ಸೆ.14ರಿಂದ ದಸರಾ ಕ್ರೀಡಾಕೂಟ
ಬೆಂಗಳೂರು, ಸೆ.8: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.14ರಿಂದ ಎರಡು ದಿನಗಳ ಕಾಲ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದೆ.
ಶುಕ್ರವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಶಶಿಕಲಾ ಮಾತನಾಡಿ, ಸಚಿವ ಕೆ.ಜೆ.ಜಾರ್ಜ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಸಚಿವ ಆರ್. ರೋಷನ್‌ಬೇಗ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ. ಅನಂತಕುಮಾರ್ ಉಪಸ್ಥಿತರಿರಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಕೃಷ್ಣಪ್ಪ, ಕೃಷ್ಣ ಬೈರೇಗೌಡ, ಎಚ್.ಎಂ.ರೇವಣ್ಣ, ಎಂ.ಆರ್.ಸೀತಾರಾಮ್, ಮೇಯರ್ ಜಿ.ಪದ್ಮಾವತಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ, ಈ ಸಂದರ್ಭದಲ್ಲಿ ನಗರದ ಕ್ರೀಡಾಪಟುಗಳು ಎಂದು ತಿಳಿಸಿದರು.
ಮೈಸೂರಿನಲ್ಲಿ ನಡೆಯುವ ದಸರಾ ಕ್ರೀಡಾಕೂಟದಲ್ಲಿ ನಗರ ವಿಭಾಗದ ಕ್ರೀಡಾಪಟುಗಳ ಆಯ್ಕೆ ನಡೆಸುವ ಸಲುವಾಗಿ ಎರಡು ದಿನಗಳ ಕಾಲ ಕ್ರೀಡೆಯನ್ನು ನಡೆಸಲಾಗುವುದು, ಆಸಕ್ತರು ಸ್ಪರ್ಧೆಯಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದರು. ಸರ್ಧೆಯಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಹಾಗೂ ತಂಡಗಳು ಪ್ರವೇಶ ಪತ್ರವನ್ನು ಸೆ. 12 ಸಂಜೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಈ ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದರು.







