Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ...

ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ಎಂ.ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ5 Sept 2017 4:37 PM IST
share
ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ಎಂ.ರಾಜಣ್ಣ

ಶಿಡ್ಲಘಟ್ಟ, ಸೆ.5: ಸಮಾಜದ ಪರಿವರ್ತನೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು, ಶಿಕ್ಷಕ ಧರ್ಮವನ್ನು ಪಾಲನೆ ಮಾಡಿಕೊಂಡು ಹೋಗುವ ಕಡೆಗೆ ಶಿಕ್ಷಕರು ಮನಸ್ಸು ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.

ತಾಲೂಕಿನ ಎಚ್. ಕ್ರಾಸ್‍ನಲ್ಲಿರುವ ಚನ್ನಮ್ಮ ದೇವೇಗೌಡರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕ ವೃತ್ತಿ ಪವಿತ್ರವಾದದ್ದು ಅಂತಹ ವೃತ್ತಿಯಲ್ಲಿ ತೊಡಗಿಸಿಕೊಂಡವರು ನಿಷ್ಠೆ, ಪ್ರಾಮಾಣಿಕತೆಯನ್ನು ಹೊಂದಿಕೊಳ್ಳುವುದರ ಜೊತೆಗೆ ದೂರದೃಷ್ಟಿ, ನಿರಂತರ ಅಧ್ಯಯನವನ್ನು ಹೊಂದಿಕೊಂಡು ಮಕ್ಕಳನ್ನು ಪ್ರಜ್ಞಾವಂತರನ್ನಾಗಿ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.

ಮುಖ್ಯಭಾಷಣಕಾರರಾಗಿ ಮಾತನಾಡಿದ ಚಿಂತಾಮಣಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮುನಿರೆಡ್ಡಿ, ಶಿಕ್ಷಕರು ಕೇವಲ ಪಾಠಪ್ರವಚನಗಳನ್ನು ಬೋಧನೆ ಮಾಡಲು ಸೀಮಿತವಾಗಬಾರದು. ನಮ್ಮ ಸಂಸ್ಕೃತಿ ಪರಂಪರೆ ಉಳಿಸುವಲ್ಲಿ ಕಾಳಜಿ ವಹಿಸಬೇಕು. ಅಸಾಧ್ಯವಾದದ್ದನ್ನು ಸಾಧಿಸಿ ತೋರಿಸುವ ಶಕ್ತಿ ಶಿಕ್ಷಕರಲ್ಲಿದೆ. ಆಗಾಧವಾದ ಪಾಂಡಿತ್ಯ ಹೊಂದಿಕೊಂಡು, ವಿದ್ಯಾರ್ಥಿಗಳಿಗೆ ಧಾರೆಯೆರೆಯಬೇಕು. ಅಧ್ಯಯನ, ಭೋದನೆ ಎರಡು ಕಣ್ಣುಗಳಾಗಬೇಕು. ವಿದ್ಯೆ ಯಾರೂ ಕದಿಯಲಾರದ ವೃತ್ತಿ ಶಿಕ್ಷಕ ವೃತ್ತಿಯಾಗಿದೆ. ಸಮಾಜದಲ್ಲಿನ ಗೌರವಸ್ಥಾನವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಜ್ಯಾತ್ಯಾತೀತ ಮನೋಭಾವನೆ ಹೊಂದಿಕೊಳ್ಳಬೇಕು. ಶಿಕ್ಷಕರು ರಾಜಕೀಯ ಪ್ರೇರಿತರಾಗಿರಬಾರದು. ಜಾತಿ ಭೇದ ಮರೆತು ಕೆಲಸ ಮಾಡಬೇಕು. ಆದರ್ಶ ಶಿಕ್ಷಕರಾಗಬೇಕು. ನೇರ ನಡೆ, ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು. ಸಮಯಪ್ರಜ್ಞೆ ಕಾಪಾಡಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯೆಕ್ಷೆ ನಿರ್ಮಲ ಮುನಿರಾಜು ಮಾತನಾಡಿ, ಶಿಕ್ಷಕರು, ಮಕ್ಕಳನ್ನು ಸಮಾಜದಲ್ಲಿ ಪ್ರಜ್ಞಾವಂತರನ್ನಾಗಿ ನಿರ್ಮಾಣ ಮಾಡುವ ದೊಡ್ಡ ಹೊಣೆಗಾರಿಕೆಯನ್ನು  ಹೊತ್ತಿದ್ದಾರೆ. ಯಾವುದೇ ವೃತ್ತಿಗೆ ಇಲ್ಲದೆ ಇರುವಷ್ಟು ಮಹತ್ವ ಶಿಕ್ಷಕ ವೃತ್ತಿಗಿದೆ, ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮರೆಯಲಾರದ ಏಕೈಕ ವ್ಯಕ್ತಿ, ಗುರು, ಒಬ್ಬ ಶಿಕ್ಷಕ ಮೈ ಮರೆತರೆ ಇಡೀ ವ್ಯವಸ್ಥೆ ಹಾಳಾಗುತ್ತದೆ. ಶಿಕ್ಷಕರು ಮಕ್ಕಳಿಗೆ ಮಾರ್ಗದರ್ಶಕರಾಗಬೇಕು, ಎಂದು ಕರೆ ನೀಡಿದರು.

ತಹಶೀಲ್ದಾರ್ ಅಜಿತ್‍ಕುಮಾರ್ ರೈ ಮಾತನಾಡಿ, ಶಿಕ್ಷಕರಿಗೆ ರಾಧಾಕೃಷ್ಣನ್ ಅವರು ಆದರ್ಶರಾಗಬೇಕು. ರಾಷ್ಟ್ರದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ದೇಶದ ಸಂಪತ್ತನ್ನಾಗಿ ಮಕ್ಕಳನ್ನು ಸಿದ್ದಗೊಳಿಸಬೇಕು. ಮಕ್ಕಳಲ್ಲಿನ ಆಗಾಧವಾದ ಶಕ್ತಿಯನ್ನು ಹೊರಗೆಳೆಯುವಂತಹ ಪ್ರಾಮಾಣಿಕ ಪ್ರಯತ್ನವಾಗಬೇಕು ಎಂದರು.

ಈ ವೇಳೆ ತಾಲೂಕಿನಲ್ಲಿ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೇಗಳಲ್ಲಿ ವಿಜೇತರಾಗಿದ್ದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್. ನರಸಿಂಹಯ್ಯ, ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ನಗರಸಭಾ ಅಧ್ಯಕ್ಷ ಅಪ್ಸರ್‍ಪಾಷ, ಉಪಾಧ್ಯಕ್ಷೆ ಪ್ರಭಾವತಿಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಪಿ.ವಿ.ನಾಗರಾಜ್, ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೇಶವರೆಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ, ಸಂಗಪ್ಪ, ರವಿ ಮುಂತಾದವರು ಹಾಜರಿದ್ದರು. 
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X