Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವಸಂಸ್ಥೆಯ ಟೀಕೆಗೆ ಭಾರತದ ತೀವ್ರ...

ವಿಶ್ವಸಂಸ್ಥೆಯ ಟೀಕೆಗೆ ಭಾರತದ ತೀವ್ರ ಖಂಡನೆ

ರೋಹಿಂಗ್ಯಾ ಮುಸ್ಲಿಮರ ಗಡೀಪಾರು ವಿಚಾರ

ವಾರ್ತಾಭಾರತಿವಾರ್ತಾಭಾರತಿ12 Sept 2017 7:37 PM IST
share
ವಿಶ್ವಸಂಸ್ಥೆಯ ಟೀಕೆಗೆ ಭಾರತದ ತೀವ್ರ ಖಂಡನೆ

ಹೊಸದಿಲ್ಲಿ, ಸೆ.12: ಭಾರತವು ರೋಹಿಂಗ್ಯಾ ಮುಸ್ಲಿಮರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ ಹಾಗೂ ದೇಶದಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿರುವವರಿಗೆ ಜೀವಬೆದರಿಕೆ ಇದೆ ಎಂಬ ವಿಶ್ವಸಂಸ್ಥೆಯ ಟೀಕೆಯ ಬಗ್ಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ.

 ಕೆಲವು ವೈಯಕ್ತಿಕ ಘಟನೆಗಳನ್ನು ಬಹುದೊಡ್ಡ ಸಾಮಾಜಿಕ ದುರಂತ ಎಂಬ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಭಾರತದಲ್ಲಿ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ, ಸ್ಪಂದನಾಶೀಲ ನಾಗರಿಕ ಸಮಾಜ ಮತ್ತು ಕಾನೂನು ಹಾಗೂ ಮಾನವ ಹಕ್ಕುಗಳಿಗೆ ಗೌರವ ನೀಡುವ ವ್ಯವಸ್ಥೆ ಇರುವ ಬಗ್ಗೆ ಹೆಮ್ಮೆಯಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿ ತಿಳಿಸಿದ್ದಾರೆ. ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಲ್ಲೆಗಳು ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿ ನೀಡಿದ್ದ ಹೇಳಿಕೆಯ ಹಿನ್ನೆಲೆಯಲ್ಲಿ ಭಾರತ ಈ ಹೇಳಿಕೆ ನೀಡಿದೆ.

ಇತ್ತೀಚಿನ ವರ್ಷದಲ್ಲಿ ಮ್ಯಾನ್ಮಾರ್‌ನಿಂದ ಭಾರತಕ್ಕೆ ವಲಸೆ ಬಂದಿರುವ ಸುಮಾರು 40,000ದಷ್ಟು ರೊಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡಲು ನಿರ್ಧರಿಸಿರುವುದಾಗಿ ಭಾರತ ತಿಳಿಸಿತ್ತು. ಇವರಲ್ಲಿ 16,000 ರೊಹಿಂಗ್ಯಾರು ನಿರಾಶ್ರಿತರ ದಾಖಲೆ ಪತ್ರಗಳನ್ನು ಪಡೆದುಕೊಂಡಿದ್ದಾರೆ.

ರೋಹಿಂಗ್ಯಾ ಮುಸ್ಲಿಮರಿಗೆ ಅವರ ದೇಶದಲ್ಲಿ ಭದ್ರತೆ ಇಲ್ಲದ ಕಾರಣ ಅವರನ್ನು ಸಾಮೂಹಿಕವಾಗಿ ಮ್ಯಾನ್ಮಾರ್‌ಗೆ ಗಡೀಪಾರು ನಡೆಸುವ ಯತ್ನವನ್ನು ಭಾರತ ಕೈಗೊಳ್ಳುವಂತಿಲ್ಲ ಎಂದು ಎಂದು ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ಹೈಕಮಿಶನರ್ ಝೈದ್ ಅಲ್ ಹಸ್ಸನ್ ಹೇಳಿದ್ದರು.

ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಮುಸ್ಲಿಮರ ವಿರುದ್ಧ ವ್ಯಾಪಕ ಹಿಂಸಾಚಾರದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಮ್ಯಾನ್ಮಾರ್‌ಗೆ ಗಡೀಪಾರು ಮಾಡಲು ಭಾರತ ಕೈಗೊಂಡಿರುವ ಕ್ರಮದಿಂದ ವ್ಯಥೆಯಾಗಿದೆ ಎಂದು ಝೈದ್ ಅಲ್ ಹಸ್ಸನ್ ಹೇಳಿಕೆ ನೀಡಿದ್ದರು.

 ನಿರಾಶ್ರಿತರ ಕುರಿತಾದ ಒಪ್ಪಂದಕ್ಕೆ ಭಾರತ ಸಹಿ ಹಾಕಿಲ್ಲದ ಕಾರಣ ಈ ವಿಷಯದ ಬಗ್ಗೆ ಇರುವ ಅಂತಾರಾಷ್ಟ್ರೀಯ ಕಾನೂನಿನಿಂದ ಭಾರತಕ್ಕೆ ವಿನಾಯಿತಿ ಇದೆ ಎಂದು ಭಾರತದ ಗೃಹ ಸಚಿವಾಲಯದ ಸಹಾಯಕ ಸಚಿವ ಕಿರಣ್ ರಿಜಿಜು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ . ಆದರೆ ಅಂತಾರಾಷ್ಟ್ರೀಯ ಕಾನೂನಿಗೆ ಭಾರತ ಕೂಡಾ ಬಾಧ್ಯವಾಗಿರುವ ಕಾರಣ ನಿರಾಶ್ರಿತರನ್ನು ಬಲಾತ್ಕಾರದಿಂದ ಗಡೀಪಾರು ಮಾಡುವಂತಿಲ್ಲ ಎಂಬ ಸಾರ್ವಕಾಲಿಕ ನೀತಿಗೆ ಭಾರತ ಬದ್ಧವಾಗಿರಬೇಕು ಎಂದು ಹಸ್ಸನ್ ಹೇಳಿದ್ದರು.

    ಅಲ್ಲದೆ ಜಾನುವಾರು ವ್ಯಾಪಾರಿಗಳು ಹಾಗೂ ಸಾಗಾಟಗಾರರ ಮೇಲೆ ಸ್ವಯಂಘೋಷಿತ ಗೋರಕ್ಷಕರಿಂದ ನಡೆದಿರುವ ಸರಣಿ ಹಲ್ಲೆ ಘಟನೆಯನ್ನು ಉಲ್ಲೇಖಿಸಿದ್ದ ಅವರು, ಭಾರತದಲ್ಲಿ ಗೋರಕ್ಷಣೆಯ ಹೆಸರಲ್ಲಿ ಮಾರಕ ಆಯುಧಗಳಿಂದ ನಡೆಸಲಾಗುತ್ತಿರುವ ಗುಂಪು ಹಲ್ಲೆ ಪ್ರಕರಣ ದಿಗಿಲುಹುಟ್ಟಿಸುತ್ತಿದೆ ಎಂದಿದ್ದರು. ಬೆೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣವನ್ನು ಉಲ್ಲೇಖಿಸಿದ್ದ ಅವರು, ದ್ವೇಷಸಾಧಕರ ಹಾಗೂ ಸಂಪ್ರದಾಯವಾದಿಗಳ ವಿರುದ್ಧ ನಿರಂತರವಾಗಿ ದಣಿವರಿಯದೆ ಧ್ವನಿ ಎತ್ತಿದ್ದ ಗೌರಿ ಲಂಕೇಶ್ ಹತ್ಯೆ ಕಳವಳಕಾರಿಯಾಗಿದೆ .ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಧ್ವನಿ ಎತ್ತುವವರನ್ನು ಬೆದರಿಸಲಾಗುತ್ತಿದೆ . ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಕರಣ ಹಾಗೂ ಗುಂಪು ಹಲ್ಲೆಯನ್ನು ಖಂಡಿಸಿ ಮತ್ತು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಆಗ್ರಹಿಸಿ ಭಾರತದ 12 ನಗರಗಳಲ್ಲಿ ನಡೆದಿರುವ ರ್ಯಾಲಿಗಳನ್ನು ಕಂಡು ಹೃದಯ ತುಂಬಿ ಬಂದಿದೆ ಎಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X