Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾರಾಯಣಗುರುಗಳ ಆದರ್ಶ ಯುವಜನತೆಗೆ ಮಾದರಿ...

ನಾರಾಯಣಗುರುಗಳ ಆದರ್ಶ ಯುವಜನತೆಗೆ ಮಾದರಿ : ಅಭಯಚಂದ್ರ

ಮೂಡುಬಿದಿರೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Sept 2017 7:54 PM IST
share
ನಾರಾಯಣಗುರುಗಳ ಆದರ್ಶ ಯುವಜನತೆಗೆ ಮಾದರಿ : ಅಭಯಚಂದ್ರ

ಮೂಡುಬಿದಿರೆ,ಸೆ.6: ನಾರಾಯಣಗುರುಗಳ ಸಂದೇಶಗಳು ಸಮಾಜದಲ್ಲಿ ಎಲ್ಲೆಡೆ ಹರಡಿ ಶಾಂತಿಯುತ ಸಮಾಜಕ್ಕೆ ಅದು ಮುನ್ನುಡಿಯಾಗಬೇಕು. ಶಿಕ್ಷಣದ ಮಹತ್ವವನ್ನು ಅಂದೇ ವಿವರಿಸಿರುವ ಅವರ ತತ್ವಸಿದ್ಧಾಂತಗಳು ಈ ಕಾಲದಲ್ಲೂ ಪ್ರಸ್ತುತವೆನಿಸುತ್ತದೆ. ಶೈಕ್ಷಣಿಕ ಅಭಿವೃದ್ಧಿಯಿಂದ ಸಮಾಜದಲ್ಲಿ ಸಮಾನತೆ ಕಂಡುಕೊಳ್ಳಬಹುದು ಎಂಬುದನ್ನು ಸಾಬೀತುಪಡಿಸಿರುವ ಗುರುಗಳು ಇಂದಿನ ಯುವಜನತೆಗೆ ಆದರ್ಶರಾಗಿದ್ದಾರೆ. ಪುಣ್ಯ ಪುರುಷರ ಜಯಂತಿಯನ್ನು ರಾಜ್ಯ ಸರ್ಕಾರವೇ ಆಚರಿಸುತ್ತಿರುವುದು ಅವರಿಗೆ ನೀಡುತ್ತಿರುವ ನಿಜವಾದ ಗೌರವವಾಗಿದೆ ಎಂದು ಶಾಸಕ ಕೆ.ಅಭಯಚಂದ್ರ ಜೈನ್ ಹೇಳಿದರು. 

ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಬುಧವಾರ ಸಂಘದ ಸಭಾಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನಾಚರಣೆ ಹಾಗೂ ನಾರಾಯಣಗುರುಗಳ ಮೂರ್ತಿ ಪ್ರತಿಷ್ಠಾಪನೆಯ 31ನೇ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಸಂಘದ ಕಾಮಧೇನು ಸಭಾಭವನಕ್ಕೆ ರಾಜ್ಯ ಸರ್ಕಾರದಿಂದ 20 ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಶ್ರಮಿಸಿದ ಕೆ.ಅಭಯಚಂದ್ರ ಜೈನ್ ಅವರಿಗೆ ಅಭಿನಂದನೆ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಿಪ್‍ಅಪ್ ಡಾನ್ಸರ್ ಅವಿನಾಶ್ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಗಮದ ಸದಸ್ಯರಾಗಿ ಆಯ್ಕೆಯಾದ ಚಂದ್ರಹಾಸ ಸನಿಲ್ ಅವರನ್ನು ಗೌರವಿಸಲಾಯಿತು. 

ಹೊಲಿಗೆ ತರಬೇತಿ ಪಡೆದವರ ಅರ್ಹತಾ ಪತ್ರವನ್ನು ತರಬೇತುದಾರರಾದ ವನಿತಾ ಸ್ವೀಕರಿಸಿದರು. ಬಿಲ್ಲವ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಾರಾಯಣಗುರು ಸೇವಾದಳದ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾಮದೇನು ಸಮುದಾಯ ಭವನ ನಿರ್ಮಾನಕ್ಕೆ ನೆರವು ನೀಡಿದ ದಾನಿಗಳನ್ನು ಗೌರವಿಸಲಾಯಿತು. 

ಸೇವಾ ಸಂಘದ ಅಧ್ಯಕ್ಷ ರವೀಂದ್ರ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜನಪದ ವಿದ್ವಾಂಸ ಪ್ರೊ.ಗಣೇಶ್ ಅಮೀನ್ ಸಂಕಮಾರು, ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಮೂಡುಬಿದಿರೆ ವಲಯ ಅರಣ್ಯಾಧಿಕಾರಿ ಪ್ರಕಾಶ್ ಪೂಜಾರಿ ಮುಖ್ಯ ಅತಿಥಿಯಾಗಿದ್ದರು. 

ನಾರಾಯಣ ಗುರು ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಗೋಪಿನಾಥ್, ಸೇವಾದಳ ಅಧ್ಯಕ್ಷ ರಮೇಶ್ ಅಮೀನ್, ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಸದಾನಂದ ಬಿ.ಪೂಜಾರಿ, ಕೋಶಾಧಿಕಾರಿ ರವೀಂದ್ರ ಕರ್ಕೇರ, ಕ್ರೀಡಾ ಕಾರ್ಯದರ್ಶಿ ವಸಂತ ಸುವರ್ಣ, ಉಪಾಧ್ಯಕ್ಷರಾದ ವಾಸು ಪೂಜಾರಿ, ತುಕರಾಂ ಬಂಗೇರ, ಜೊತೆ ಕಾರ್ಯದರ್ಶಿಗಳಾದ ಗಿರೀಶ್ ಕುಮಾರ್ ಹಂಡೇಲು, ಶಶಿಧರ್ ಎಸ್.ಅಂಚನ್ ಎನಿಕ್ರಿಪಲ್ಲ, ಲೆಕ್ಕ ಪರಿಶೋಧಕ ಜಗದೀಶ್ ಪೂಜಾರಿ ಮಿಜಾರು, ಭಜನಾ ಸಮಿತಿ ಸಂಚಾಲಕ ಪ್ರಕಾಶ್ ಅಮೀನ್ ಉಪಸ್ಥಿತರಿದ್ದರು. 

ಆಡಳಿತ ಮಂಡಳಿಯ ಸದಸ್ಯರಾದ ಚಂದ್ರ ಕೆ.ಎಚ್ ಸ್ವಾಗತಿಸಿದರು. ಸುರೇಶ್ ಕೋಟ್ಯಾನ್, ದಿನೇಶ್ ಪೂಜಾರಿ ಸನ್ಮಾನ ಪತ್ರ ವಾಚಿಸಿದರು. ಇನ್ನೋರ್ವ ಸದಸ್ಯ ರೋಹನ್ ಅತಿಕಾರಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಪ್ರವೀಶ್ ವಿದ್ಯಾರ್ಥಿವೇತನ ಪಡೆದವರ ವಿವರ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X