ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ
ಬೈಂದೂರು, ಸೆ.10: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.9ರಂದು ಸಂಜೆ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೈಂದೂರು ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಣ್ಣಪ್ಪಪೊಲೀಸ್ ದಾಳಿಯ ವೇಳೆ ಪರಾರಿಯಾಗಿದ್ದು, ಸ್ಥಳದಲ್ಲಿದ್ದ 2163 ರೂ. ಮೌಲ್ಯದ ಒಟ್ಟು ಮದ್ಯವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ತೆಗ್ಗರ್ಸೆ ಗ್ರಾಮದ ಗೇರು ಹಾಡಿಯ ಬಳಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಕೊಡೇರಿಯ ಅಣ್ಣಪ್ಪಪೂಜಾರಿ(48) ಎಂಬವರನ್ನು ಉಡುಪಿಯ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, 1,900ರೂ. ಮೌಲ್ಯದ ಮದ್ಯ ಹಾಗೂ ನಗದು, ಮೊಬೈಲ್‌ನ್ನು ವಶಪಡಿಸಿ ಕೊಂಡಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ತಿ ಗ್ರಾಮದ ಚೇರುಗುಡ್ಡೆ ಎಂಬಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕಾಡುಕೋಳಮಕ್ಕಿಯ ಬಸವರಾಜ ಶೆಟ್ಟಿ(62) ಎಂಬವರನ್ನು ಪೊಲೀಸರು ಬಂಧಿಸಿ, 1,850 ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.





