Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದ್ವೇಷ ಸಾಧಕರ ಹಾಗೂ ಸಂಪ್ರದಾಯವಾದಿಗಳ...

ದ್ವೇಷ ಸಾಧಕರ ಹಾಗೂ ಸಂಪ್ರದಾಯವಾದಿಗಳ ವಿರುದ್ಧ ಧ್ವನಿ ಎತ್ತಿದ್ದ ಗೌರಿ

ವಿಶ್ವಸಂಸ್ಥೆಯ ಮಾನವಹಕ್ಕು ಸಮಿತಿಯ ಹೈಕಮಿಶನರ್ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ11 Sept 2017 11:29 PM IST
share
ದ್ವೇಷ ಸಾಧಕರ ಹಾಗೂ ಸಂಪ್ರದಾಯವಾದಿಗಳ ವಿರುದ್ಧ ಧ್ವನಿ ಎತ್ತಿದ್ದ ಗೌರಿ

ಜೆನೆವಾ, ಸೆ.11: ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಪತ್ರಕರ್ತೆ ಗೌರಿ ಲಂಕೇಶ್ ದ್ವೇಷಸಾಧಕರ ಹಾಗೂ ಸಂಪ್ರದಾಯವಾದಿಗಳ ವಿರುದ್ಧ ನಿರಂತರವಾಗಿ ದಣಿವರಿಯದೆ ಧ್ವನಿ ಎತ್ತಿದವರು ಎಂದು ವಿಶ್ವಸಂಸ್ಥೆಯ ಮಾನವಹಕ್ಕು ಸಮಿತಿಯ ಹೈಕಮಿಶನರ್ ಝೈದ್ ಅಲ್ ಹಸ್ಸನ್ ಶ್ಲಾಘಿಸಿದ್ದಾರೆ. ಇಲ್ಲಿ ಆರಂಭವಾದ ಮಾನವಹಕ್ಕುಗಳ ಸಮಿತಿ ಸಮ್ಮೇಳನದಲ್ಲಿ ಮಾತನಾಡಿದ ಅವರು, ಮೂಲಭೂತ ಹಕ್ಕುಗಳ ಬಗ್ಗೆ ಮಾತನಾಡುವವರನ್ನು ಬೆದರಿಸಲಾಗುತ್ತಿದೆ ಎಂದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣದಿಂದ ಹಾಗೂ ಗುಂಪು ಹಲ್ಲೆಯನ್ನು ಖಂಡಿಸಿ ಮತ್ತು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಆಗ್ರಹಿಸಿ ಭಾರತದ 12 ನಗರಗಳಲ್ಲಿ ನಡೆದಿರುವ ರ್ಯಾಲಿಗಳನ್ನು ಕಂಡು ಹೃದಯ ತುಂಬಿ ಬಂದಿದೆ ಎಂದರು.

 ರೊಹಿಂಗ್ಯರ ಗಡೀಪಾರು-ಭಾರತದ ಕ್ರಮಕ್ಕೆ ಆಕ್ಷೇಪ :

 ರೊಹಿಂಗ್ಯ ಮುಸ್ಲಿಮರನ್ನು ಸಾಮೂಹಿಕವಾಗಿ ಗಡೀಪಾರು ನಡೆಸುವ ಅಥವಾ ಅವರ ಜೀವಕ್ಕೆ ಅಪಾಯವಿರುವ ಯಾವುದೇ ಸ್ಥಳಕ್ಕೆ ಅವರನ್ನು ಮರಳಿಸುವ ಯತ್ನವನ್ನು ಭಾರತ ಕೈಗೊಳ್ಳುವಂತಿಲ್ಲ ಎಂದು ಎಂದು ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ಹೈಕಮಿಶನರ್ ಝೈದ್ ಅಲ್ ಹಸ್ಸನ್ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯ ಮುಸ್ಲಿಮರ ವಿರುದ್ಧ ವ್ಯಾಪಕ ಹಿಂಸಾಚಾರದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಲು ಭಾರತ ಕೈಗೊಂಡಿರುವ ಕ್ರಮದಿಂದ ವ್ಯಥೆಯಾಗಿದೆ ಎಂದು ಝೈದ್ ಅಲ್ ಹಸ್ಸನ್ ತಿಳಿಸಿದ್ದಾರೆ. ಭಾರತದಲ್ಲಿ ಸುಮಾರು 40,000 ರೊಹಿಂಗ್ಯರು ನೆಲೆಸಿದ್ದು ಅವರಲ್ಲಿ 16,000 ಮಂದಿ ನಿರಾಶ್ರಿತರ ಗುರುತುಕಾರ್ಡ್ ಪಡೆದಿದ್ದಾರೆ ಎಂದವರು ತಿಳಿಸಿದ್ದಾರೆ.

