ಮಕ್ಕಳು ಕೇವಲ ಪಠ್ಯ ವಿಷಯಕ್ಕೆ ಸಿಮೀತವಾಗಬಾರದು: ಎಲ್.ಟಿ.ಪಾಟೀಲ
.jpg)
ಮುಂಡಗೋಡ, ಸೆ.8: ಪ್ರತಿಯೊಬ್ಬ ಮಕ್ಕಳಲ್ಲಿ ಒಂದೊಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆ ಹೊರಹಾಕಲು ಪ್ರತಿಭಾಕಾರಂಜಿಯಲ್ಲಿ ಒಳ್ಳೆಯ ಅವಕಾಶ ಇದೆ. ಆದ್ದರಿಂದ ಪಾಲಕರು ಮಕ್ಕಳನ್ನು ಪ್ರೋತ್ಸಾಹಿಸಿ ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸುವಂತೆ ಮಾಡಬೇಕು ಹಾಗೂ ಪ್ರತಿಭಾ ಕಾರಂಜಿಗಳಲ್ಲಿ ಭಾಗವಹಿಸಬೇಕು ಎಂದು ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟೀಲ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಎಲ್‍ವಿಕೆ ಸಭಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳು ಕೇವಲ ಪಠ್ಯ ಪುಸ್ತಕಗಳ ವಿಷಯದ ಕುರಿತು ಸಿಮೀತವಾಗಿರಬಾರದು ಮಕ್ಕಳು ಸಾಂಸ್ಕೃತಿಕ ಚಟುವಟಿಕೆ ಕೆಲೆಗಳಲ್ಲಿ ಭಾಗವಹಿಸುವಂತ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದರು.
ಸರಕಾರವು ಮಕ್ಕಳಲ್ಲಿ ಉತ್ಸಾಹ ತುಂಬಲು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ತಾಲೂಕಾ ಅಧ್ಯಕ್ಷ ಪ್ರದೀಪ ಕುಲಕರ್ಣಿ ಮಾತನಾಡಿ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಗಳಿಗೆ ಸರಕಾರ ಅನುದಾನ ನೀಡುತ್ತಿದೆ ಆದರೆ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ ಗಳಿಗೆ ಅನುದಾನ ಕೊಟ್ಟರೆ ಒಳ್ಳೆಯದು ಎಂದರು.
ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷೆ ದಾಕ್ಷಾಯಿಣಿ ಸುರಗಿಮಠ, ದೈಹಿಕ ಪರಿವಿಕ್ಷಕ ಎನ್.ಆರ್.ಕಳ್ಳಿಮನಿ, ಪ.ಪಂ ಉಪಾಧ್ಯಕ್ಷ ಫಕ್ಕಿರಪ್ಪ ಅಂಟಾಳ, ಪ.ಪಂ ಸದಸ್ಯ ಮುನೇಶ್ವರ ಕೊರವರ, ತಾ.ಪಂ ಸದಸ್ಯ ರಮೇಶ ರಾಯ್ಕರ, ಕರ್ನಾಟಕ ಪ್ರೌಢ ಶಾಲೆ ಸಹಶಿಕ್ಷಕ ಅಧ್ಯಕ್ಷ ರಮೇಶ ಅಂಬಿಗೇರ, ಸರಕಾರಿ ನೌಕರ ಸಂಘದ ಅಧ್ಯಕ್ಷ ಸುಭಾಸ ಡೋರಿ, ಗ್ರಾ.ಪಂ ಉಪಾಧ್ಯಕ್ಷ ಗೋಪಾಲ ಪಾಟೀಲ, ಶಿಕ್ಷಕ ಹರಿ ನಾಯ್ಕ ಮತ್ತಿತರರಿದ್ದರು.







