ತೆರಿಗೆ ಸಂಗ್ರಹದ ಮೇಲೆ ಜಿಎಸ್‌ಟಿ ಪರಿಣಾಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆ.5: ಜಿಎಸ್‌ಟಿ ಜಾರಿಯಿಂದಾಗಿ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಸಂಗ್ರಹದ ಮೇಲೆ ಪರಿಣಾಮ ಬೀರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತೆರಿಗೆ ಸಂಗ್ರಹ ಮಾಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜಿಎಸ್‌ಟಿ ಜಾರಿಯಿಂದಾಗಿ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಸಂಗ್ರದ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಸುಪ್ರೀಂಕೋರ್ಟ್ ಆದೇಶದಂತೆ ಹೆದ್ದಾರಿ ಬದಿಯಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಿದ ಪರಿಣಾಮವಾಗಿ ಅಬಕಾರಿ ತೆರಿಗೆ ಸಂಗ್ರಹ ಪ್ರಮಾಣವು ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಜಾರ್ಜ್ ರಾಜೀನಾಮೆ ಇಲ್ಲ:
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ತನಿಖೆ ನಡೆಯಲಿ. ಕೇಂದ್ರ ಸಚಿವರ ವಿರುದ್ಧವು ತನಿಖೆ ನಡೆಯುತ್ತಿದೆ. ಅವರೆಲ್ಲರೂ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆಯೆ? ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಡಿವೈಎಸ್ಪಿ ಗಣಪತಿ ಯಾಕೆ ತೀರಿಕೊಂಡರು ಎಂದು ತನಿಖೆ ನಡೆಸಿ, ವರದಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅದಕ್ಕೆ ಜಾರ್ಜ್ ಯಾಕೆ ರಾಜೀನಾಮೆ ನೀಡಬೇಕು
-ಸಿದ್ದರಾಮಯ್ಯ ಮುಖ್ಯಮಂತ್ರಿ







