ಗೌರಿ ಹತ್ಯೆ ಖಂಡಿಸಿ ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಟನೆ

ಮಡಿಕೇರಿ, ಸೆ.6 : ಗೌರಿ ಲಂಕೇಶ್ ಹತ್ಯೆ ಖಂಡಿಸಿ ಜಿಲ್ಲೆಯ ಪತ್ರಕರ್ತರು ಬುಧವಾರ ಗಾಂಧಿ ಪ್ರತಿಮೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಿತು.
50ಕ್ಕೂ ಹೆಚ್ಚು ಪತ್ರಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಗಾಂಧಿ ಪ್ರತಿಮೆ ಎದುರು ಒಂದು ನಿಮಿಷ ಮೌನಾಚರಿಸಲಾಯಿತು.
ಹಂತಕರು ಹಾಗೂ ಸೂತ್ರದಾರರನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಆರ್.ವಿ. ಡಿಸೋಜ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಸಂಘಟನೆಗಳಿಂದ ಲಿಖಿತ ಮನವಿ ಪತ್ರ ಸಲ್ಲಿಸಲಾಯಿತು. ಗೌರಿ ಲಂಕೇಶ್ ಹತ್ಯೆ ತನಗೂ ವೈಯುಕ್ತಿಕವಾಗಿ ಬೇಸರವುಂಟು ಮಾಡಿದ್ದು, ತಮ್ಮ ಬೇಡಿಕೆಯ ಮನವಿ ಪತ್ರವನ್ನು ಸರ್ಕಾರಕ್ಕೆ ತಲುಪಿಸಲಾಗುವುದು. ಹಂತಕರ ಬಂಧನ ತಕ್ಷಣ ಆಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ವಿ. ಡಿಸೋಜ ಹೇಳಿದರು.
ಗೌರಿ ಲಂಕೇಶ್ ಹತ್ಯೆ ಖಂಡನೀಯ. ತಕ್ಷಣ ಸರ್ಕಾರ ಹಂತಕರನ್ನು ಬಂಧಿಸಿ, ಕಾನೂನಿನ್ವಯ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆ ಮೂಲಕ ಹಂತಕರು ಮತ್ತು ಹಂತಕರ ಹಿಂದಿರುವ ಶಕ್ತಿಗೆ ಸಂದೇಶ ರವಾನಿಸಬೇಕು. ಹತ್ಯೆ ಮೂಲಕ ವಿಚಾರಧಾರೆಗಳನ್ನು ಹತ್ತಿಕ್ಕಲು ಸಾಧ್ಯವೇ ಇಲ್ಲ. ಪತ್ರಕರ್ತರ ಧ್ವನಿ ಅಡಗಿಸುವ ಪ್ರಯತ್ನಕ್ಕೆ ಕೊನೆಗಾಣಿಸಬೇಕೆಂದು ಪತ್ರಕರ್ತರು ಆಗ್ರಹಿಸಿದರು.
ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರನ್ನುದ್ದೇಶಿಸಿ ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಾಜಿ ಅಧ್ಯಕ್ಷರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಚಿ.ನಾ. ಸೋಮೇಶ್, ಹಾಲಿ ಖಜಾಂಚಿ ಸವಿತಾ ರೈ, ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯ ಬಿ.ಎಸ್. ಲೋಕೇಶ್‍ಸಾಗರ್, ರಾಜ್ಯ ಸಂಘದ ನಿರ್ದೇಶಕ ಎಸ್.ಎ. ಮುರಳೀಧರ್, ಮಾಜಿ ನಿರ್ದೇಶಕ ಎಸ್. ಮಹೇಶ್, ಕೊಡಗು ಪ್ರೆಸ್‍ಕ್ಲಬ್ ಮಾಜಿ ಅಧ್ಯಕ್ಷ ಎಚ್.ಟಿ. ಅನಿಲ್, ಹಾಲಿ ಪ್ರಧಾನ ಕಾರ್ಯದರ್ಶಿ ಕೆ.ಬಿ. ಮಂಜುನಾಥ್, ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್, ಐತಿಚಂಡ ರಮೇಶ್ ಉತ್ತಪ್ಪ, ಅಲ್ಲಾರಂಡ ವಿಠಲ್ ನಂಜಪ್ಪ, ಜಯಪ್ಪ ಹಾನಗಲ್, ಯುವ ಪತ್ರಕರ್ತ ಪ್ರಜ್ವಲ್ ಮಾತನಾಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಪತ್ರಕರ್ತರ ಸಂಘ ನಿರ್ದೇಶಕ ಬಾಚರಣಿಯಂಡ ಅನು ಕಾರ್ಯಪ್ಪ, ಜಿಲ್ಲಾ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್, ಉಪಾಧ್ಯಕ್ಷ ಜಿ.ವಿ. ರವಿಕುಮಾರ್, ನಿರ್ದೇಶಕರಾದ ಆನಂದ ಕೊಡಗು, ಉಜ್ವಲ್ ರಂಜಿತ್, ಅರುಣ್ ಕೂರ್ಗ್, ಟಿ.ಕೆ. ಸಂತೋಷ್, ಸುವರ್ಣ ಮಂಜು, ಕೊಡಗು ಪ್ರೆಸ್‍ಕ್ಲಬ್ ಜಂಟಿ ಕಾರ್ಯದರ್ಶಿ ವಿಘ್ನೇಶ್ ಭೂತನಕಾಡು, ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಸಿ.ದಿನೇಶ್, ಮಾಜಿ ಉಪಾಧ್ಯಕ್ಷ ಕಾಯಪಂಡ ಶಶಿ ಸೋಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.







