ನೆಕ್ಕರೆ: ಪಿಕಪ್ ಢಿಕ್ಕಿ; ಬಾಲಕಿ ಮೃತ್ಯು
ಉಪ್ಪಿನಂಗಡಿ, ಸೆ.9: ರಸ್ತೆ ದಾಟುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿಯಾಗಿ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಕಡಬ ಠಾಣಾ ವ್ಯಾಪ್ತಿಯ ಅಲಂಗಾರು ಸಮೀಪದ ನೆಕ್ಕರೆ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ.
ನೆಕ್ಕರೆ ನಿವಾಸಿ ಮುಹಮ್ಮದ್ ಹನೀಫ್ ಎಂಬವರ ಪುತ್ರಿ ಸೈಮಾ(6) ಮೃತ ಬಾಲಕಿ. ಸೈಮಾ ಮನೆ ಸಮೀಪದ ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕುಂತೂರಿಗೆ ತೆರಳುತ್ತಿದ್ದ ಪಿಕಪ್ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಸೈಮಾಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ದಾರಿಮಧ್ಯೆಯೇ ಆಕೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.
Next Story