ಬೆಂಗಳೂರು : ಬೆದರಿಸಿ ನಗದು ಕಳವು

ಬೆಂಗಳೂರು, ಸೆ.12: ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಮೂವರು ಬೈಕ್‌ನಲ್ಲಿ ಹಿಂಬಾಲಿಸಿ ಬಂದು ಅಡ್ಡಗಟ್ಟಿ ಬೆದರಿಸಿ ನಗದು ದೋಚಿರುವ ಘಟನೆ ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಪ್ರಗತಿ ಅಪಾರ್ಟ್‌ಮೆಂಟ್ ನಿವಾಸಿ ಮನೀಶ್‌ಜೋಶಿ ಎಂಬುವರನ್ನು ಬೆದರಿಸಿ ನಗದು ಕಳವು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶನಿವಾರ ರಾತ್ರಿ 9:30ರಲ್ಲಿ ಮನೀಶ್, 2.50 ಲಕ್ಷ ರೂ. ಹಣವನ್ನು ಬ್ಯಾಗ್‌ನಲ್ಲಿಟ್ಟುಕೊಂಡು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ಮೆಡಿಕೇರ್ ಆಸ್ಪತ್ರೆ ಸಮೀಪದ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಮುಂಭಾಗ ಒಂದೇ ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಮೂವರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಬೆದರಿಸಿ ಹಣವಿದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
Next Story





