ದೈಹಿಕ, ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿ: ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಸೆ.11: ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಪದವಿಪೂರ್ವ ಶಿಕ್ಷಣ ಇಲಾಖೆ, ಮಹೇಶ್ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ 2017-18ನೇ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಗಟ್ಟಿಕೊಳ್ಳುವುದರ ಜೊತೆಗೆ ದೇಹಕ್ಕೆ ವ್ಯಾಯಾಮವಾಗುತ್ತದೆ. ಅಲ್ಲದೇ ಆರೋಗ್ಯಕರವಾಗಿರಲು ಸಹಕಾರಿಯಾಗಲಿದೆ ಎಂದರು.
ನಂತರ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳಿಗೆ ಅಥ್ಲೇಟಿಕ್ಸ್ ಆಟಗಳಾದ ಓಟ, ಗುಂಡು ಎಸೆತ, ಜಾವಿಲೀನ್, ಹೈ ಜೆಂಪ್, ಲಾಂಗ್ ಜೆಂಪ್ ಸೇರಿದಂತೆ ಇತರೆ ಆಟವನ್ನು ಹಾಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಎ. ರಾಜೇಂದ್ರಕುಮಾರ್, ಮಹೇಶ್ ಪದವಿ ಪೂರ್ವ ಕಾಲೇಜು ವಲಯ ಮುಖ್ಯಸ್ಥ ಕೆ. ಸುರೇಶ್ ಬಾಸ್ರಿ, ಕಾಲೇಜಿನ ಪ್ರಾಚಾರ್ಯ ಎನ್.ಬಿ. ತಿಪ್ಪೇಸ್ವಾಮಿ, ಜಿ.ಬಿ. ಚಂದ್ರಶೇಖರ್, ವೀರಭದ್ರಪ್ಪ, ಪರಮೇಶ್ವರಪ್ಪ ಮತ್ತಿತರರು ಇದ್ದರು.







