Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ದಸಂಸ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Sept 2017 6:44 PM IST
share
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ದಸಂಸ ಆಗ್ರಹ

ಶಿವಮೊಗ್ಗ, ಸೆ.8: ಪತ್ರಕರ್ತೆ ಗೌರಿ ಲಂಕೇಶ್ ಹಂತಕರ ಪತ್ತೆಗೆ ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.  

ಈ ವೇಳೆ ಧರಣಿನಿರತರರು ಮಾತನಾಡಿ, ದೇಶದಲ್ಲಿ ವಿಚಾರವಾದಿಗಳ ಸರಣಿ ಹತ್ಯೆ ನಡೆಯುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಗೌರಿ ಲಂಕೇಶ್‍ರವರ ಹತ್ಯೆಯು ವೈಚಾರಿಕತೆಯ ಹತ್ಯೆಯಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆಯಾಗಿದೆ. ಇಡೀ ನಾಗರೀಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈಗಾಗಲೇ ದಾಭೋಲ್ಕರ್, ಪೆನ್ಸಾರೆ, ಎಂ.ಎಂ.ಕಲಬುರ್ಗಿಯವರನ್ನು ಹಂತಕರು ಕೊಲೆ ಮಾಡಿದ್ದಾರೆ. ಇದೀಗ ಗೌರಿ ಲಂಕೇಶ್‍ರವರನ್ನು ಕೂಡ ಹತ್ಯೆ ಮಾಡಿದ್ದಾರೆ. ಸಾಲುಸಾಲಾಗಿ ವಿಚಾರವಾದಿಗಳ ಹತ್ಯೆ ನಡೆಯುತ್ತಿದ್ದರೂ ಇಲ್ಲಿಯವರೆಗೂ ಹಂತಕರನ್ನು ಬಂಧಿಸಿ ಶಿಸ್ತು ಕಾನೂನು ಕ್ರಮ ಜರಗಿಸಲು ಮುಂದಾಗಿದಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಇದರಿಂದ ಹಂತಕರು ತಮ್ಮ ಕೃತ್ಯಗಳನ್ನು ನಿರಾಂತಕವಾಗಿ ಮುಂದುವರಿಸಿಕೊಂಡು ಹೋಗುವಂತಾಗಿದೆ. ಇದು ಸರ್ಕಾರಗಳ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ವಿಚಾರವಾದಿಗಳಿಗೆ, ಸಾಹಿತಿಗಳಿಗೆ, ಹೋರಾಟಗಾರರಿಗೆ ರಕ್ಷಣೆಯೇ ಇಲ್ಲದಂತಾಗಿರುವುದು ನಿಜಕ್ಕೂ ದುರಂತದ ಸಂಗತಿಯಾಗಿದೆ ಎಂದರು.

ಧರಣಿಯಲ್ಲಿ ಸಂಘಟನೆಯ ಮುಖಂಡರಾದ ಚಿನ್ನಯ್ಯ, ಸತ್ಯ ಭದ್ರಾವತಿ, ಕೆ. ನರಸಿಂಹ ಶೆಟ್ಟಿ, ಗುರುರಾಜ, ಕೆ.ಎ.ರಾಜಕುಮಾರ್, ಎಂ.ಪಳನಿರಾಜ್, ಪ್ರಕಾಶ್ ಲಿಗಾಡಿ ಆರ್., ಎಂ.ರಂಗಪ್ಪ, ಬಂಗಾರಪ್ಪ ನಿಟ್ಟಕ್ಕಿ, ಈಶ್ವರಪ್ಪ, ರವಿ ಸೇರಿದಂತೆ ಮೊದಲಾದವರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X