Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಶಾ ಕಾರ್ಯಕರ್ತರ ವೇತನ 5 ಸಾವಿರ ರೂ.ಗೆ...

ಆಶಾ ಕಾರ್ಯಕರ್ತರ ವೇತನ 5 ಸಾವಿರ ರೂ.ಗೆ ಏರಿಕೆ: ಶಾಲಿನಿ ರಜನೀಶ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತರ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ7 Sept 2017 7:00 PM IST
share
ಆಶಾ ಕಾರ್ಯಕರ್ತರ ವೇತನ 5 ಸಾವಿರ ರೂ.ಗೆ ಏರಿಕೆ: ಶಾಲಿನಿ ರಜನೀಶ್

ಬೆಂಗಳೂರು, ಸೆ.7: ಆಶಾ ಕಾರ್ಯಕರ್ತೆಯರ ವೇತನವನ್ನು 2 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲು ರಾಜ್ಯ ಸರಕಾರ ಈಗಾಗಲೇ ಅದೇಶ ಹೊರಡಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಗುರುವಾರ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತರ ಮಾಸಿಕ ವೇತನ ನಿಗದಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಆಯೋಜಿಸಿದ್ದ ಧರಣಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತರು 6ಸಾವಿರ ರೂ.ವೇತನ ನಿಗದಿ ಪಡಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಸದ್ಯದ ಬಜೆಟ್‌ನ ಲೆಕ್ಕಾಚಾರದಲ್ಲಿ 5 ಸಾವಿರ ರೂ.ಮಾತ್ರ ಕೊಡಲು ಸಾಧ್ಯ. ಮುಂದಿನ ಬಜೆಟ್‌ನಲ್ಲಿ 6ಸಾವಿರ ರೂ.ನಿಗದಿ ಪಡಿಸಲು ಆರೋಗ್ಯ ಇಲಾಖೆಯಿಂದ ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಜನತೆಯ ಆರೋಗ್ಯವನ್ನು ಸುಧಾರಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ತರವಾದುದ್ದಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದ ಸುಮಾರು 30ಕ್ಕೂ ಹೆಚ್ಚು ಕಾರ್ಯಕ್ರಮಗಳಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಸೂಕ್ತ ವೇತನ ನೀಡಿ, ಬದುಕನ್ನು ಸುಧಾರಿಸಲು ಸರಕಾರ ಬದ್ಧವಾಗಿದೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಮನೆ: ರಾಜ್ಯದಲ್ಲಿರುವ ಬಹುತೇಕ ಆಶಾ ಕಾರ್ಯಕರ್ತೆಯರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಅಂತಹ ಕಾರ್ಯಕರ್ತರಿಗೆ ನಿವೇಶನ ಹಾಗೂ ಮನೆ ಕಟ್ಟಲು ಸಹಾಯಧನ ನೀಡಲಾಗುವುದು. ಜನತೆಯ ಆರೋಗ್ಯದ ಬಗ್ಗೆ ನಿಗಾ ಇಡುವ ಆಶಾ ಕಾರ್ಯಕರ್ತರ ಬದುಕನ್ನು ಹಸನು ಮಾಡುವುದು ಸರಕಾರದ ಕರ್ತವ್ಯವೆಂದು  ತಿಳಿಸಿದರು.

‘ಸಕಾಲ’ದಡಿಗೆ ಯೋಜನೆ: ಆಶಾ ಕಾರ್ಯಕರ್ತರು ಹಲವಾರು ಕಾರ್ಯಕ್ರಮಗಳಡಿ ಕೆಲಸ ಮಾಡುತ್ತಾರೆ. ಆದರೆ, ಅದಕ್ಕೆ ಸಂಬಂಧಿಸಿದ ಪ್ರೌತ್ಸಾಹ ಧನ ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಹೀಗಾಗಿ ಆಶಾ ಕಾರ್ಯಕರ್ತರ ಎಲ್ಲ ಕಾರ್ಯಕ್ರಮಗಳನ್ನು ಸಕಾಲದಡಿಗೆ ತರಲಾಗುವುದು ಎಂದರು.

