Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಾಮಾಜಿಕ ಜಾಲತಾಣಗಳೇ ಪ್ರಮುಖ ಕಾರಣ: ವೈಎಸ್‍ವಿ ದತ್ತ

ಪತ್ರಕರ್ತೆ ಗೌರಿಲಂಕೇಶ್ ನುಡಿ-ನಮನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Sept 2017 5:25 PM IST
share
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಾಮಾಜಿಕ ಜಾಲತಾಣಗಳೇ ಪ್ರಮುಖ ಕಾರಣ: ವೈಎಸ್‍ವಿ ದತ್ತ

ಕಡೂರು, ಸೆ.10: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಅತ್ಯಂತ ಅಮಾನವೀಯ, ಮೃಗೀಯ ಹಾಗೂ ಖಂಡನೀಯ, ಹತ್ಯೆಗೆ ಸಾಮಾಜಿಕ ಜಾಲತಾಣಗಳೇ ಪ್ರಮುಖ ಕಾರಣ ಎಂದು ಶಾಸಕ ವೈ.ಎಸ್.ವಿ. ದತ್ತ ವಿಷಾದಿಸಿದರು.

ಅವರು ಪಟ್ಟಣದ ಕನ್ನಡ ಭವನದಲ್ಲಿ ಪ್ರಗತಿಪರ ಚಿಂತಕರು ಹಾಗೂ ಸಮಾನ ಮನಸ್ಕರು ಆಯೋಜಿಸಿದ್ದ ವಿಚಾರವಾದಿ, ಚಿಂತಕಿ ಹಾಗೂ ಪತ್ರಕರ್ತೆ ಗೌರಿಲಂಕೇಶ್ ನುಡಿ-ನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವಿಕೃತ ವಿಚಾರಗಳು ಬಹಳ ಬೇಗ ಹರಡುತ್ತವೆ. ಇವುಗಳ ಪರಿಣಾಮ ವ್ಯತಿರಿಕ್ತವಾಗಿರುತ್ತವೆ. ಗೌರಿ ಲಂಕೇಶ್ ಅವರ ಜೀವನದಲ್ಲಿಯೂ ಇದೇ ಸಾಮಾಜಿಕ ಜಾಲತಾಣಗಳಿಂದ ನೂರಾರು ನೋವುಗಳು ಉಂಟಾಗಿವೆ ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಇಂತಹ ಸಾಮಾಜಿಕ ಜಾಲತಾಣಗಳಿಗೆ ಲಗಾಮು ಹಾಕುವ ಮೂಲಕ ಮುಂದಿನ ದಿನಗಳಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕಾದ ಜವಾಬ್ದಾರಿ ಇದೆ. ಭವಿಷ್ಯದಲ್ಲಿ ಇನ್ನಷ್ಟು ಅಪಾಯಕಾರಿ ಬೆಳವಣಿಗೆಗಳು ಘಟಿಸದಂತೆ ಎಚ್ಚರಿಕೆಯ ಗಂಟೆಯೂ ಗೌರಿ ಲಂಕೇಶ್ ಹತ್ಯೆ ಪ್ರಕರಣ. ಗೌರಿಲಂಕೇಶ್ ಚಿಕ್ಕಮಗಳೂರನ್ನು ತನ್ನ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ನಕ್ಸಲರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಸಾವು ತುಂಬಲಾರದ ನಷ್ಟ ಎಂದು ತಿಳಿಸಿದರು.

ವಿಚಾರವಾದಿ ಹಾಗೂ ಚಿಂತಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆಯ ನಂತರ ಸಮಾಜದ ಸಮತೋಲನ ತಪ್ಪುತ್ತಿದೆ. ಜಾತ್ಯತೀತ ಶಕ್ತಿ ಹಾಗೂ ಸಾಮಾಜಿಕ ವ್ಯಕ್ತಿಗಳಿಗೆ ದೊಡ್ಡ ಅಪಾಯ ಕಾಡುತ್ತಿದೆ. ಅಸಹಿಷ್ಣುತೆ ಕಾಡುತ್ತಿದೆ. ಗೌರಿ ಲಂಕೇಶ್ ಹತ್ಯೆಯ ಮೂಲಕ ವಿಚಾರ ಮತ್ತು ಸಿದ್ದಾಂತದ ಹತ್ಯೆಯಾಗಿದೆ. ಜನತಂತ್ರದಲ್ಲಿ ಅಭಿವ್ಯಕ್ತಿಯ ಸ್ವಾತಂತ್ರ್ಯ ಬಹಳ ಮುಖ್ಯ ಆದರೆ ಆ ವ್ಯವಸ್ಥೆ ಈಗ ಏಕಪಕ್ಷೀಯವಾಗಿ ವಾಲುತ್ತಿದೆ. ತಮ್ಮ ಬಗ್ಗೆ ವಿರುದ್ದ ವಿಚಾರ ಪತ್ರಿಕೆಗಳಲ್ಲಿ ಬಂದರೆ ಅದನ್ನು  ಆರೋಗ್ಯಕರವಾಗಿ ಸ್ವೀಕರಿಸುವ ಮನೋಭಾವ ದೂರವಾಗುತ್ತಿದೆ ಎಂದರು.

ಈ ವೇಳೆ ಪ್ರಾಸ್ತಾವಿಕವಾಗಿ ಕಸಾಪ ಅಧ್ಯಕ್ಷ ವೈ.ಎಸ್. ರವಿಪ್ರಕಾಶ್ ಮಾತನಾಡಿದರು. ಬಿ.ಟಿ. ಗಂಗಾಧರನಾಯ್ಕ, ಎಂ. ರಾಜಪ್ಪ, ಭಂಡಾರಿಶ್ರೀನಿವಾಸ್, ಸೂರಿಶ್ರೀನಿವಾಸ್, ಎ.ಜೆ. ಪ್ರಕಾಶ್‍ಮೂರ್ತಿ, ಹುಲ್ಲೇಹಳ್ಳಿ ರಂಗನಾಥ್, ಹೆಚ್.ಎಸ್. ಪರಮೇಶ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೆ.ಎಂ.ಪುಟ್ಟಪ್ಪ, ಮಚ್ಚೇರಿ ಮಹೇಶ್, ಸಿ.ಹೆಚ್.ಮೂರ್ತಿ, ಕೃಷ್ಣ, ಬಿಳಿಗಿರಿ ವಿಜಯಕುಮಾರ್, ಸೀಗೇಹಡ್ಲು ಹರೀಶ್, ಮಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X