Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಗೌರಿ ಲಂಕೇಶ್ ಹತ್ಯೆ ಖಂಡಿಸಿ...

ದಾವಣಗೆರೆ: ಗೌರಿ ಲಂಕೇಶ್ ಹತ್ಯೆ ಖಂಡಿಸಿ ವಿವಿಧೆಡೆ ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Sept 2017 9:37 PM IST
share
ದಾವಣಗೆರೆ: ಗೌರಿ ಲಂಕೇಶ್ ಹತ್ಯೆ ಖಂಡಿಸಿ ವಿವಿಧೆಡೆ ಪ್ರಗತಿಪರ ಸಂಘಟನೆಯಿಂದ ಪ್ರತಿಭಟನೆ

ದಾವಣಗೆರೆ, ಸೆ.6: ಹಿರಿಯ ಪತ್ರಕರ್ತೆ, ಸಾಹಿತಿ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಜಿಲ್ಲಾದ್ಯಂತ ವಿವಿಧ ಸಂಘ, ಸಂಸ್ಥೆ, ಶಾಲಾ ಕಾಲೇಜು, ಸಂಘಟನೆಗಳು  ಪ್ರತಿಭಟನೆ ನಡೆಸಿಆಕ್ರೋಶ ವ್ಯಕ್ತಪಡಿಸಿದವು.

ಸಿಪಿಐ, ಸಿಪಿಐಎಂ, ಕೋಮುಸೌಹಾರ್ದ ವೇದಿಕೆ, ಡಿಎಸ್‍ಎಸ್, ಜಿಲ್ಲಾ ವರದಿಗಾರರ ಕೂಟ, ಕೆವಿಎಸ್,  ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ, ಮಾನವ ಬಂಧುತ್ವ ವೇದಿಕೆ, ಎಐಎಸ್‍ಎಫ್, ಎಐಡಿಎಸ್‍ಒ, ರೈತ ಸಂಘಟನೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಅಖಿಲ ಭಾರತ ಸಾಂಸ್ಕೃತಿಕ ಮಹಿಳಾ ಸಂಘಟನೆ, ಪತ್ರಿಕೋದ್ಯಮ ವಿದ್ಯಾರ್ಥಿಗಳು, ಬೀಡಿ ಕಾರ್ಮಿಕರ ಸಂಘ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ರಾಜ್ಯ ಪತ್ರಕರ್ತರ ಸಂಘ ಎಸ್‍ಐಒ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಈ ಕೂಡಲೇ ಹಂತಕರ ಬಂಧನ ಮಾಡುವಂತೆ ಆಗ್ರಹಿಸಿದ್ದಲ್ಲದೇ, ಪತ್ರಕರ್ತೆ ಗೌರಿ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು.

ಸಿಪಿಐನಿಂದ ಪ್ರತಿಭಟನೆ: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಿಪಿಐ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ಮೂಲಭೂತವಾದಿಗಳ ಬಗ್ಗೆ ಪ್ರಗತಿಪರರು ಜಾಗೃತಿ ವಹಿಸಬೇಕು. ಕಲಾವಿದರು, ಪ್ರಗತಿಪರ ಚಿಂತಕರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುತ್ತಿರುವುದು ಖಂಡನೀಯ. ಪೆನ್ಸಾರೆ, ದಾಭೋಲ್ಕರ್, ಎಂ.ಎಂ. ಕಲಬುರ್ಗಿ, ಈಗ ಗೌರಿಲಂಕೇಶ್ ಅವರನ್ನು ಹತ್ಯೆ ಮಾಡುವ ಮೂಲಕ ಪ್ರಗತಿಪರರನ್ನು ಎದುರಿಸುವ ಕಾರ್ಯವನ್ನು ಕೋಮುವಾದಿಗಳು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕೋಮು ಸೌಹಾರ್ದ ವೇದಿಕೆ: ಮುಖಂಡ ಅನಿಷ್ ಪಾಷಾ ಮಾತನಾಡಿ, ಗೌರಿ ಲಂಕೇಶ್ ಹತ್ಯೆ ಪ್ರಜಾಪ್ರಭುತ್ವದ ಕಗ್ಗೋಲೆಯಾಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದರು. ಸತ್ಯ ನುಡಿಯುವವರನ್ನು ಹತ್ಯೆಗೈಯುವ ಕಾರ್ಯವಾಗುತ್ತಿರುವುದು ನಮ್ಮ ದುರಂತ. ಈ ಕೂಡಲೇ ಸರ್ಕಾರ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ: ಸಂಘಟನೆ ಮುಖಂಡ ಟಾರ್ಗೆ ಅಸ್ಲಂ ಮಾತನಾಡಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ನಮ್ಮ ವೇದಿಕೆ  ತೀವ್ರವಾಗಿ ಖಂಡಿಸುತ್ತದೆ. ಗೌರಿ ಲಂಕೇಶ್ ಅವರ ಹತ್ಯೆ ಅತ್ಯಂತ ಹೇಯ ಕೃತ್ಯ, ಈ ಬಗ್ಗೆ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಮುಖ್ಯಮಂತ್ರಿಗಳು ಸೂಚಿಸಬೇಕೆಂದು ಆಗ್ರಹಿಸಿದರು.

