನಾಗ್ ಜಿಲ್ಲೆಯ ಖಾಝಿಗಂಡ್ ಪ್ರದೇಶದಲ್ಲಿ ಸೋಮವಾರ ಕೇಂದ್ರ ಮೀಸಲು ಪೊಲೀಸ್ ಪಡೆಯ ಗಸ್ತು ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರು ಅಡಗಿರುವ ಪ್ರದೇಶವನ್ನು ಸುತ್ತುವರಿಯಲಾಗಿದೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರೆಯಲ್ಲಿ ಸೇನಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾದ ಒಂದು ಗಂಟೆ ಬಳಿಕ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ.
ಸೊಪೊರೆಯ ಚೆಕ್-ಎ-ಬ್ರಾತ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಬೇಹುಗಾರಿಕೆ ನೀಡಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಆ ಪ್ರದೇಶವನ್ನು ಸುತ್ತವರಿದಿತ್ತು ಹಾಗೂ ಶೋಧ ಕಾರ್ಯಾಚರಣೆ ನಡೆಸಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Next Story





