Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಯವ ಕೃಷಿಯ ಮೂಲಕ ರೈತರು ಹಸಿರು...

ಸಾವಯವ ಕೃಷಿಯ ಮೂಲಕ ರೈತರು ಹಸಿರು ಕ್ರಾಂತಿಗೆ ಮುಂದಾಗಬೇಕು: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ5 Sept 2017 9:43 PM IST
share
ಸಾವಯವ ಕೃಷಿಯ ಮೂಲಕ ರೈತರು ಹಸಿರು ಕ್ರಾಂತಿಗೆ ಮುಂದಾಗಬೇಕು: ಶೋಭಾ ಕರಂದ್ಲಾಜೆ

ಮೂಡಿಗೆರೆ, ಸೆ.5: ಭಾರತದಲ್ಲಿ ಆಹಾರ ಉತ್ಪಾದನೆ ಕಡಿಮೆಯಾಗಿದ್ದರಿಂದ ವಿದೇಶಗಳಿಂದ ಕೊಳೆತ ಆಹಾರಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಇವುಗಳನ್ನು ಕೊನೆಗೊಳಿಸುವ ಹಸಿರು ಕ್ರಾಂತಿಗಾಗಿ ಪಣ ತೊಡಲು ಭಾರತೀಯ ರೈತರು ಸಿದ್ಧರಾಗಬೇಕು. ಅದಕ್ಕಾಗಿ ಆಯಾ ರಾಜ್ಯ ಸರಕಾರಗಳು ಬಿತ್ತನೆ ಬೀಜ ಸಹಿತ ಅಗತ್ಯ ಸಲಕರಣೆಗಳನ್ನು ರೈತರಿಗೆ ಒದಗಿಸಬೇಕೆಂದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಪಟ್ಟಣದ ರೈತ ಭವನದಲ್ಲಿ ಮಂಗಳವಾರ ಕೃಷಿ ಮತ್ತು ತೋಟಗಾರಿಕ ವಿಶ್ವ ವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ನಡೆದ ಸಂಕಲ್ಪದಿಂದ ಸಿದ್ಧಿ, ನ್ಯೂ ಇಂಡಿಯಾ ಮಂಥನ್ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರೆಲ್ಲರೂ ಹಸಿರು ಕ್ರಾಂತಿಗಾಗಿ ಸಾವಯವ ಗೊಬ್ಬರವನ್ನು ಬಳಸುವುದು ಅಗತ್ಯವಿದೆ. ರಾಸಾಯನಿಕ ಗೊಬ್ಬರಗಳಿಂದ ಭೂಮಿ ವಿಷಕಾರಿಯಾಗಿದೆ. ಅಲ್ಲಿ ಬೆಳೆಯುವ ತರಕಾರಿ ಸಹಿತಿ ವಿವಿಧ ಬೆಳೆಗಳು ವಿಷಯುಕ್ತವಾಗಿದೆ. ಆದ್ದರಿಂದ ಸಾವಯವ ಕೃಷಿಯ ಮೂಲಕ ರೈತರು ಹಂತ ಹಂತವಾಗಿ ಹಸಿರು ಕ್ರಾಂತಿಗೆ ಮುಂದಾಗಬೇಕು ಎಂದು ಕರೆ ನೀಡಿದರು. 

ಶಾಸಕ ಬಿ.ಬಿ.ನಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಆತ್ಮಹತ್ಯಗೆ ಶರಣಾಗುವುದಕ್ಕೆ ಕಾರಣವೇನೆಂಬುದನ್ನು ಮೊದಲು ಅರಿತುಕೊಳ್ಳುವ ಕೆಲಸ ಸರಕಾರದಿಂದಾಗಬೇಕು. ಸಾವನ್ನಪ್ಪಿದ ರೈತರ ಜೀವಕ್ಕೆ 5 ಲಕ್ಷದಂತೆ ಪರಿಹಾರ ನಿಗದಿಗೊಳಿಸಿದ್ದರೆ ಅದು ಮೂರ್ಖತನವಾಗುತ್ತದೆ. ರೈತನ ಜೀವಕ್ಕೆ ಬೆಲೆ ನಿಗದಿಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ರೈತರು ಆಕಸ್ಮಿಕವಾಗಿ ಸಾವನ್ನಪ್ಪಿದರೆ ರೈತ ಸಂಜೀವಿನಿಯಂತಹ ಯೋಜನೆಗಳು ರೈತರನ್ನು ಸಂತೃಪ್ತಿಗೊಳಿಸುವುದು ಅಸಾಧ್ಯ. ಕೃಷಿಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪ ಭಾವನೆ ಹೊಂದುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಎಂಎಲ್‍ಸಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಹವಮಾನ ವೈಪರ್ಯತ್ಯದಿಂದ ರೈತರು ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಕಾರ್ಯಕ್ರಮಗಳಲ್ಲಿ ಮಾತ್ರ ಸಂಕಲ್ಪ ಮಾಡುವುದಾದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಸಂಕಲ್ಪವನ್ನು ಕಾರ್ಯರೂಪಕ್ಕೆ ತಂದರೆ ಮಾತ್ರ ಅದು ಪ್ರಯೋಜನವಾಗುತ್ತದೆ. ಭಾರತ ಕೃಷಿ ಪ್ರಧಾನ ದೇಶದಲ್ಲಿ ಕೃಷಿಗೆ ಹೆಚ್ಚು ಆಧ್ಯತೆ ನೀಡಬೇಕಾಗಿದೆ. ಈ ದೇಶ ಮುಂದುವರೆಯಬೇಕೆಂದರೆ ಒಬ್ಬ ವ್ಯಕ್ತಿಯಿಂದ ಮಾತ್ರ ಸಾಧ್ಯವಿಲ್ಲ. ಆದ್ದರಿಂದ ಸಾಮೂಹಿಕ ಕೃಷಿಯ ಮೂಲಕ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯವ ಕೆಲಸ ರೈತರಿಂದಾಗಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿ.ವಿ ಕುಲಪತಿ ಡಾ.ಪಿ.ನಾರಾಯಣ ಸ್ವಾಮಿ ವಹಿಸಿದ್ದರು. 
ಜಿಪಂ ಅಧ್ಯಕ್ಷೆ ಚೈತ್ರಶ್ರಿ, ತಾಪಂ ಅಧ್ಯಕ್ಷ ಕೆ.ಸಿ.ರತನ್, ಜಿಪಂ ಸದಸ್ಯ ಶಾಮಣ್ಣ, ತಾಪಂ ಭಾರತಿ ರವೀಂದ್ರ, ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಬಿ.ಎಸ್.ಜಯರಾಂ, ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ಅಶೋಕ್ ಕುಮಾರ್, ವಿಸ್ತರಣ ನಿರ್ದೇಶಕ ಡಾ.ಟಿ.ಹೆಚ್.ಗೌಡ, ಕಾಫಿ ಬೆಳೆಗಾರ ಕಲ್ಲೇಶ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X