ಅಕ್ರಮ ಗಾಂಜಾ ಮಾರಾಟ: ಇಬ್ಬರು ಆಯೋಪಿಗಳು ಬಂಧನ

ಬೆಂಗಳೂರು, ಸೆ. 5: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಶ್ರೀರಾಂಪುರದ ಠಾಣಾ ಪೊಲೀಸರು, 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ಕೆಪಿ ಅಗ್ರಹಾರದ ನಾರಾಯಣ (34), ತಮಿಳುನಾಡಿನ ಡೆಂಕಣಿಕೋಟೆಯ ಆನಂದ್(44) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಪಿಎಫ್ ರಸ್ತೆಯ ಅಮ್ಮಾ ನಾಗಮ್ಮ ದೇವಸ್ಥಾನದ ಬಳಿ ಗಾಂಜಾ ಪ್ಯಾಕೆಟ್‌ಗಳನ್ನು ಹಿಡಿದುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಕಾರ್ಯಾಚರಣೆ ನಡೆಸಿ ಬಂಧಿಸಿ, 4.5 ಲಕ್ಷ ರೂ. ಮೌಲ್ಯದ 15 ಕೆಜಿ ಗಾಂಜಾ, ಬೈಕ್ ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Next Story





