Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ರ‍್ಯಾಲಿ ಹತ್ತಿಕ್ಕಲು ಪೊಲೀಸರು...

ಬಿಜೆಪಿ ರ‍್ಯಾಲಿ ಹತ್ತಿಕ್ಕಲು ಪೊಲೀಸರು ಯಶಸ್ವಿ

►ಅನುಮತಿಯ ಇಲ್ಲದೆಯೇ ಪ್ರತಿಭಟನಾ ಸಭೆ ►ನಾಯಕರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ7 Sept 2017 8:53 PM IST
share
ಬಿಜೆಪಿ ರ‍್ಯಾಲಿ ಹತ್ತಿಕ್ಕಲು ಪೊಲೀಸರು ಯಶಸ್ವಿ

ಮಂಗಳೂರು, ಸೆ.7: ಬಿಜೆಪಿ ಯುವ ಮೋರ್ಚಾದಿಂದ ಆಯೋಜಿಸಿದ್ದ ‘ಮಂಗಳೂರು ಚಲೋ’ ಕಾರ್ಯಕ್ರಮವನ್ನು ವಿಫಲಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಅನುಮತಿಯ ಹೊರತಾಗಿಯೂ ಜನನಿಬಿಡ ಪ್ರದೇಶವಾದ ಅಂಬೇಡ್ಕರ್ ವೃತ್ತದ ಬಳಿ ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿ, ಸುಮಾರು ಎರಡೂವರೆ ಗಂಟೆ ಕಾಲ ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತಕ್ಕೆ ಕಾರಣರಾದರು.

 ಮಂಗಳೂರು ಚಲೋ ಬೈಕ್ ರ‍್ಯಾಲಿಯನ್ನು ನಿಷೇಧಿಸಿ ನಗರದ ನೆಹರೂ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಂಸದರು, ಶಾಸಕರ ಆದಿಯಾಗಿ ಅನುಮತಿಯ ಹೊರತಾಗಿಯೂ ನಗರದ ಜನನಿಬಿಡ ಪ್ರದೇಶವಾದ ಅಂಬೇಡ್ಕರ್ ವೃತ್ತದ ಬಳಿಯೇ ಜಮಾವಣೆಗೊಂಡು ಪ್ರತಿಭಟನಾ ಸಭೆಯನ್ನೂ ನಡೆಸಿದರು.

ಬೆಳಗ್ಗೆ ಎಂಟೂವರೆ ಗಂಟೆಯ ಸುಮಾರಿಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಆ ಹೊತ್ತಿಗಾಗಲೇ ರಕ್ಷಣಾ ವಾಹನಗಳೊಂದಿಗೆ ಪೊಲೀಸರೂ ಸೇರಿದ್ದರು. ಸುಮಾರು 10.30ರ ವೇಳೆಗೆ ಬಿಜೆಪಿಯ ಹಿರಿಯ ನಾಯಕರು ಆಗಮಿಸಿದ ಬಳಿಕ ಪ್ರತಿಭಟನಾ ಸಮಾವೇಶ ಅಂಬೇಡ್ಕರ್ ವೃತ್ತದ ಬಳಿ (ಜ್ಯೋತಿ ಟಾಕೀಸಿನ ಎದುರು) ಆರಂಭಗೊಂಡಿತ್ತು. ಟ್ರಕ್‌ನ್ನೇ ವೇದಿಕೆಯನ್ನಾಗಿಸಿ ಬಿಜೆಪಿ ನಾಯಕರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್‌ನ ರಾಜಕೀಯ ದೊಂಬರಾಟ ಬಹಳ ದಿನ ನಡೆಯದು: ಯಡಿಯೂರಪ್ಪ

ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಅಶಾಂತಿಯ ತೋಟವನ್ನಾಗಿಸಿದೆ. ಕಾಂಗ್ರೆಸ್‌ನ ರಾಜಕೀಯ ದೊಂಬರಾಟ ಬಹಳ ದಿನ ನಡೆಯಲ್ಲ ಎಂದು ಹೇಳಿದರು.

