ಮೌಢ್ಯಾಚರಣೆ ಪ್ರತಿಬಂಧಕ ಕಾಯ್ದೆಗೆ ಒತ್ತಾಯ
ಸೋಮವಾರ ಪ್ರಗತಿಪರ ಮಠಾಧೀಶರ ವೇದಿಕೆ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ವೌಢ್ಯಾಚರಣೆ ಪ್ರತಿಬಂಧಕ ಕಾಯ್ದೆ ಜಾರಿಗೆ ಒತ್ತಾಯಿಸಿ ಆಯೋಜಿಸಿರುವ ಧರಣಿ ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಮಠದ ಚೆನ್ನಮಲ್ಲ ಸ್ವಾಮೀಜಿ, ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ನಿವೃತ್ತ ನ್ಯಾ.ನಾಗಮೋಹನ ದಾಸ್, ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಕುಂಚಟಿಗರ ಗುರುಪೀಠದ ಶಾಂತವೀರ ಸ್ವಾಮೀಜಿ, ಸೂಫಿ ಸಂತರಾದ ಹಝ್ರತ್ ಅತಾವುಲ್ಲಾ ಚಿಸ್ತಿ, ಹಝ್ರತ್ ಖ್ವಾಜಾ ಅಝೀಂ ಅಲಿಷಾ ಚಿಸ್ತಿ, ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ.ಗೀತಾ, ನಿವೃತ್ತ ನ್ಯಾ.ವಿ.ಗೋಪಾಲಗೌಡ, ಡಾ.ಬಿ.ಟಿ.ಲಲಿತಾ ನಾಯಕ್, ಕುಂ.ವೀರಭದ್ರಪ್ಪ, ಕೆ.ಎಸ್.ಭಗವಾನ್, ಪ್ರೊ.ನರಸಿಂಹಯ್ಯ ಮತ್ತಿತರರಿದ್ದರು.
Next Story





