ಬೆಂಗಳೂರು: ರೌಡಿಶೀಟರ್ ಮೇಲೆ ಹಲ್ಲೆ

ಬೆಂಗಳೂರು, ಸೆ.8: ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ರೌಡಿ ಶೀಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಡಿಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ನಾಸೀರ್ ಆಲಿ(34) ಹಲ್ಲೆಗೊಳಗಾದ ರೌಡಿಶೀಟರ್ ಎಂದು ಪೊಲೀಸರು ಗುರುತಿಸಿದ್ದಾರೆ.
ತಡರಾತ್ರಿ ನಗರದ ಶಾಂಪುರ ಮುಖ್ಯರಸ್ತೆ ಬಳಿ ರೌಡಿ ಶೀಟರ್ ನಾಸೀರ್ ಇರುವುದನ್ನು ಖಚಿತಪಡಿಸಿಕೊಂಡ 8 ಮಂದಿಯ ದುಷ್ಕರ್ಮಿಗಳ ತಂಡ ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿದ್ದ ನಾಸೀರ್‌ನನ್ನು ಸ್ಥಳೀಯರು ನಗರದ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಡಿಜಿ ಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