ರೈತ ಸಂಘಟನೆ: ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, ಗೌರಿ ಲಂಕೇಶ್ ಅವರ ಹತ್ಯೆ ಖಂಡನೀಯ. ಅವರ ವಿಚಾರವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದಕ್ಕೆ ವಿಚಾರ ಪರವಾದ ಹೋರಾಟಗಳೇ ಸಾಕ್ಷಿಯಾಗಿವೆ. ಇದು ವಿಚಾರ ಹಿಂದಿನ ಮತ್ತು ವಿಚಾರ ಹತ್ತಿಕ್ಕುವ ಪ್ರಯತ್ನವಾಗಿದೆ. ರಾಜ್ಯ, ಕೇಂದ್ರ ಸರಕಾರಗಳು ಪರಸ್ಪರ ರಾಜಕೀಯ ಲಾಭಕ್ಕೆ ಈ ಹತ್ಯೆಯನ್ನು ಉಪಯೋಗಿಸಿಕೊಳ್ಳದೆ, ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವ ಮೂಲಕ ಸಂವಿಧಾನ ಪರವಾಗಿದ್ದೇವೆಂದು ತೋರಿಸಬೇಕೆಂದು ಅವರು ಆಗ್ರಹಿಸಿದರು.

ಪತ್ರಕರ್ತ ಬಿ.ಎನ್. ಮಲ್ಲೇಶ್ ಮಾತನಾಡಿ, ಪ್ರಗತಿಪರರನ್ನು  ಗುರಿ ಮಾಡಿ ಹತ್ಯೆ ಮಾಡುತ್ತಿರುವುದು ಖಂಡನೀಯ. ಭಿನ್ನಾಭಿಪ್ರಾಯಗಳು ಏನೇ ಇದ್ದರು ಈ ರೀತಿಯ ಹತ್ಯೆ ಸರಿಯಲ್ಲ. ಗೌರಿ ಲಂಕೇಶ್ ಸೇರಿದಂತೆ ಪ್ರಗತಿಪರರ ಹತ್ಯೆಯ ಬಗ್ಗೆ ವಿಶೇಷ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ವಿವಿಯಲ್ಲಿ ಪ್ರತಿಭಟನೆ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪತ್ರಕರ್ತರಿಗೆ ರಕ್ಷಣೆ ನೀಡಬೇಕು, ಗೌರಿ ಅವರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.

ವರದಿಗಾರರ ಕೂಟದಿಂದ:  ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಜಿಲ್ಲಾ ವರದಿಗಾರರ ಕೂಟ  ಬೈಕ್ ರ್ಯಾಲಿ ಮೂಲಕ ಎಸಿ ಕಚೇರಿ ತಲುಪಿ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಬಸವರಾಜ್ ದೊಡ್ಡಮನಿ ಮಾತನಾಡಿ, ಗೌರಿ ಲಂಕೇಶ್ ಅವರ ಸಾವು ನಾಡಿನ ಎಲ್ಲಾ ಪತ್ರಕರ್ತರು, ಸಾಹಿತಿಗಳು, ವಿಚಾರವಾದಿಗಳು ಹಾಗೂ ಪ್ರಗತಿಪರರಲ್ಲಿ ಒಂದು ರೀತಿಯ ಆತಂಕವನ್ನುಂಟು ಮಾಡಿದೆ. ಸರ್ಕಾರ ಶೀಘ್ರವೇ ಹಂತಕರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದರು.