ರಾಹುಲ್‌ಗಾಂಧಿಯನ್ನು ‘ಪಪ್ಪು’ ಎಂದ ಈಶ್ವರಪ್ಪ!

ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಮಾತನಾಡಿದ ವಿಪಕ್ಷ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ರಾಹುಲ್ ಗಾಂಧಿಯನ್ನು ಬಚ್ಚಾ, ಪಪ್ಪು ಎಂಬುದಾಗಿ ವ್ಯಾಖ್ಯಾನಿಸಿದರು. ರಾಹುಲ್ ಗಾಂಧಿಗೆ ಭಾರತ್ ಮಾತಾಕಿ ಜೈ ಹಾಗೂ ಆರ್‌ಎಸ್‌ಎಸ್ ಬಗ್ಗೆ ಗೊತ್ತಿಲ್ಲ ಎಂದು ಟೀಕಿಸಿದರು.

‘‘ಜವಾಹರ ಲಾಲ್‌ರಿಂದ ಹಿಡಿದು ರಾಹುಲ್‌ಗಾಂಧಿಯವರೆಗೆ ಎಲ್ಲರೂ ಆರ್‌ಎಸ್‌ಎಸ್‌ನ್ನು ಮುಗಿಸಿಬಿಡುತ್ತೇವೆ ಅಂದ್ರು. ಆದರೆ ನಿಮ್ಮ ಅಜ್ಜ, ಅಪ್ಪನ ಕೈಯ್ಯಲ್ಲೂ ಅದು ಆಗಿಲ್ಲ’’ ಎಂದು ಈಶ್ವರಪ್ಪ ವ್ಯಂಗ್ಯವಾಗಿ ನುಡಿದರು.

ನಮ್ಮ ಬತ್ತಳಿಕೆಯಲ್ಲಿ ಇನ್ನಷ್ಟು ಅಸ್ತ್ರಗಳಿವೆ!

ಒಂದು ಬೈಕ್ ರ‍್ಯಾಲಿಗೆ ಹೆದರಿ ತಡೆಯುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಿದೆ. ಆದರೆ ನಮ್ಮ ಬತ್ತಳಿಕೆಯಲ್ಲಿ ಇನ್ನಷ್ಟು ಅಸ್ತ್ರಗಳಿವೆ. ಆವಾಗ ಕಾಂಗ್ರೆಸ್ ಸರಕಾರ ಬೆದರಿ ಓಡಿಹೋಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸಂಸದೆ ಹಾಗೂ ಮಾಜಿ ಸಚಿವೆ, ಶೋಭಾ ಕರಂದ್ಲಾಜೆ ಕಿಡಿ ಕಾರಿದರು.

ಡಿಸಿ ಕಚೇರಿಗೆ ನುಗ್ಗಲಿದ್ದೇವೆ, ಪೊಲೀಸರಿಗೆ ಹೆದರಬೇಕಾಗಿಲ್ಲ. ಪ್ರಸಕ್ತ ರಾಜ್ಯ ಸರಕಾರದ ಭವಿಷ್ಯ ನಾಲ್ಕು ತಿಂಗಳು ಮಾತ್ರ. ಚುನಾವಣೆ ಘೋಷಣೆ ಆಗುವವರೆಗೆ ಹೋರಾಟ ನಡೆಯಲಿದೆ. ಬಳಿಕ ಯಡಿಯೂರಪ್ಪರನ್ನು ಅಧಿಕಾರಕ್ಕೇರಿಸುವುದೇ ನಮ್ಮ ಗುರಿ ಎಂದು ಶೋಭಾ ಕರಂದ್ಲಾಜೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

ಪೊಲೀಸರಿಗೆ ಆರ್. ಅಶೋಕ್ ಬೆದರಿಕೆ

‘‘ಪೊಲೀಸರಿಗೆ ಇನ್ನು ಕೇವಲ ನಾಲ್ಕು ತಿಂಗಳು ಮಾತ್ರ. ಬಳಿಕ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ. ಹಾಗಾಗಿ ನಮ್ಮ ಕಾರ್ಯಕರ್ತರನ್ನು ಮುಟ್ಟುವ ಮೊದಲು ಎಚ್ಚರಿಕೆ’’ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಪೊಲೀಸರಿಗೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರಾದ ಪ್ರಹ್ಲಾದ್ ಜೋಶಿ, ಅರವಿಂದ ಲಿಂಬಾವಳಿ, ಜಗದೀಶ್ ಶೆಟ್ಟರ್, ಸಂಸದ ನಳಿನ್ ಕುಮಾರ್ ಮೊದಲಾದವರು ಮಾತನಾಡಿದರು.

