Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವ...

ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವ ಜವಾಬ್ದಾರಿ ಯುವ ಜನತೆಯ ಮೇಲಿದೆ: ಶಿವರಾಮ ಹೆಬ್ಬಾರ

ವಾರ್ತಾಭಾರತಿವಾರ್ತಾಭಾರತಿ10 Sept 2017 5:11 PM IST
share
ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವ ಜವಾಬ್ದಾರಿ ಯುವ ಜನತೆಯ ಮೇಲಿದೆ: ಶಿವರಾಮ ಹೆಬ್ಬಾರ

ಮುಂಡಗೋಡ, ಸೆ.10: 21ನೆ ಶತಮಾನ ಯುವಕರ ಶತಮಾನವಾಗಿದೆ. ಆಂಗ್ಲ ಭಾಷೆಯನ್ನು ವಿರೋಧಿಸುವ  ಬದಲು ಕನ್ನಡದೊಂದಿಗೆ ಆಂಗ್ಲ ವಿಷಯಕ್ಕೂ ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಅವರು ತಾಲೂಕಿನ ಮಳಗಿ ಗ್ರಾಮದ ಸರ್ಕಾರಿ ಪದವಿವಪೂರ್ವ ಕಾಲೇಜಿನ ವಿಜ್ಞಾನ ಪ್ರಯೋಗಾಲಯ ಹಾಗೂ ಅಕ್ಷರದಾಸೋಹ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಆಯಾ ದೇವಸ್ಥಾನಗಳಿಗೆ  ಅವರದೇ ಆದ ಜಾತಿ ಧರ್ಮದವರು ಹೋಗುತ್ತಾರೆ. ಆದರೆ ಎಲ್ಲ ಜನಾಂಗದ ದೇಗುಲವೆಂದರೆ ಶಾಲಾ ಕಾಲೇಜಗಳು. ಇಲ್ಲಿ ಎಲ್ಲ ಧರ್ಮದ ವಿದ್ಯಾರ್ಥಿಗಳು ಶೃದ್ಧಾ ಭಕ್ತಿಯಿಂದ ಬರುತ್ತಾರೆ. ಇದರಿಂದ ಎಲ್ಲರೂ ಒಂದೇ ಎನ್ನುವ ಭಾವನೆ ಮೂಡುತ್ತದೆ ಎಂದರು.

ಶಿಕ್ಷಣಕ್ಕೆ ಕ್ಷೇತ್ರಕ್ಕೆ ಸರಕಾರ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರ ಉಚಿತ ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಗುಣಮಟ್ಟ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳುವ ಜವಾಬ್ದಾರಿ ಯುವ ಜನತೆಯ ಮೇಲಿದೆ. ವಿದ್ಯಾರ್ಥಿಗಳು ಸರಕಾರ ಕೊಟ್ಟಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಗುರುಗಳಿಗೆ ಗೌರವ ತಂದೆ ತಾಯಿಂದರಿಗೆ ಕೀರ್ತಿ ಹಾಗೂ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.

ಮಳಗಿ ಗ್ರಾಪಂ ಅಧ್ಯಕ್ಷೆ ರೇಖಾ ಅಂಡಗಿ  ಮತನಾಡಿ, ಚುನಾವಣೆ ಬಂದಾಗ ಮಾತ್ರ ರಾಜಕಾರಣ ಮಾಡಬೇಕು ಚುನಾವಣೆ ಮುಗಿದ ಬಳಿಕ ಪಕ್ಷ ಭೇದ ಮರೆತು ಎಲ್ಲರೂ ಒಗ್ಗೂಡಿ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು ಎಂದ ಅವರು, ಮಳಗಿ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ಮಂಜೂರಿ ಮಾಡಿದರೆ ಉನ್ನತ ಶಿಕ್ಷಣಕ್ಕಾಗಿ ದೂರದ ಮುಂಡಗೋಡ ಹಾಗೂ ಶಿರಸಿಗೆ ಹೋಗುವ ಸುತ್ತಮುತ್ತಲಿನ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷ ರವಿಗೌಡಾ ಪಾಟೀಲ, ತಾಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಸುರಗಿಮಠ, ಕೃಷ್ಣಾ ಹಿರಳ್ಳಿ, ಆರ್.ಜಿ.ನಾಯಕ್,  ವಿ.ಎಸ್.ನಾಯಕ, ಪ್ರಮೋದ ಡವಳೆ,ಬಾಬಣ್ಣ ಕೋಣನಕೇರಿ, ವಲಯ ಅರಣ್ಯಾಧಿಕಾರಿ ಮಹೇಶ, ಆರ್.ಎಸ್.ಸಜ್ಜನಶೆಟ್ಟರ, ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ ಸಾಳುಂಕೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X