Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ...

ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Sept 2017 10:41 PM IST
share

ಮಡಿಕೇರಿ, ಸೆ.7: 2016-17ನೆ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಲ್ಲಿ ಎಸೆಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳ ಮುಖ್ಯೋಪಾಧ್ಯಾಯರ ಜೊತೆ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. 

ಎಸೆಸೆಲ್ಸಿ ಉತ್ತೀರ್ಣರಾಗದೆ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಮುಂದಿನ ದಿನಗಳಲ್ಲಿ  ಕಷ್ಟಸಾಧ್ಯವಾಗಲಿದೆ. ವಾಹನ ಚಾಲನಾ ಪರವಾನಿಗೆಗೂ ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು ಎಂಬುದು ಆದೇಶ ಬರಬಹುದು. ಆದ್ದರಿಂದ ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಸೆಸೆಲ್ಸಿ ಉತ್ತೀರ್ಣರಾಗಲು ವಿಶೇಷ ಗಮನ ನೀಡಬೇಕಿದೆ. ಆ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಮಕ್ಕಳಿಗೆ ಮಾರ್ಗದರ್ಶನ ಮಾಡಬೇಕಿದೆ ಎಂದರು.

ಎಸೆಸೆಲ್ಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ವಿಶೇಷ ಆಸಕ್ತಿ ವಹಿಸಬೇಕು. ಶಿಕ್ಷಕರು ಮೊದಲು ಶಾಲೆಗೆ ಸರಿಯಾದ ಸಮಯಕ್ಕೆ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಬೇಕು.  ಪೋಷಕರ ಸಭೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಶಿಕ್ಷಕರು ಮಕ್ಕಳ ಬಗ್ಗೆ ವಿಶೇಷ ಆಸಕ್ತಿ ಮತ್ತು ಇಚ್ಚಾಶಕ್ತಿ ವಹಿಸಿದ್ದಲ್ಲಿ ಎಸೆಸೆಲ್ಸಿ ಫಲಿತಾಂಶದಲ್ಲಿ ಸುಧಾರಣೆ ತರಬಹುದು. ಶಿಕ್ಷಕರ ಸಂಖ್ಯೆ ಕಡಿಮೆ ಇದ್ದಲ್ಲಿ ತಾತ್ಕಾಲಿಕವಾಗಿಯಾದರೂ ಸ್ಥಳೀಯ ಶಿಕ್ಷಕರನ್ನು ನೇಮಿಸಿಕೊಂಡು ಫಲಿತಾಂಶ ಸುಧಾರಿಸಲು ಮುಂದಾಗಬೇಕಿದೆ ಎಂದು ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಹೇಳಿದರು. 

ಮನೆಯಿಂದ ತೆರಳಿರುವ ಮಕ್ಕಳು ಶಾಲೆಗೆ ಹಾಜರಾಗಿಲ್ಲವೆಂದರೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಭಾವಿಸಬೇಕಾಗುತ್ತದೆ. ಜೊತೆಗೆ ಶಿಕ್ಷಕರು ಶಾಲೆಗೆ ಹಾಜರಾಗುತ್ತಿಲ್ಲವೆಂದು ತಿಳಿಯಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.  

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಶರಥ ಎಂ.ದಾನೋಜಿ ಅವರು ಜಿಲ್ಲೆಯ ಹೊದವಾಡ, ಎಮ್ಮೆಮಾಡು, ಸೋಮವಾರಪೇಟೆ, ಸುಂಟಿಕೊಪ್ಪ, 7ನೆ ಹೊಸಕೋಟೆ, ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಗಳು, ಸಿದ್ದಾಪುರ, ಕಡಂಗ, ಸೋಮವಾರಪೇಟೆ ಎಸ್.ಜೆ.ಎಂ. ಪ್ರೌಢಶಾಲೆ, ಬೇಳೂರು ದೊರೆ ವೀರ ಹಾಗೂ ವಿಜಯಲಕ್ಷ್ಮಿ ಬಾಳೆಲೆ ಅನುದಾನಿತ  ಪ್ರೌಢಶಾಲೆಗಳು ಹಾಗೂ ವಿರಾಜಪೇಟೆಯ ಮೌಂಟೈನ್ ವೀವ್ ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದಿದೆ ಎಂದು ಅವರು ಮಾಹಿತಿ ನೀಡಿದರು.

ಈ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಸ್ಥಳೀಯ ಸಮಸ್ಯೆಗಳು, ಶಿಕ್ಷಕರ ಕೊರತೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು. 

ಸಭೆಯಲ್ಲಿ ಶಿಕ್ಷಣಾಧಿಕಾರಿ ದೇವನಾಯಕ್, ಮೃತ್ಯುಂಜಯ, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಇತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X