ಪಾದಯಾತ್ರೆಯ ನಡುವೆ ಬೈಕ್‌ನಲ್ಲಿ ತೆರಳೆತ್ನಿಸಿದ ನಾಯಕರು, ಕಾರ್ಯಕರ್ತರು!

ಅನುಮತಿಯ ಹೊರತಾಗಿಯೂ ಪ್ರತಿಭಟನಾನಿರತರು ನಗರದ ಅಂಬೇಡ್ಕರ್ ವೃತ್ತದಲ್ಲಿಯೇ ಸಮಾವೇಶಗೊಂಡು ಪ್ರತಿಭಟನಾ ಸಭೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಆ ರಸ್ತೆಯ ಎಲ್ಲಾ ಪ್ರವೇಶಗಳನ್ನು ಬ್ಯಾರಿಕೇಡ್ ಹಾಗೂ ವಾಹನಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಮೂಲಕ ಮುಚ್ಚುವ ಪ್ರಯತ್ನ ಮಾಡಿದ್ದರು. ಆದರೆ, ಪ್ರತಿಭಟನಾ ಸಭೆ ನಡೆದು ಕೊನೆಯದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ತಮ್ಮ ಮಾತುಗಳನ್ನು ಮುಗಿಸುತ್ತಿದ್ದಂತೆಯೇ, ಮಾಜಿ ಉಪ ಮುಖ್ಯಮಂತ್ರಿ ಅಶೋಕ್‌ರವರು ಅಂಬೇಡ್ಕರ್‌ವೃತ್ತದಿಂದ ಕೆಎಂಸಿ ಎದುರಿನ ರಸ್ತೆಯಲ್ಲಿ ಕಾರ್ಯಕರ್ತರ ನೂಕು ನುಗ್ಗಲಿನ ನಡುವೆ ಬೈಕ್ ರ‍್ಯಾಲಿಗೆ ಮುಂದಾದರು. ಈ ಸಂದರ್ಭ ಮಾಜಿ ಶಾಸಕ ಯೋಗೀಶ್ ಭಟ್ ಹಾಗೂ ಕೆಲ ಕಾರ್ಯಕರ್ತರು ಕೂಡಾ ಬೈಕ್‌ನಲ್ಲಿ ಪ್ರಯಾಣಿಸಲು ಮುಂದಾದರು. ಅಲ್ಲಿ ಸೇರಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿಗಳು (ಕೆಎಸ್‌ಆರ್‌ಪಿ, ಎರ್‌ಎಎಫ್ ಸಿಬ್ಬಂದಿಗಳು ಸೇರಿ) ಸುತ್ತುವರೆದು ಬೈಕ್‌ನಲ್ಲಿ ರ್ಯಾಲಿಗೆ ತಡೆಯೊಡ್ಡಿದರು. ಆ ಸಂದರ್ಭ ಅಂಬೇಡ್ಕರ್ ವೃತ್ತದ ಬಳಿ ಕೆಲ ಹೊತ್ತು ನೂಕು ನುಗ್ಗಲಿನ ವಾತಾವರಣ ಸೃಷ್ಟಿಯಾಯಿತು.

ಬ್ಯಾರಿಕೇಡ್‌ಗಳನ್ನು ಕಿತ್ತು ಎಳೆದಾಡಿದರು!

