ಶಿವಮೊಗ್ಗ: ಯುವತಿ ಆತ್ಮಹತ್ಯೆ
ಶಿವಮೊಗ್ಗ, ಸೆ. 11: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಸಿರಿವಂತೆ ಸಮೀಪದ ಕುರ್ನಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ.
ಇಬ್ರಾಹೀಂ ಎಂಬುವರ ಪುತ್ರಿ ಅಸ್ಮಾ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ.
ಸೆ. 10 ರಂದು ಯುವತಿಯ ವಿವಾಹ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ ಮನೆಯಲ್ಲಿದ್ದ ಬಡತನದ ಕಾರಣದಿಂದ ಮದುವೆ ಮಾಡುವುದು ತಂದೆಗೆ ಹೊರೆಯಾಗಿ ಪರಿಣಮಿಸಲಿದೆ ಎಂದು ಭಾವಿಸಿ ಆಸ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