ತಾಲೂಕಿಗೊಬ್ಬ ಡೇಟಾ ಅಪರೇಟರ್: ಇಲ್ಲಿಯವರೆಗೂ ಆಶಾ ಕಾರ್ಯಕರ್ತರ ದಿನನಿತ್ಯದ ಚಟುವಟಿಕೆಗಳನ್ನು ನೋಂದಾಣಿ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಹೀಗಾಗಿ ಈ ಸಮಸ್ಯೆಯನ್ನು ಬಗೆ ಹರಿಸುವ ನಿಟ್ಟಿನಲ್ಲಿ ತಾಲೂಕಿಗೊಬ್ಬ ಡೇಟಾ ಅಪರೇಟರ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಅವರು ಹೇಳಿದರು.

ಹಿರಿಯ ಸಾಹಿತಿ ರೂಪಾ ಹಾಸನ ಮಾತನಾಡಿ, ರಾಜ್ಯದಲ್ಲಿ 37ಸಾವಿರ ಕ್ಕೂ ಹೆಚ್ಚು ಆಶಾ ಕಾರ್ಯಕರ್ತರಿದ್ದು, ಅವರು ಮಾಡುವ ಕೆಲಸಗಳನ್ನು ಯಾರು ಮಾಡಲು ಸಾಧ್ಯವಿಲ್ಲ. ಹಳ್ಳಿ, ಬೀದಿಗಳನ್ನು ಸುತ್ತಾಡಿ ಗ್ರಾಮೀಣ ಭಾಗದ ಜನತೆಯ ಆರೋಗ್ಯವನ್ನು ಸುಧಾರಿಸಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರೆ, ಇವರಿಗೆ ಕೊಡುವ ಸಂಬಳ ಮಾತ್ರ ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ ಎಂದು ವಿಷಾದಿಸಿದರು.

ಎಐಯುಟಿಯುಸಿ ಕಾರ್ಯದರ್ಶಿ ನಾಗಲಕ್ಷ್ಮಿ ಮಾತನಾಡಿ, ನಮ್ಮ ಪಕ್ಕದ ರಾಜ್ಯಗಳಾದ ತೆಲಂಗಾಣ ಹಾಗೂ ಕೇರಳದಲ್ಲಿ ಆಶಾ ಕಾರ್ಯಕರ್ತರ ವೇತನ 7ಸಾವಿರ ರೂ.ಇದೆ. ಆದರೆ, ನಮ್ಮ ರಾಜ್ಯದಲ್ಲಿ ಇಲ್ಲಿಯವರೆಗೂ ಕೇವಲ 2ಸಾವಿರ ರೂ.ಇತ್ತು. ಇಷ್ಟನ್ನು ಕೊಟ್ಟ ಅವರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುಮಾರು 30ಕ್ಕೂ ಹೆಚ್ಚು ಕೆಲಸಗಳನ್ನು ಮಾಡಿಸಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಾಗೆ ನೋಡಿದರೆ ಆಶಾ ಕಾರ್ಯಕರ್ತರು ಕೇಳುತ್ತಿರುವ 6ಸಾವಿರ ರೂ.ವೇತನ ಕನಿಷ್ಟ ಮಟ್ಟದ್ದಾಗಿದೆ. ಆದರೂ, ಅಷ್ಟನ್ನಾದರು ಕೊಟ್ಟು ಮತ್ತಷ್ಟು ಕೆಲಸದಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಲು ಸರಕಾರ ಅವಕಾಶ ಮಾಡಿಕೊಡಬೇಕು. ಮುಂದಿನ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತರ ವೇತನ 6ಸಾವಿರ ರೂ.ಗೆ ನಿಗದಿ ಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಧರಣಿ ಸಭೆಗೂ ಮುನ್ನ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸುಮಾರು 10ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತರು ನಗರದ ಕೆಂಪೇಗೌಡ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ ಉದ್ಯಾನದವರೆಗೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಯುಟಿಯುಸಿ ಉಪಾಧ್ಯಕ್ಷ ಕೆ.ರಾಧಾಕೃಷ್ಣ, ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷ ಡಾ.ಸುಧಾ ಕಾಮತ್, ಎಐಎಂಎಸ್‌ಎಸ್ ರಾಜ್ಯಾಧ್ಯಕ್ಷ ಅಪರ್ಣ ಹಾಗೂ ಹಿರಿಯ ವಕೀಲೆ ಹೇಮಲತಾ ಮಹಿಷಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X