ನಿರಾಶ್ರಿತರ ಕುರಿತಾದ ಒಪ್ಪಂದಕ್ಕೆ ಭಾರತ ಸಹಿ ಹಾಕಿಲ್ಲದ ಕಾರಣ ಈ ವಿಷಯದ ಬಗ್ಗೆ ಇರುವ ಅಂತಾರಾಷ್ಟ್ರೀಯ ಕಾನೂನಿನಿಂದ ಭಾರತಕ್ಕೆ ವಿನಾಯಿತಿ ಇದೆ ಎಂದು ಭಾರತದ ಗೃಹ ಸಚಿವಾಲಯದ ಸಹಾಯಕ ಸಚಿವರು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ . ಆದರೆ ಅಂತಾರಾಷ್ಟ್ರೀಯ ಕಾನೂನಿಗೆ ಭಾರತ ಕೂಡಾ ಬಾಧ್ಯವಾಗಿರುವ ಕಾರಣ ಭಾರತವು ರೊಹಿಂಗ್ಯ ನಿರಾಶ್ರಿತರ ಸಾಮೂಹಿಕ ಗಡೀಪಾರು ಅಥವಾ ಅವರ ಜೀವಕ್ಕೆ ಅಪಾಯ ಇರುವ, ಹಿಂಸೆಗೆ ಒಳಗಾಗುವ ಸಾಧ್ಯತೆ ಇರುವ ಯಾವುದೇ ಪ್ರದೇಶಕ್ಕೆ ಅವರನ್ನು ಮರಳಿಸುವಂತಿಲ್ಲ ಎಂದು ಹಸ್ಸನ್ ಹೇಳಿದರು.

  ಬೌದ್ಧ ಧರ್ಮೀಯರೇ ಅಧಿಕಸಂಖ್ಯೆಯಲ್ಲಿರುವ ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯ ಮುಸ್ಲಿಮ್ ಸಮುದಾಯಕ್ಕೆ ಪೌರತ್ವ ನಿರಾಕರಿಸಲಾಗಿದ್ದು ಅವರ ವಿರುದ್ಧ ತಾರತಮ್ಯದ ಧೋರಣೆ ತೋರಲಾಗುತ್ತಿದೆ. ಇದರಿಂದ ರೊಚ್ಚಿಗೆದ್ದ ರೊಹಿಂಗ್ಯ ಉಗ್ರಗಾಮಿಗಳು ಕಳೆದ ಆಗಸ್ಟ್ 25ರಂದು ಮ್ಯಾನ್ಮಾರ್ ಭದ್ರತಾ ಪಡೆಗಳ ಮೇಲೆ ಆಕ್ರಮಣ ನಡೆಸಿದ ಬಳಿಕ ಸೇನಾಪಡೆಗಳು ನಡೆಸಿದ ಪ್ರತೀಕಾರ ಕ್ರಮದಿಂದ ಕಂಗೆಟ್ಟಿರುವ ರೊಹಿಂಗ್ಯ ಮಸ್ಲಿಮರು ಸಾಮೂಹಿಕವಾಗಿ ನೆರೆಯ ದೇಶಗಳಾದ ಬಾಂಗ್ಲಾ, ಭಾರತ ಇತ್ಯಾದಿ ದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ ಈ ದೇಶಗಳೂ ರೊಹಿಂಗ್ಯರಿಗೆ ಆಶ್ರಯ ನೀಡಲು ನಿರಾಕರಿಸುತ್ತಿರುವ ಕಾರಣ ಇವರು ಅಸಹಾಯಕರಾಗಿದ್ದು ಊಟ, ನಿದ್ದೆ, ಆಶ್ರಯವಿಲ್ಲದೆ ನಿಶ್ಯಕ್ತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X