Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೈಕ್ಷಣಿಕ ಸಮಸ್ಯೆ ಬಗೆಹರಿಸಲು...

ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ವಿಧಾನಪರಿಷತ್ ಸದಸ್ಯರ ಧರಣಿ

ವಾರ್ತಾಭಾರತಿವಾರ್ತಾಭಾರತಿ6 Sept 2017 8:29 PM IST
share

ಬೆಂಗಳೂರು, ಸೆ.6: ರಾಜ್ಯದಲ್ಲಿನ ಶಿಕ್ಷಕರು ಹಾಗೂ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರಗಳನ್ನು ಪ್ರತಿನಿಧಿಸುವ ಬಿಜೆಪಿ ಹಾಗೂ ಜೆಡಿಎಸ್‌ನ ವಿಧಾನಪರಿಷತ್ ಸದಸ್ಯರು ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯೆಯಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಬುಧವಾರ ಧರಣಿ ಆರಂಭಿಸಿದ್ದಾರೆ.

ಶಿಕ್ಷಕರು, ಉಪನ್ಯಾಸಕರು, ಶಾಲಾ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಸರಕಾರದ ಮುಂದೆ ಬೇಡಿಕೆ ಇಟ್ಟಿರುವ ವಿಧಾನಪರಿಷತ್ ಸದಸ್ಯರು ಧರಣಿ ಆರಂಭಿಸಿದ್ದಾರೆ. ಇದಕ್ಕೂ ಮುನ್ನ ಪತ್ರಕರ್ತೆ ಗೌರಿ ಲಂಕೇಶ್ ನಿಧನಕ್ಕೆ ಧರಣಿ ಸ್ಥಳದಲ್ಲೇ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪ್ರಮುಖ ಬೇಡಿಕೆಗಳು: ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರಕಾರಿ ಶಿಕ್ಷಕ, ಉಪನ್ಯಾಸಕರ ಪದೋನ್ನತಿ ಕಾರ್ಯವನ್ನು ಸರಳೀಕರಣಗೊಳಿಸಬೇಕು. ಭಡ್ತಿ ಶಿಕ್ಷಕರ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

1995ರ ನಂತರ ಆರಂಭವಾದ ಅನುದಾನ ರಹಿತ ಶಾಲಾ-ಕಾಲೇಜುಗಳನ್ನು ಸರಕಾರ ಅನುದಾನ ವ್ಯಾಪ್ತಿಗೆ ಒಳಪಡಿಸಬೇಕು. ಶಿಕ್ಷಕರು ಹಾಗೂ ಉಪನ್ಯಾಸಕರ ವೇತನ ತಾರತಮ್ಯವನ್ನು ನಿವಾರಿಸಬೇಕು. ವಿಭಜಿತ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸರಕಾರವನ್ನು ಅವರು ಒತ್ತಾಯಿಸಿದರು.

ಭಡ್ತಿ ಶಿಕ್ಷಕರ ವೇತನ ಭಡ್ತಿಯನ್ನು ಕಾಲಕಾಲಕ್ಕೆ ನೀಡಬೇಕು. ಶಿಕ್ಷಕರು ಹಾಗೂ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಸಕಾಲಕ್ಕೆ ಮಾಡಬೇಕು. 1987ರಿಂದ 1995ರ ಅವಧಿಯಲ್ಲಿನ ಬಾಕಿ ಉಳಿದಿರುವ ಶಾಲಾ ಕಾಲೇಜುಗಳನ್ನು ಆದಷ್ಟು ತ್ವರಿತವಾಗಿ ಅನುದಾನಕ್ಕೆ ಒಳಪಡಿಸಬೇಕು. ಅಲ್ಲದೆ, ಅನುದಾನಿತ ಹಾಗೂ ಅನುದಾನರಹಿತ ಶಾಲಾ ಶಿಕ್ಷಕರಿಗೆ ಆರೋಗ್ಯ ಸೌಲಭ್ಯ ಒದಗಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಬೋಧಕೇತರ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳುವ ಪದ್ಧತಿಯನ್ನು ಕೈ ಬಿಡಬೇಕು. ಖಾಸಗಿ ಹಾಗೂ ಸರಕಾರಿ ಶಾಲಾ ಶಿಕ್ಷಕರ ಮಧ್ಯೆ ಇರುವ ತಾರತಮ್ಯವನ್ನು ನಿವಾರಿಸಬೇಕು. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದಲ್ಲದೆ, ವೇತನವನ್ನು ಹೆಚ್ಚಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಧರಣಿಯಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಸದಸ್ಯರಾದ ಬಸವರಾಜ ಹೊರಟ್ಟಿ, ರಮೇಶ್‌ಬಾಬು, ಅರುಣ್‌ಶಹಾಪುರ, ಹನುಮಂತಪ್ಪ ನಿರಾಣಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಚೌಡಾರೆಡ್ಡಿ ತೂಪಲ್ಲಿ, ರಮೇಶ್‌ಬಾಬು, ಪುಟ್ಟಣ್ಣ, ಟಿ.ಎ.ಶರವಣ, ಶ್ರೀಕಂಠೇಗೌಡ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X