ಹಿರಿಯ ಪತ್ರಕರ್ತ ಸದಾನಂದ ಹೆಗಡೆ ಮಾತನಾಡಿ, ಗೌರಿ ಲಂಕೇಶ್ ಓರ್ವ ದಿಟ್ಟ ಮಹಿಳೆಯಾಗಿದ್ದರು. ನೇರ ಹಾಗೂ ದಿಟ್ಟತನಕ್ಕೆ ಹೆಸರಾಗಿದ್ದ ಅವರು ವೃತ್ತಿಯಲ್ಲಿ ಎಂದು ಹೊಂದಾಣಿಕೆ ಮಾಡಿಕೊಂಡವರಲ್ಲ. ಇಂದು ಅವರ ಹತ್ಯೆ ನಾಗರೀಕ ಸಮಾಜ ತಲೆತಗ್ಗಿಸುವಂತಹುದು. ಇದರಿಂದ ಪತ್ರಕರ್ತರಿಗೆ ಭದ್ರತೆಯೇ ಇಲ್ಲದಂತಾಗಿದೆ ಎಂದರು.

ಕೂಟದ ಪ್ರಧಾನ ಕಾರ್ಯದರ್ಶಿ ಬಿ.ಬಿ. ಮಲ್ಲೇಶ್, ಹಿರಿಯ ಉಪಾಧ್ಯಕ್ಷರುಗಳಾದ ನಟರಾಜ್, ಶಶಿಕುಮಾರ್, ಬಕ್ಕೇಶ್ ನಾಗನೂರು, ದೇವಿಕಾ ಸುನೀಲ್ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಪಾಲಿಕೆ ಸದಸ್ಯ ಎಚ್.ಜಿ. ಉಮೇಶ್, ಆಲೂರು ನಾಗರಾಜ್, ಮಂಜುನಾಥ ಕೈದಾಳೆ, ಹೆಗ್ಗೆರೆ ರಂಗಪ್ಪ, ಮಳ್ಳೆಕಟ್ಟೆ ಪರುಶರಾಮ್, ಎಚ್.ಸಿ.ಮಲ್ಲೇಶಪ್ಪ, ವಾಸು ದೇವ್, ಬಸವರಾಜ್, ಬಲ್ಲೂರ ರವಿಕುಮಾರ್, ರಾಜ್ ಸಾಬ್, ಐರಣಿ ಚಂದ್ರು, ಹನುಮಂತಪ್ಪ, ಸೈಯದ್ ಇಸ್ಮಾಯೀಲ್, ವಿಜಯಕುಮಾರ್, ಉಷಾ ಕೈಲಾಸದ್, ಸತೀಶ್ ಅರವಿಂದ್, ರಘು ದೊಡ್ಡಮನಿ, ಎಲ್. ಲಕ್ಷ್ಮಿನಾರಾಯಣ್ ಭಟ್, ಸಿದ್ದರಾಮಣ್ಣ, ಮಂಜುನಾಥ ಕುಕ್ಕುವಾಡ್, ಬಾನುಶ್ರೀ, ಉಷಾ ಎಸ್. ಕೈಲಾಸದ್, ಭಾರತಿ, ಜ್ಯೋತಿ ಕುಕ್ಕವಾಡ, ತುರುವನೂರು ಅಹ್ಮದ್ ಷರೀಫ್, ಡಿ.ಬಿ. ಮಂಜುನಾಥ್, ಯು.ಎನ್. ಮಂಜುನಾಥ್ ಆವರಗೆರೆ, ಎಂ. ರಾಜ್‍ಕುಮಾರ್, ಬಸವರಾಜ್ ನೀರ್ಥಡಿ, ಗಿರಿಜಮ್ಮ ಮತ್ತಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X