  ಪೊಲೀಸರು ಸಾವಧಾನದಿಂದ ನಾಯಕರ ಮನವೊಲಿಸಲು ಪ್ರಯತ್ನಿಸಿದರಾದರೂ ಕಾರ್ಯಕರ್ತರು ಮಾತ್ರ ಅಂಬೇಡ್ಕರ್ ವೃತ್ತದ ಸುತ್ತಲಿನ ಪ್ರವೇಶ ರಸ್ತೆಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿಕೊಂಡು ಮುನ್ನುಗ್ಗಲೆತ್ನಿಸಿದರು. ಒಂದು ಹಂತದಲ್ಲಿ ಕೆಎಂಸಿ ಆಸ್ಪತ್ರೆ ಎದುರಿನ ರಸ್ತೆಯಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಪೊಲೀಸರ ಮೇಲೆಯೇ ಮುಗಿ ಬಿದ್ದರು. ಪೊಲೀಸ್ ಅಧಿಕಾರಿಗಳು, ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ತಳ್ಳಿ ಮುನ್ನುಗ್ಗಿ, ಬ್ಯಾರಿಕೇಡ್‌ಗಳನ್ನು ಕಿತ್ತು ಎಳೆದಾಡಿದರು. ಸಾವಿರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರ ತಳ್ಳಾಟ, ನೂಕಾಟಕ್ಕೆ ಒಂದು ಹಂತದಲ್ಲಿ ಪೊಲೀಸರೇ ಹತಾಶರಾಗಿ ಸುಮ್ಮನಾದರು. ಈ ಸಂದರ್ಭ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಪೊಲೀಸರು ಕರೆದೊಯ್ದರು. ಕಾರ್ಯಕರ್ತರು ಮೂಲಕ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿಯತ್ತ ಕಾಲ್ನಡಿಗೆಯಲ್ಲಿ ಸಾಗಿದರು.

  ಅಲ್ಲಿಂದ, ನೆಹರೂ ಮೈದಾನದಲ್ಲಿ ಸಮಾವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದರೂ, ಅಂಬೇಡ್ಕರ್ ವೃತ್ತದಿಂದ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುನ್ನುಗ್ಗುವ ಯತ್ನ ನಡೆಸಿದರು. ಈ ಸಂದರ್ಭ ಪೊಲೀಸರು ನಾಯಕರನ್ನು ಒಳಗೊಂಡು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದರು.

ಬಳಿಕ ಮತ್ತೆ ನಾಯಕರು ನೆಹರೂ ಮೈದಾನದೊಳಗಿನ ಕ್ರಿಕೆಟ್ ಅಸೋಸಿಯೇಶನ್ ಕಟ್ಟಡದ ಎದುರು ಜಮಾಯಿಸಿದಾಗ ಪೊಲೀಸರು ಐದು ನಿಮಿಷಗಳಲ್ಲಿ ಸ್ಥಳ ತೆರವುಗೊಳಿಸಬೇಕೆಂಬ ಸೂಚಿಸಿದರು. ನಾಯಕರು ಕೆಲ ಹೊತ್ತು ಮಾಧ್ಯಮಗಳ ಜತೆ ಕಾರ್ಯಕ್ರಮದ ಕುರಿತು ಮಾತನಾಡಿ ಬಳಿಕ ಅಲ್ಲಿಂದ ತೆರಳಿದರು.

ಆ್ಯಂಬುಲೆನ್ಸ್ ವಾಹನಗಳ ಪರದಾಟ

ಅನುಮತಿಯ ಹೊರತಾಗಿಯೂ ನಗರದ ಅಂಬೇಡ್ಕರ್ ವೃತ್ತದ ಬಳಿಯೇ ಪ್ರತಿಭಟನಾಕಾರರು ಜಮಾವಣೆಗೊಂಡು ಸಭೆ ನಡೆಸಿದ ಪರಿಣಾಮವಾಗಿ ಜನಸಾಮಾನ್ಯರು ಮಾತ್ರವಲ್ಲದೆ, ಆ್ಯಂಬುಲೆನ್ಸ್ ವಾಹನಗಳು ಪರದಾಟ ನಡೆಸಬೇಕಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X