Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ಸಂದರ್ಭದಲ್ಲಿ ಕೋಮು ಗಲಭೆ...

ಚುನಾವಣಾ ಸಂದರ್ಭದಲ್ಲಿ ಕೋಮು ಗಲಭೆ ಸೃಷ್ಟಿಸುವುದು ಬಿಜೆಪಿ ಸಿದ್ಧಾಂತ: ಸೀತಾರಾಂ ಯೆಚೂರಿ

‘ಸೌಹಾರ್ದತೆಗಾಗಿ ಕರ್ನಾಟಕ’ ರಾಜ್ಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ5 Sept 2017 5:56 PM IST
share
ಚುನಾವಣಾ ಸಂದರ್ಭದಲ್ಲಿ ಕೋಮು ಗಲಭೆ ಸೃಷ್ಟಿಸುವುದು ಬಿಜೆಪಿ ಸಿದ್ಧಾಂತ: ಸೀತಾರಾಂ ಯೆಚೂರಿ

ಬೆಂಗಳೂರು, ಸೆ.5: ಚುನಾವಣಾ ಸಂದರ್ಭದಲ್ಲಿ ಕೋಮು ಗಲಭೆಗಳಿಗೆ ಪ್ರಚೋದನೆ ನೀಡುವ ಮೂಲಕ ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳುವುದು ಬಿಜೆಪಿಯ ಮೂಲ ಸಿದ್ಧಾಂತವಾಗಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಎಡಪಕ್ಷಗಳು, ರಾಜ್ಯ ರೈತ ಸಂಘ ಹಾಗೂ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಆಯೋಜಿಸಿದ್ದ ‘ಸೌಹಾರ್ದತೆಗಾಗಿ ಕರ್ನಾಟಕ’ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನು ಕೆಲವೇ ತಿಂಗಳಿನಲ್ಲಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ರಾಜ್ಯಾದ್ಯಂತ ಕೋಮು ಗಲಭೆಗಳನ್ನು ಸೃಷ್ಟಿಸಿ, ಆ ಮೂಲಕ ಚುನಾವಣಾ ಪ್ರಚಾರ ಮಾಡಲು ನಿರ್ಧರಿಸಿದೆ. ಅದರ ಮೊದಲ ಭಾಗವಾಗಿ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

ಗೋ ರಕ್ಷಕ ಸಮಿತಿ ಕಾರ್ಯಕರ್ತರು ದೇಶಾದ್ಯಂತ ದಲಿತ, ಅಲ್ಪಸಂಖ್ಯಾತರ ಮೇಲೆ ಮಾರಣಾಂತಿಕ ಹಲ್ಲೆಗಳನ್ನು ನಡೆಸುತ್ತಿದೆ. ಬಿಜೆಪಿ ತನ್ನ ಕೋಮುವಾದಿ ಸಿದ್ಧಾಂತವನ್ನು ಈಡೇರಿಸಿಕೊಳ್ಳುವ ಸಲುವಾಗಿ ಖಾಸಗಿ ಗುಂಡಾ ಪಡೆಯನ್ನು ಹುಟ್ಟು ಹಾಕಿದ್ದು, ಚುನಾವಣಾ ಸಂದರ್ಭದಲ್ಲಿ ಮತ್ತಷ್ಟು ಕೋಮು ಗಲಭೆಗಳನ್ನು ಸೃಷ್ಟಿಸಲು ಹೊಂಚು ಹಾಕುತ್ತಿದೆ ಎಂದು ಅವರು ಎಚ್ಚರಿಕೆ ನೀಡಿದರು.

ನರೇಂದ್ರ ಮೋದಿ ಪ್ರಧಾನಿ ಹುದ್ದೆಗೆ ತಕ್ಕನಾಗಿ ನಡೆದುಕೊಳ್ಳುತ್ತಿಲ್ಲ. ಒಬ್ಬ ಸಾಮಾನ್ಯ ಕಾರ್ಯಕ್ರಮಗಳ ಆಯೋಜಕನಂತೆ ವರ್ತಿಸುತ್ತಿದ್ದಾರೆ. ತಾವು ಜಾರಿ ಮಾಡುವ ಒಂದೊಂದು ಕಾರ್ಯಕ್ರಮಗಳನ್ನು ಜನತೆ ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಮತ್ತೊಂದು ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನತೆಯನ್ನು ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು.

