ಕರವೇ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಕರವೇ ಗುರಿ: ಲೋಕೇಶ್

ಚಿಕ್ಕಬಳ್ಳಾಪುರ, ಸೆ.10: ಕನ್ನಡ ನಾಡು, ನುಡಿಗಾಗಿ ಹೋರಾಟ ರೂಪಿಸುವ ಜೊತೆಗೆ ಜನಪರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆರ್.ಲೋಕೇಶ್ ಪದಾಧಿಕಾರಿಗಳಿಗೆ ಸಲಹೆ ನೀಡಿದರು.
ತಾಲೂಕಿನ ಪೆರೇಸಂದ್ರ ಗ್ರಾಮದ ಅಂಜನಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಮಂಡಿಕಲ್ ಹೋಬಳಿ ಕಾರ್ಯಕರ್ತರ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಜನಮನ್ನಣೆ ಗಳಿಸಬೇಕು. ಗಡಿನಾಡು ಪ್ರದೇಶವಾದ ಜಿಲ್ಲೆಯಲ್ಲಿ ಕನ್ನಡ ನಾಡು ನುಡಿಗಳ ಗರಿಮೆಯನ್ನು ಹೆಚ್ಚಿ ಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದೇ ಹಾದಿಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಕನ್ನಡ ನಾಡಿಗೆ ಸೇವೆ ಸಲ್ಲಿಸುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಈ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಕರವೇ ಗುರಿ ಎಂಬುದನ್ನು ಸಾಬೀತು ಮಾಡಬೇಕೆಂದು ಕರೆ ನೀಡಿದರು.
ಪದಾಧಿಕಾರಿಗಳ ಆಯ್ಕೆ: ಕರವೇ ಮಂಡಿಕಲ್ ಹೋಬಳಿ ಘಟಕದ ಅಧ್ಯಕ್ಷರಗಿ ಶ್ರೀಕಾಂತ್‌ರೆಡ್ಡಿ, ಉಪಾಧ್ಯಕ್ಷರಾಗಿ ಹರ್ಷವರ್ಧನ್, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್, ಪೆರೇಸಂದ್ರ ಆಟೊ ಘಟಕದ ಅಧ್ಯಕ್ಷರಾಗಿ ಎಚ್.ಸಿ.ಮಂಜುನಾಥ್, ಉಪಾಧ್ಯಕ್ಷರಾಗಿ ನಾಗಣ್ಣ, ಪ್ರಧಾನ ಪ್ರಧಾನ ಕಾರ್ಯದರ್ಶಿಯಾಗಿ ಬಾಲಯ್ಯ ಅವರನ್ನು ನೇಮಿಸಿ ಆದೇಶ ಪತ್ರಗಳನ್ನು ಜಿಲ್ಲಾಧ್ಯಕ್ಷ ಲೋಕೇಶ್ ವಿತರಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ತಾಲೂಕು ಅಧ್ಯಕ್ಷ ವಿಜಯ್‌ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ಮುನಿಯಪ್ಪ, ಕಾರ್ಯದರ್ಶಿ ಪಿ.ಬಿ.ಸುಭಾನ್, ಮಹಿಳಾ ಘಟಕದ ಅಮೃತಾ, ರತ್ಮಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







