Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾನಪದ ಸಂಸ್ಕೃತಿ ಬದುಕಿಗೆ ನೈಜ...

ಜಾನಪದ ಸಂಸ್ಕೃತಿ ಬದುಕಿಗೆ ನೈಜ ಅರ್ಥವನ್ನು ಕಲ್ಪಿಸಿಕೊಡುತ್ತದೆ: ಹಿರೇಮಗಳೂರು ಕಣ್ಣನ್

ವಾರ್ತಾಭಾರತಿವಾರ್ತಾಭಾರತಿ7 Sept 2017 5:42 PM IST
share
ಜಾನಪದ ಸಂಸ್ಕೃತಿ ಬದುಕಿಗೆ ನೈಜ ಅರ್ಥವನ್ನು ಕಲ್ಪಿಸಿಕೊಡುತ್ತದೆ: ಹಿರೇಮಗಳೂರು ಕಣ್ಣನ್

ಮಡಿಕೇರಿ, ಸೆ.7: ಭಾರತೀಯ ಸಂಸ್ಕೃತಿಯ ಮೂಲ ಸತ್ತ್ವವಾದ ‘ಜಾನಪದ’ದ ಬೇರುಗಳು ಎಂದಿಗೂ ಸಡಿಲವಾಗಕೂಡದು. ಜಾನಪದ ಸಂಸ್ಕೃತಿ ಬದುಕಿಗೆ ನೈಜ ಅರ್ಥವನ್ನು ಕಲ್ಪಿಸಿಕೊಡುವಂತದ್ದಾಗಿದೆ ಎಂದು ಖ್ಯಾತ ವಾಗ್ಮಿ ಹಿರೇಮಗಳೂರು ಕಣ್ಣನ್ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಮತ್ತು ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ಶಿಕ್ಷಕ-ಶಿಕ್ಷಕಿಯರಿಗೆ ನಡೆದ ‘ಕನ್ನಡ ಭಾಷೆಯಲ್ಲಿ ಜಾನಪದ ಸೊಗಡು’ ವಿಚಾರ ಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾನಪದ ಸಂಸ್ಕ ತಿಯಿಂದ ನಾವು ದೂರವಾದರೆ ನಮ್ಮ ಭಾಷೆ ಮತ್ತು ಬದುಕಿನೊಂದಿಗೆ ನಾಡು ನುಡಿಯ ಸಂಬಂಧಗಳನ್ನೆ ಕಳೆದುಕೊಳ್ಳುವ ಮೂಲಕ ನೆಲದ ಸಂಸ್ಕೃತಿಯಿಂದ ದೂರವಾಗಬೇಕಾಗುತ್ತದೆ. ಲೌಕಿಕ ಬದುಕಿಗೆ ನಮ್ಮನ್ನು ನಾವು ಒಪ್ಪಿಸಿಕೊಳ್ಳುವ ಮೂಲಕ ಬದುಕಿನ ಸ್ವಾರಸ್ಯವನ್ನೆ ಕಳೆದುಕೊಳ್ಳುತ್ತಿರುವುದಾಗಿ ವಿಷಾದಿಸಿದರು.

ಇಂಗ್ಲಿಷ್ ವ್ಯಾಮೋಹದಿಂದ ಇಂಟರ್‍ ನ್ಯಾಷನಲ್ ಸ್ಕೂಲ್‍ಗಳಿಗೆ ದಾಖಲಾಗುವ ಮಕ್ಕಳು ತಮ್ಮ ಮೂಲ ಸಂಸ್ಕೃತಿಯಿಂದ ದೂರವಾಗಿ ಅಂತರ್ ಪಿಶಾಚಿಗಳಂತಾಗುತ್ತಿರುವ ಬಗ್ಗೆ ಅತೀವ ಬೇಸರವನ್ನು ವ್ಯಕ್ತಪಡಿಸಿದ ಕಣ್ಣನ್, ನಮ್ಮೆಲ್ಲ ಭಾವನೆಗಳಿಗೆ ಹತ್ತಿರವಾದ ಭಾಷೆಯನ್ನು ದೂರಮಾಡಿ ಬದುಕು ಜಠಿಲವಾಗುತ್ತಿದೆ ಎಂದು ವಿವರಿಸಿದರು.

ರೋಟರಿ ಜೋನಲ್ ಲೆಫ್ಟಿನೆಂಟ್ ಅಂಬೆಕಲ್ ವಿನೋದ್ ಕುಶಾಲಪ್ಪ ಮಾತನಾಡಿ, ರೊಟರಿ ಸಂಸ್ಥೆ ತನ್ನ ಕ್ಲಬ್‍ಗಳ ಮೂಲಕ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಪ್ರಸ್ತುತ ಶಿಕ್ಷಣಕ್ಕೆ ಪೂರಕವಾದ ‘ಟೀಚ್’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, 10 ಸಾವಿರ ಇ-ಲರ್ನಿಂಗ್ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿದೆ ಎಂದರು.


ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ, ಜೀವನ ಮೌಲ್ಯಗಳು ಅಳಿಸಿಹೋಗುತ್ತಿರುವ ಹಂತದಲ್ಲಿ ಗ್ರಾಮೀಣ ಜಾನಪದ ಸೊಗಡನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ. ವ್ಯಾವಹಾರಿಕವಾಗಿ ನಾವು ಇಂಗ್ಲಿಷ್ ಸೇರಿದಂತೆ ವಿವಿಧ ಭಾಷೆಗಳನ್ನು ಬಳಸುತ್ತೇವಾದರು ನೆಲದ ಭಾಷೆ ‘ಕನ್ನಡ’ದ ಬಳಕೆಯಿಂದ ಮಾತ್ರ ಇದು ನನ್ನದು ಎನ್ನುವ ಭಾವನೆ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು. 

ಈ ವೇಳೆ  ಹಿರಿಯ ಪತ್ರಕರ್ತ ಎಂ.ಎನ್. ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡ ಶಿಕ್ಷಕರಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು.

ವೇದಿಕೆಯಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ., ಮಿಸ್ಟಿ ಹಿಲ್ಸ್ ಗೌರವ ಕಾರ್ಯದರ್ಶಿ ಪಿ.ಎಂ.ಸಂದೀಪ್, ರೋಟರಿ ಟೀಚ್ ಕಾರ್ಯಕ್ರಮದ ಅಧ್ಯಕ್ಷ ರಾಜೇಶ್ ಬಿ.ಎಂ. ಉಪಸ್ಥಿತರಿದ್ದರು.
===========================================

share
ವಾರ್ತಾಭಾರತಿ
ವಾರ್ತಾಭಾರತಿ
Next Story
X