ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಯುವಕ ಮೃತ್ಯು
ಮಂಜೇಶ್ವರ, ಸೆ. 8: ನಿಯಂತ್ರಣ ತಪ್ಪಿದ ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚತ್ತೀಸ್‌ಗಢ ಮೂಲದ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ತಿಳಿದುಬಂದಿದೆ.
ಮೃತ ಯುವಕನನ್ನು ಚತ್ತೀಸ್‌ಗಢ ಮೂಲದ ವ್ರೆರತ್ತಣೆಯ ಬಾಡಿಗೆ ಕ್ವಾರ್ಟರ್ಸ್ ನಲ್ಲಿ ವಾಸವಿರುವ ತುಳಸಿ (20) ಎಂದು ಗುರುತಿಸಲಾಗಿದೆ. ಕಳೆದ 5 ರಂದು ಗೇರುಕಟ್ಟೆ ಬಳಿ ಅಪಘಾತ ಸಂಭವಿಸಿತ್ತು. ತುಳಸಿ ಚಲಾಯಿಸುತ್ತಿದ್ದ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ವರ್ಷಗಳ ಹಿಂದೆ ಉದ್ಯೋಗಕ್ಕಾಗಿ ಈತ ಇಲ್ಲಿಗೆ ಬಂದಿದ್ದ ಎಂದು ತಿಳಿದುಬಂದಿದೆ.
Next Story





