ದೇಶ ಅಭಿವೃದ್ಧಿ ಹೊಂದ ಬೇಕಾದರೆ ಶಿಕ್ಷಕರ ಪಾತ್ರ ಅತೀ ಮುಖ್ಯ: ಶಾಸಕ ಆರ್.ನರೇಂದ್ರರಾಜು ಗೌಡ
.jpg)
ಹನೂರು, ಸೆ.5: ಗುಡ್ಡಗಾಡು ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಿರಿ ಭತ್ಯೆ ನೀಡುವ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಅದನ್ನು ಜಾರಿಗೊಳಿಸಲಾಗುವುದು ಎಂದು ಶಾಸಕ ಆರ್.ನರೇಂದ್ರ ರಾಜು ಗೌಡ ತಿಳಿಸಿದರು.
ತಾಲೂಕಿನ ಪಟ್ಟಣದಗೌರಿ ಶಂಕರಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶೈಕ್ಷಣಿಕ ವಲಯದ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ದೇಶ ಅಭಿವೃದ್ಧಿ ಹೊಂದ ಬೇಕಾದರೆ ಶಿಕ್ಷಕರ ಪಾತ್ರ ಪ್ರಮುಖವಾದುದ್ದು, ಆದುದರಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನುಅರಿತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದ ಅವರು, ತಾಲೂಕಿನ ವಿವಿಧ ಶಿಕ್ಷಕರ ಸಂಘ ತಮ್ಮ ಕೋರಿಕೆಗಳನ್ನು ಈಡೇರಿಸುವಂತೆ ತನಗೆ ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತಾಲೂಕಿನ ಶಿಕ್ಷಕರ ಸಮಸ್ಯೆ ಪರಿಹರಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಾನ್ ಬ್ರಿಟೋ ಶಾಸಕರಿಗೆ ಮನವಿ ಪತ್ರ ಇದೇ ವೇಳೆ ಸಲ್ಲಿಸಿದರು.
ಈ ವೇಳೆ ತಾಲೂಕಿನ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಶಿಕ್ಷಕರ ಸಂಘದ ವತಿಯಿಂದ ಶಿಕ್ಷಕರಿಗೆ ಆಯೋಜಿಸಿದ್ದ ಸಾಂಸ್ಕೃತಿ ಚಟುವಟಿಕೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಮರುಗದಮಣಿ, ಲೇಖಾ, ತಾಪಂ ಅಧ್ಯಕ್ಷರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್ ಅಹ್ಮದ್, ಸದಸ್ಯೆ ಶಿವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶಿವಣ್ಣ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ನಾಗರಾಜು, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಪ್ಪ, ಬಿಆರ್ ಪಿಗಳು, ಸಿಆರ್ಪಿಗಳು ಹಾಗೂ ಶೈಕ್ಷಣಿಕ ವಲಯದ ಶಿಕ್ಷಕರು ಉಪಸ್ಥಿತರಿದ್ದರು.







