Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬೆಳಕು ಗ್ರಾಮ’ ಯೋಜನೆಗೆ 946 ಗ್ರಾಮಗಳ...

‘ಬೆಳಕು ಗ್ರಾಮ’ ಯೋಜನೆಗೆ 946 ಗ್ರಾಮಗಳ ಆಯ್ಕೆ: ಸಚಿವ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Sept 2017 6:31 PM IST
share
‘ಬೆಳಕು ಗ್ರಾಮ’ ಯೋಜನೆಗೆ 946 ಗ್ರಾಮಗಳ ಆಯ್ಕೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.7: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 187 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿನ 946 ಗ್ರಾಮಗಳನ್ನು ‘ಬೆಳಕು ಗ್ರಾಮ’ ಯೋಜನೆಗೆ ಆಯ್ಕೆ ಮಾಡಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ನಗರದ ಕೆ.ಆರ್.ವೃತ್ತದಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, 2017-18ನೆ ಸಾಲಿನ ಬಜೆಟ್‌ನಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಮಾದರಿ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಘೋಷಣೆ ಮಾಡಲಾಗಿತ್ತು. ಅದರಂತೆ ಈ ಯೋಜನೆ ರೂಪಿಸಲಾಗಿದೆ ಎಂದರು.

ಕನಿಷ್ಠ 2 ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಪ್ರತೀ ಗ್ರಾಮಕ್ಕೆ 25 ರಿಂದ 40 ಲಕ್ಷ ರೂ. ವಿದ್ಯುತ್ ಸರಬರಾಜು ಕಂಪೆನಿಗಳ ಮೂಲಕವೆ ಹಣ ಒದಗಿಸಲಾಗುವುದು. ಇದಕ್ಕಾಗಿ 378 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಡಿಸೆಂಬರ್ ವೇಳೆಗೆ ಈ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸುವಂತೆ ಗಡುವು ನೀಡಲಾಗಿದೆ ಎಂದು ತಿಳಿಸಿದರು.

ಮಾದರಿ ಉಪವಿಭಾಗ ಯೋಜನೆ: ನಿರಂತರ ಗುಣಮಟ್ಟದ ವಿದ್ಯುತ್ ಸರಬರಾಜು, ತಾಂತ್ರಿಕ ಹಾಗೂ ವಾಣಿಜ್ಯ ವಿದ್ಯುತ್ ಸೋರಿಕೆಯನ್ನು ತಗ್ಗಿಸುವುದು, ಶೇ.100ರಷ್ಟು ಬಿಲ್ಲಿಂಗ್ ಹಾಗೂ ವಸೂಲಾತಿ, ಸಂಪೂರ್ಣ ಗ್ರಾಹಕ ಸಂತೃಪ್ತಿಯನ್ನು ಕಲ್ಪಿಸುವುದು ಮಾದರಿ ಉಪ ವಿಭಾಗ ಯೋಜನೆಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಎಚ್‌ಟಿ/ಎಲ್‌ಟಿ ಓವರ್‌ಹೆಡ್ ಮಾರ್ಗಗಳನ್ನು ಭೂಗತ ಕೇಬಲ್‌ಗಳಿಂದ ಬದಲಾವಣೆ ಮಾಡುವುದು, 5 ಸ್ಟಾರ್ ರೇಟೆಡ್ ಪರಿವರ್ತಕಗಳನ್ನು ಅಳವಡಿಸುವುದು, ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸುವುದು, ಆರ್‌ಎಂಯು ಮತ್ತು ಸಿಎಸ್‌ಎಸ್(ಕಾಂಪ್ಯಾಕ್ಟ್ ಸಬ್ ಸ್ಟೇಷನ್)ಗಳ ಅಳವಡಿಸುವ ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಮೊದಲನೆ ಹಂತದಲ್ಲಿ ಒಟ್ಟು 28 ನಗರ ಉಪ ವಿಭಾಗಗಳನ್ನು ಆಯ್ಕೆ ಮಾಡಲಾಗಿದ್ದು, ಈ ಕಾಮಗಾರಿಯ ಒಟ್ಟು ಅಂದಾಜು ವೆಚ್ಚವು 3850 ಕೋಟಿ ರೂ.ಗಳಾಗಿದೆ. ಈ ಕಾಮಗಾರಿಯನ್ನು ವಿವಿಧ ಹಂತಗಳಲ್ಲಿ ಪ್ರತೀ ವರ್ಷ ಕೈಗೊಳ್ಳುವುದು ಎಂದರು.