ದೇಶದಲ್ಲಿ ಪ್ರತಿಯೊಬ್ಬರು ಬಹುಸಂಸ್ಕೃತಿ ಒಳಗೆ ಸೇರಿಕೊಂಡಿದ್ದಾರೆ. ದೇಶ, ರಾಜ್ಯ, ಭಾಷೆಗಳೊಳಗೆ ಬೆರೆತು ಹೋಗಿದ್ದಾರೆ. ಈ ಬಹುತ್ವ ಸಂಸ್ಕೃತಿಯೇ ಭಾರತದ ಜೀವಾಳವಾಗಿದೆ. ಆದರೆ, ಬಿಜೆಪಿ ದೇಶದ ಬಹುಸಂಸ್ಕೃತಿಯನ್ನು ನಾಶ ಮಾಡಿ ಏಕ ಸಂಸ್ಕೃತಿಯನ್ನು ಜಾರಿ ಮಾಡಲು ಹೊರಟಿದೆ. ಹೀಗಾಗಿ ದೇಶದ ಜನತೆ ಬಿಜೆಪಿಯ ದೇಶವಿರೋಧಿ ತನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಈ ಮೂರು ವರ್ಷಗಳಲ್ಲಿ ಶಿಕ್ಷಣದ ಕೇಸರೀಕರಣಕ್ಕೆ ಮೊದಲ ಆದ್ಯತೆ ಕೊಟ್ಟಿದೆ. ಆ ಮೂಲಕ ಭಾರತದ ಮೂಲ ಇತಿಹಾಸವನ್ನು ತಿರುಚಲಾಗುತ್ತಿದ್ದು, ಅದರ ಭಾಗವಾಗಿಯೇ ಪ್ರಗತಿಪರ ಚಿಂತಕರಾದ ಧಾಬೋಲ್ಕರ್, ಗೋವಿಂದ ಪನ್ಸಾರೆ ಹಾಗೂ ಎಂ.ಎಂ.ಕಲಬುರ್ಗಿಯನ್ನು ಹತ್ಯೆ ಮಾಡಲಾಗಿದೆ ಎಂದರು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ಕಳೆದ ಮೂರು ವರ್ಷದ ಬಿಜೆಪಿ ಆಡಳಿತದಲ್ಲಿ ದಲಿತ, ಅಲ್ಪಸಂಖ್ಯಾತರ ಮಾರಣ ಹೋಮಗಳೇ ನಡೆಯುತ್ತಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಏನೂ ನಡೆದಿಲ್ಲವೆಂಬಂತೆ ಮೌನವಹಿಸಿದ್ದಾರೆ. ಪ್ರಧಾನಿಯ ಈ ವೌನ ಸಂಘಪರಿವಾರಕ್ಕೆ ಸಮ್ಮತಿ ಕೊಟ್ಟಂತೆ ಎಂದು ದೂಷಿಸಿದರು.

ಬಿಜೆಪಿ ಕೋಮು ಸಿದ್ಧಾಂತಕ್ಕೆ ಪರ್ಯಾಯವಾಗಿ ಜನಪರವಾದ ರಾಜಕೀಯ ಸಿದ್ಧಾಂತವನ್ನು ರೂಪಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಸಂಘಪರಿವಾರ ತಮ್ಮ ಕೋಮುವಾದಿ ಸಿದ್ಧಾಂತವನ್ನು ಬಿತ್ತುವಲ್ಲಿ ಮತ್ತಷ್ಟು ವೇಗವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಕೋಮುವಾದೀಕರಣಕ್ಕೆ ತಡೆ ನೀಡುವ ನಿಟ್ಟಿನಲ್ಲಿ ಮುಂದಿನ ಜನವರಿಯಲ್ಲಿ ಸೌಹಾರ್ದ ಕರ್ನಾಟಕಕ್ಕಾಗಿ ಸುಮಾರು 10ರಿಂದ 12ಲಕ್ಷ ಮಂದಿಯ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಮಹಾ ಸಂಸ್ಥಾನದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಎಸ್.ಸುಧಾಕರ ರೆಡ್ಡಿ, ಕರ್ನಾಟಕ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ, ಸಿಪಿಐ(ಎಂಎಲ್-ಎಲ್) ರಾಜ್ಯ ಕಾರ್ಯದರ್ಶಿ ಭಾರಧ್ವಾಜ್, ಎಸ್‌ಯುಸಿಐ ಕೇಂದ್ರ ಸಮಿತಿ ಸದಸ್ಯ ಡಾ.ರಾಧಾಕೃಷ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಮರುಳಸಿದ್ಧಪ್ಪ, ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಅಧ್ಯಕ್ಷ ಸರದಾರ್ ಅಹ್ಮದ್ ಖುರೇಷಿ, ಚಿಂತಕ ಡಾ.ಜಿ.ರಾಮಕೃಷ್ಣ ಮತ್ತಿತರರಿದ್ದರು.

ಇನ್ನು ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ ರಾಜ್ಯಾದ್ಯಂತ ಕೋಮು ಗಲಭೆ ಸೃಷ್ಟಿಸಲು ಷಡ್ಯಂತ್ರವನ್ನು ರೂಪಿಸಿದ್ದು, ಅನ್ಯ ರಾಜ್ಯಗಳಿಂದ 3800ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರ ಸೂಚನೆಯಂತೆ ರಾಜ್ಯ ಬಿಜೆಪಿ ಚುನಾವಣಾ ಪ್ರಚಾರ ಕೈಗೊಳ್ಳಲು ತೀರ್ಮಾನಿಸಿದೆ. ಅದರ ಭಾಗವಾಗಿ ಮಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.

-ಶ್ರೀರಾಮರೆಡ್ಡಿ, ಕಾರ್ಯದರ್ಶಿ ಸಿಪಿಎಂ ಕರ್ನಾಟಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X