ಕಾಸರಗೋಡು: ಕೆರೆಗೆ ಹಾರಿ ಆತ್ಮಹತ್ಯೆ
ಕಾಸರಗೋಡು, ಸೆ. 12: ಒಂದು ವರ್ಷದ ಮಗುವಿನ ಜೊತೆಗೆ ತಂದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ಬದಿಯಡ್ಕ ಸಮೀಪದ ನಾರಂಪಾಡಿ ಪುಂಡೂರಿನಲ್ಲಿ ನಡೆದಿದೆ.
ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಪುಂಡೂರಿನ ಮಮ್ಮಿಞ (33) ಮತ್ತು ಪುತ್ರ ಅಶ್ರಫ್ ಮೃತರು ಎಂದು ಗುರುತಿಸಲಾಗಿದೆ.
ಶಬ್ದ ಕೇಳಿ ಧಾವಿಸಿ ಬಂದ ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅವರು ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಿದರು.
ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





