ಯಕ್ಷಗಾನ ಕಲಾವಿದ ಉಮೇಶ ಶೆಟ್ಟರಿಗೆ ಬಂಟಪ್ರತಿಷ್ಠಾನ ಪ್ರಶಸ್ತಿ ಪ್ರದಾನ

ಮಂಗಳೂರು,ಸೆ.6 : ಜಾಗತಿಕ ಬಂಟ ಪ್ರತಿಷ್ಠಾನವು ಡಾ.ಡಿ.ಕೆ.ಚೌಟ ದತ್ತಿನಿಧಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ಪ್ರಶಸ್ತಿಯು ಧರ್ಮಸ್ಥಳ ಮೇಳದ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅವರಿಗೆ ಲಭಿಸಿದೆ.ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಇತ್ತೀಚೆಗೆ ಜರಗಿದ ಜಾಗತಿಕ ಬಂಟ ಪ್ರತಿಷ್ಠಾನದ 16 ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಸಚ್ಚಿದಾನಂದ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು.
ನಿಕಟಪೂರ್ವ ಅಧ್ಯಕ್ಷ ಡಾ.ಎಂ. ಶಾಂತಾರಾಮ ಶೆಟ್ಟಿ, ಉಪಾಧ್ಯಕ್ಷೆ ರೀತಾ ಶೆಟ್ಟಿ, ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ,ಯೋಜನಾ ನಿರ್ದೇಶಕ ಡಾ.ಬಿ.ಸಂಜೀವ ರೈ,ಲೆಕ್ಕ ಪರಿಶೋಧಕ ಎಚ್.ಆರ್.ಶೆಟ್ಟಿ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಉಬರಡ್ಕ ಉಮೇಶ ಶೆಟ್ಟಿ ಅವರು ಸನ್ಮಾನಕ್ಕೆ ಉತ್ತರಿಸಿ ಮಾತನಾಡಿದರು.
ಪ್ರೊ.ಜಿ.ಆರ್.ರೈ ಸ್ವಾಗತಿಸಿ, ಸನ್ಮಾನ ಪತ್ರ ವಾಚಿಸಿದರು. ಕಳ್ಳಿಗೆ ತಾರಾನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story