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಜ್ಯೋತಿ ಯೋಜನೆಯಡಿಯಲ್ಲಿ ನಮ್ಮ ರಾಜ್ಯದಲ್ಲಿ ವಿದ್ಯುತ್ ಸಂಪರ್ಕವನ್ನು ಹೊಂದದೆ ಇದ್ದಂತಹ 30 ಹಳ್ಳಿಗಳಿಗೆ 23.18 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುವುದು. ಎಲ್ಲ ಸಂಪರ್ಕ(ಫೀಡರ್) ಮತ್ತು ಎಚ್‌ಟಿ ಸ್ಥಾವರಗಳಿಗೆ ಹಾಗೂ ಎಲ್ಲ ಇಲೆಕ್ಟ್ರೊ ಮೆಕಾನಿಕಲ್ ಮಾಪಕಗಳನ್ನು ಇಲೆಕ್ಟ್ರೊ ಸ್ಟಾಟಿಕ್ ಮಾಪಕಗಳಿಗೆ ಬದಲಾಯಿಸ ಲಾಗುವುದು ಎಂದ ಅವರು, ಸಂಸದ ಆದರ್ಶ ಗ್ರಾಮ ಯೋಜನೆಯಡಿ 184 ಹಳ್ಳಿಗಳಲ್ಲಿ ಎಲ್‌ಇಡಿ ಬೀದಿ ದೀಪ, ಹೊಸ ಟ್ರಾನ್ಸ್‌ ಫಾರ್ಮರ್‌ಗಳು, ಹೊಸ ಫೀಡರ್ ಹಾಗೂ ಅಧಿಕ ಒತ್ತಡ ವಿತರಣಾ ವ್ಯವಸ್ಥೆಯನ್ನು 55.12 ಕೋಟಿ ರೂ.ವೆಚ್ಚದಲ್ಲಿ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ 7.57 ಲಕ್ಷ ಮನೆಗಳಿಗೆ 228.43 ಕೋಟಿ ರೂ.ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು. 264.16 ಕೋಟಿ ರೂ.ವೆಚ್ಚದಲ್ಲಿ ಓವರ್‌ಹೆಡ್ ಎಲ್‌ಟಿ, ಎಚ್‌ಟಿ ಹಾಗೂ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವ ಮೂಲಕ ವಿತರಣಾ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ನೀರಾವರಿ ಪಂಪ್‌ಸೆಟ್ ಹಾಗೂ ಗ್ರಾಮೀಣ ಫೀಡರ್‌ಗಳನ್ನು ಪ್ರತ್ಯೇಕಗೊಳಿಸ ಲಾಗುವುದು. ಇದರಿಂದ, ಗ್ರಾಮೀಣ ಪ್ರದೇಶಗಳಿಗೂ ನಗರ ಪ್ರದೇಶಗಳಂತೆ ಕನಿಷ್ಠ 22 ಗಂಟೆ ವಿದ್ಯುತ್ ಪೂರೈಸಲು ಸಹಕಾರಿಯಾಗುತ್ತದೆ. ಇದಕ್ಕಾಗಿ 729.68 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಜ್ಯೋತಿ ಯೋಜನೆಯಡಿಯಲ್ಲಿ 1745 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆ: ಐದು ಸಾವಿರ ಜನಸಂಖ್ಯೆ ಮೇಲ್ಪಟ್ಟು ಇರುವ 222 ಪಟ್ಟಣಗಳನ್ನು ಸಮಗ್ರ ವಿದ್ಯುತ್ ಅಭಿವೃದ್ಧಿ ಯೋಜನೆಯಡಿ ಸೇರಿಸಲಾಗಿದ್ದು, ಇದಕ್ಕಾಗಿ ಒಟ್ಟು 1144 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ವಿತರಣಾ ಜಾಲವನ್ನು ಬಲಪಡಿಸುವುದು(ಆರ್‌ಎಂಯು, ಯುಜಿ ಹಾಗೂ ಎಬಿ ಕೇಬಲ್‌ಗಳನ್ನು ಅಳವಡಿಸುವುದು), ಮಾಪಕಗಳನ್ನು ಅಳವಡಿಸುವುದು(ಎಚ್‌ಟಿ ಬೌಂಡರಿ ಮೀಟರ್ ಹಾಗೂ ಫೀಡರ್), ಸರಕಾರಿ ಕಟ್ಟಡಗಳ ಮೇಲೆ ಸೋಲಾರ್ ರೂಫ್ ಟಾಪ್‌ಗಳನ್ನು ಅಳವಡಿಸುವುದು ಈ ಯೋಜನೆಯಡಿ ಬರಲಿದೆ ಎಂದರು.

ಬೆಂಗಳೂರಿನಲ್ಲಿ ಮಳೆ ಅವಾಂತರ: ‘ಎಚ್‌ಎಸ್‌ರ್ ಬಡಾವಣೆಯ ನಾಲ್ಕನೆ ಹಂತ ಹಾಗೂ ಕೋರಮಂಗಲ 6ನೆ ಹಂತದ ಸುಮಾರು 100 ಕಟ್ಟಡಗಳ ನೆಲ ಮಾಳಿಗೆಯಲ್ಲಿ ಮಳೆಯ ನೀರು ತುಂಬಿಕೊಳ್ಳುತ್ತಿದೆ. ನೆಲ ಮಾಳಿಗೆಯಲ್ಲಿ ಸ್ಥಾಪನೆಗೊಂಡಿರುವ ಮಾಪಕಗಳ ಸುರಕ್ಷತೆಯ ಸಲುವಾಗಿ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಲಾಗುತ್ತಿದೆ. ಆದುದರಿಂದ, ಇಂತಹ ಕಟ್ಟಡಗಳ ಗ್ರಾಹಕರು ಸುರಕ್ಷತೆ ಮತ್ತು ನಿರಂತರ ವಿದ್ಯುತ್ ಸರಬರಾಜಿಗಾಗಿ ತಮ್ಮ ವಿದ್ಯುತ್ ಮಾಪಕಗಳನ್ನು ನೆಲ ಮಹಡಿ ಅಥವಾ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ನೋಟಿಸ್ ನೀಡಲಾಗುತ್ತಿದೆ.’

-ಡಿ.ಕೆ.ಶಿವಕುಮಾರ್, ಇಂಧನ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X