Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ...

ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ: ಕೆ.ಎಸ್.ಈಶ್ವರಪ್ಪ

ವಾರ್ತಾಭಾರತಿವಾರ್ತಾಭಾರತಿ5 Sept 2017 7:18 PM IST
share
ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಗಮನಾರ್ಹ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಸೆ. 5: 'ಶಿಕ್ಷಕರು ದೇಶದ ಸಾಧನೆಗೆ ಕಾರಣರಾಗುವವರನ್ನು ರೂಪಿಸುವವರಾಗಿದ್ದಾರೆ. ಸಮಾಜ ಸರಿಯಾದ ದಿಕ್ಕಿನಲ್ಲಿ ಸಾಗಬೇಕಾದರೆ ಅದಕ್ಕೆ ಒಬ್ಬ ಗುರುವಿನ ಅಗ್ಯವಿದೆ. ಆ ಗುರು ಯಾವ ಮಾರ್ಗವನ್ನು ತೋರಿಸುತ್ತಾನೋ, ಆ ಮಾರ್ಗದಲ್ಲಿ ವಿದ್ಯಾರ್ಥಿಗಳು ಹೋಗುತ್ತಾರೆ. ಈ ಮೂಲಕ ಶಿಕ್ಷಣದಲ್ಲಿ ಸಾಧನೆ ಮಾಡಿ, ದೇಶದ ಸಾಧನೆಗೂ ಕಾರಣರಾಗುತ್ತಾರೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. 

ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆವತಿಯಿಂದ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ -2017  ಉದ್ಘಾಟಿಸಿದ ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಉನ್ನತಿಗೆ ಕಾರಣರಾಗುವ ಶಿಕ್ಷಕರು ಸಮಾಜವನ್ನು ತಿದ್ದುವ ಮತ್ತು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವ ಮಹೋನ್ನತ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದರು. 

ಅಬ್ದುಲ್ ಕಲಾಂ, ಪ್ರೊ. ರಾಧಾಕೃಷ್ಣನ್ ಮುಂತಾದವರು ಶಿಕ್ಷಣ ಕ್ಷೇತ್ರದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ. ಕಾರಣ ಅವರು ಶಿಕ್ಷಕರಾಗಿ ಮಾಡಿದ ಸಾಧನೆ. ಈ ರೀತಿ ಸಾಧನೆ ಮಾಡಿದ ಶಿಕ್ಷಕರನ್ನು ಸಮಾಜ ಸರ್ವದಾ ನೆನಪಿಸುತ್ತದೆ. ನಿಸ್ವಾರ್ಥ ಸೇವೆಯ ಮೂಲಕ ಮಕ್ಕಳನ್ನು ಉತ್ತಮರನ್ನಾಗಿ ಬೆಳೆಸುವ ಕೆಲಸವನ್ನು ಶಿಕ್ಷಕರು ಮಾಡುತ್ತಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ ಶಾಸಕರು ಮಾತನಾಡಿ, ಶಿಕ್ಷಕರು ನಂದಾದೀಪವಾಗಿದ್ದಾರೆ. ಇಂತಹ ದೀಪ ಇಂದು ಸಮಾಜವನ್ನು ಮತ್ತು ದೇಶವನ್ನು ಬೆಳಗುತ್ತಿದೆ. ಶ್ರೀಮಂತ, ಬಡವ, ಜಾತಿ, ಮತ ನೋಡದೆ ಎಲ್ಲರಿಗೂ ಒಂದೇ ರೀತಿ ಶಿಕ್ಷಣವನ್ನು ಇವರು ನೀಡುತ್ತಾರೆ. ಕೂಡಲೇ ಗುರುಭವನ ಸ್ಥಾಪಿಸಲು ಜಾಗ ಗುರುತಿಸಬೇಕು. ಅಧಿಕಾರಿಗಳು ಯಾವಕಾರಣಕ್ಕೂ ವಿಳಂಬಮಾಡಬಾರದು. ಸರ್ಕಾರ ಮಂಜೂರುಮಾಡಿದ ಹಣದ ಸದುಪಯೋಗ ಮಾಡಿಕೊಳ್ಳಬೇಕು. ಇಲ್ಲಿಯವರೆಗೆ ಅಧಿಕಾರಿಗಳು ತೋರಿದ ನಿರ್ಲಕ್ಷ್ಯ ಇನ್ನೂ ಮುಂದುವರೆಯಬಾರದು ಎಂದರು.

ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕ ಜಿ.ಎಸ್. ಪ್ರಭುಸ್ವಾಮಿ, ಗುಣಾತ್ಮಕ ಶಿಕ್ಷಣದ ಅವಶ್ಯಕತೆ ಇಂದು ಹೆಚ್ಚಾಗಿದ್ದು, ಇದರಬಗ್ಗೆ ಎಲ್ಲೆಡೆ ಚಿಂತನೆ ನಡೆಯುತ್ತಿದೆ. ಶಾಲೆಗಳಲ್ಲಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವ ಸಂಬಂಧ ಸಾಕಷ್ಟು ಯೋಜನೆಗಳನ್ನು ಆರಂಭಿಸಲಾಗಿದೆ. ಜೊತೆಗೆ ವೃತ್ತಿಪರ ಶಿಕ್ಷಣ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಬಹುತೇಕ ಶಾಲೆಗಳಲ್ಲಿನ ಇದು ಚಾಲನೆ ಗೊಂಡಿದೆ. ಶಿಕ್ಷಕರಿಗಾಗಿ ಗುರುಚೇತನವೆಂಬ ಕಲಿಕಾ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಅತಿಥಿಗಳು ಗೌರವಿಸಿದರು. 

ಕಾರ್ಯಕ್ರಮದಲ್ಲಿ ಎಂಎಲ್‍ಸಿ ಆರ್. ಪ್ರಸನ್ನಕುಮಾರ್, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಕ್ಷರಿ, ಜಿಪಂ ಸದಸ್ಯ ಕೆ.ಇ. ಕಾಂತೇಶ್, ಪಾಲಿಕೆ ಸದಸ್ಯ ಎಚ್.ಸಿ. ಯೋಗೇಶ್, ಜಿಪಂ ಸಿಇಓ ಕೆ. ರಾಕೇಶ್ ಕುಮಾರ್, ಬಿಇಒಎಸ್. ಗೀತಾ, ಡಿಡಿಪಿಐ ಪಿ.ಎಸ್. ಮಚಾಡೋ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಕೆ. ದಿವಾಕರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾಬಲೇಶ್ವರ ಹೆಗ್ಡೆ, ತಾಲೂಕು ಅಧ್ಯಕ್ಷ ಎಂ. ರವಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಬಸಪ್ಪ, ತಾಲೂಕು ಅಧ್ಯಕ್ಷ ವೈ.ಎಂ. ಧರ್ಮಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X