Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕ : ಬಿಜೆಪಿ ಜಿಲ್ಲಾ ಮಹಿಳಾ...

ಕಲ್ಲಡ್ಕ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶೇಷ ಕಾರ್ಯಕಾರಿಣಿ ಸಭೆ

ವಾರ್ತಾಭಾರತಿವಾರ್ತಾಭಾರತಿ8 Sept 2017 10:23 PM IST
share
ಕಲ್ಲಡ್ಕ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವಿಶೇಷ ಕಾರ್ಯಕಾರಿಣಿ ಸಭೆ

ವಿಟ್ಲ, ಸೆ. 8: ಕಾಂಗ್ರೆಸ್ ಓಟಿಗಾಗಿ ಸಮಾಜವನ್ನು, ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಪ್ರತಿರೂಪವಾಗಿದೆ. ಭ್ರಷ್ಟಾಚಾರ ನಿಯಂತ್ರಿಸುವ ಲೋಕಾಯುಕ್ತದ ಬಾಗಿಲನ್ನು ಹಾಕಿದ್ದು ಕಾಂಗ್ರೆಸ್ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಆರೋಪಿಸಿದರು.

ಕಲ್ಲಡ್ಕ ಪಂಚವಟಿ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಓಟಿಗಾಗಿ ಎಂತಹ ಹೀನ ಕೆಲಸಕ್ಕೆ ಇಳಿಯುತ್ತಿದೆ. ರಾಜ್ಯದಲ್ಲಿ ಯಾವುದೇ ಮಹಿಳೆಗೆ ಭದ್ರತೆ ಇಲ್ಲ ಎಂಬುದಕ್ಕೆ ಹಾಡುಹಗಲಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಉದಾಹರಣೆಯಾಗಿದೆ. ಇದೊಂದು ಖಂಡನೀಯ ಕೃತ್ಯ ಎಂದರು.

ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಯಾವುದೇ ವಿವೇಚನೆ ಇಲ್ಲ. ದಲಿತರ ಮನೆಯಲ್ಲಿ ಊಟ ಮಾಡಿದರೆ ಅದಕ್ಕೆ ಕೊಂಕು ಮಾತು ಆಡುತ್ತಾರೆ. ದಲಿತರ ಮಹಿಳೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಯಸ್.ಯಡಿಯೂರಪ್ಪ ವಿವಾಹವಾಗಲಿ ಎನ್ನುತ್ತಾರೆ. ಇದು ಬುದ್ಧಿ ಇದ್ದವರು ಮಾತನಾಡುವ ಕ್ರಮ ಅಲ್ಲ ಎಂದರು. ಸಂಧ್ಯಾ ಸುರಕ್ಷ, ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ಹೆಮ್ಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ, ಬಾಣಂತಿಯರಿಗೆ ಮಡಿಲು ಯೋಜನೆ, ರೈತರಿಗೆ ಸಾಲಮನ್ನಾ ಯೊಜನೆಗಳನ್ನು ಹಾಕಿಕೊಂಡಿತ್ತು. ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಜನ ಸಾಮಾನ್ಯರ ಸಂಪರ್ಕ ಮಾಡಿ ಜನಪ್ರೀತಿ ಸಾಧಿಸುವ ಮೂಲಕ ಯಾರೇ ಅಭ್ಯರ್ಥಿಯಾದರೂ ವಿಜಯಿ ಆಗಿಸುವ ಜವಾಬ್ದಾರಿ ಮಹಿಳಾ ಕಾರ್ಯಕರ್ತರ ಮೇಲಿದೆ. ಬಿಜೆಪಿ ಮಹಿಳಾ ಕಾರ್ಯಕರ್ತರು ಪಕ್ಷದ ಐಶ್ವರ್ಯ ಎಂದರು. 

ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆ ಮತ್ತು ಪುಣಚ ಶ್ರೀದೇವಿ ಪ್ರೌಢ ಶಾಲೆಗೆ ಶ್ರೀಕ್ಷೇತ್ರ ಕೊಲ್ಲೂರಿನಿಂದ ಸಿಗುತ್ತಿದ್ದ ಅನುದಾನ ನಿಲ್ಲಿಸಿರುವುದು ಜಿಲ್ಲಾ ಉಸ್ತುವಾರಿ ಸಚಿವರ ಸೇಡಿನ ಕ್ರಮವಾಗಿದೆ. ಡಾ. ಪ್ರಭಾಕರ ಭಟ್ ಅವರು ಈ ಶಾಲೆಯ ಪ್ರಮುಖರು ಎನ್ನುವುದಕ್ಕಾಗಿ ಇಂತಹ ದ್ವೇಷದ ರಾಜಕಾರಣವನ್ನು ರೈಯವರು ಮಾಡುತ್ತಿದ್ದಾರೆ. ಸಭೆ ಸಮಾರಂಭಗಳಲ್ಲಿ ದ್ವೇಷ ಮಾಡಬಾರದು ಎಂದು ಕರೆ ಕೊಡುವ ರೈ, ಹೇಳುವುದು ಒಂದು ಮಾಡುವುದು ಇನ್ನೊಂದು ಎಂದು ಟೀಕಿಸಿದರು.

ಜಿಲ್ಲಾ ಬಿಜೆಪಿ ಮಹಿಳಾಮೋರ್ಚಾ ವತಿಯಿಂದ ಮುಷ್ಠಿ ಅಕ್ಕಿ ಅಭಿಯಾನ ನಡೆಯುತ್ತಿದ್ದು ಮಹಿಳೆಯರು ಅಭಿಯಾನದ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರು. ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಉಪಾಧ್ಯಕ್ಷೆ ಶಾರದಾ ರೈ, ಭಾಗೀರಥಿ ಮುರುಳ್ಯ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ರಾಜ್ಯ ಸಮಿತಿ ಸದಸ್ಯರಾದ ಜಯಂತಿ ನಾಯಕ್, ರಜನಿ ದುಗ್ಗಣ್ಣ, ಬಂಟ್ವಾಳ ತಾ ಅಧ್ಯಕ್ಷೆ ನಳಿನಿ ಶೆಟ್ಟಿ, ಕಾರ್ಯದರ್ಶಿ ಜಯಂತಿ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಬ್ರಿಜೇಶ್ ಚೌಟ, ಬಿಜೆಪಿ ನೇತಾರ ರಾಜೇಶ್ ನಾಕ್ ಉಳಿಪಾಡಿ, ಮಾಜಿ ಶಾಸಕ ಎ. ರುಕ್ಮಯ ಪೂಚಾರಿ, ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದ್ಯಾ ವೆಂಕಟೇಶ್ ಸ್ವಾಗತಿಸಿದರು. ತಾಲೂಕು ಕಾರ್ಯದರ್ಶಿ ರಾಜೀವಿ ವಂದಿಸಿದರು. ಜಿಲ್ಲಾ ಮಹಿಳಾ ಕಾರ್ಯದರ್ಶಿ ಅರುಣಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

‘ರಾಷ್ಟ್ರದ ಏಕತೆ ಮತ್ತು ಅಖಂಡತೆ, ಪ್ರಜಾಪ್ರಭುತ್ವ, ಗಾಂಧೀ ಪ್ರಣೀತ ರಾಮರಾಜ್ಯ, ಸರ್ವಧರ್ಮ ರಕ್ಷಣೆ, ಮೌಲ್ಯಾಧಾರಿತ ಆಡಳಿತ ಎಂಬ ಪಂಚ ನಿಷ್ಠೆಯಿಂದ ಮಹಿಳಾ ಮೋರ್ಚಾವು ಕೆಲಸ ಮಾಡುತ್ತದೆ -ಭಾರತಿ ಶೆಟ್ಟಿ, ಮಹಿಳಾ ಬಿಜೆಪಿ ರಾಜ್ಯಧ್ಯಕ್ಷೆ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X