Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಳೆ ನೀರುಗಾಲುವೆ ಕಾಮಗಾರಿ ಅಕ್ರಮ; ತನಿಖೆ...

ಮಳೆ ನೀರುಗಾಲುವೆ ಕಾಮಗಾರಿ ಅಕ್ರಮ; ತನಿಖೆ ನಡೆಸಿ ಸೂಕ್ತ ಕ್ರಮ: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ12 Sept 2017 8:18 PM IST
share
ಮಳೆ ನೀರುಗಾಲುವೆ ಕಾಮಗಾರಿ ಅಕ್ರಮ; ತನಿಖೆ ನಡೆಸಿ ಸೂಕ್ತ ಕ್ರಮ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಸೆ.12: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 842 ಕಿ.ಮೀ ಉದ್ದದ ಮಳೆ ನೀರುಗಾಲುವೆಗೆ ನಿರ್ಮಾಣದಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2012-13ರ ಅವಧಿಯಲ್ಲಿ 664.21 ಕೋಟಿ ರೂ.ಗಳ ವೆಚ್ಚದಲ್ಲಿ 53 ಕಿ.ಮೀ ಉದ್ದದ ಬೃಹತ್ ಕಾಲುವೆ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು.

ಇದೀಗ ರಾಜ್ಯ ಸರಕಾರ ಕಳೆದ ಸಚಿವ ಸಂಪುಟದಲ್ಲಿ 800ಕೋಟಿ ರೂ.ವೆಚ್ಚದಲ್ಲಿ 132 ಕಿ.ಮೀ ಉದ್ದದ ಕಾಮಗಾರಿ ಪ್ರಗತಿಯಲ್ಲಿದೆ ಎಂದ ಅವರು, ನಗರದಲ್ಲಿ ಸುರಿದ ಬಾರಿ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದ್ದು, ಒಳಚರಂಡಿ ವ್ಯವಸ್ಥೆ ಸರಿಪಡಿಸುವ ಜೊತೆಗೆ ಒತ್ತುವರಿ ತೆರವು ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಇದುವರೆಗೆ 1225 ಕಡೆಯ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಇನ್ನೂ 728 ಪ್ರದೇಶದಲ್ಲಿ ತೆರವುಗೊಳಿಸುವ ವಿಚಾರದಲ್ಲಿ ಹಲವು ಪ್ರಕರಣಗಳು ನ್ಯಾಯಾಲಯದ ಮುಂದೆ ಇವೆ. ನಗರದಲ್ಲಿ ಅತಿ ಹೆಚ್ಚು ಮಳೆಯಿಂದ ಆಗಿರುವ ಹಾನಿ ತಡೆಗೆ ಹಲವು ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಜತೆಗೆ ಕೋರಮಂಗಲ, ಜೆ.ಸಿ.ರಸ್ತೆ, ಶಾಂತಿನಗರ ಬಸ್ ನಿಲ್ದಾಣ, ಎಚ್‌ಎಸ್‌ಆರ್ ಲೇಔಟ್, ಮಡಿವಾಳ ಕೆರೆ, ಅರಕೆರೆ, ಕೆ.ಆರ್.ಪುರಂನ ನಂದಗೋಕುಲ ಬಡಾವಣೆಗಳಲ್ಲಿ ಮಳೆಯಿಂದ ಆಗಿರುವ ಹಾನಿಗೆ ಕಾಮಗಾರಿಗಳನ್ನು ಕೈಗೆತ್ತಿಗೊಂಡಿದ್ದು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ತ್ಯಾಜ್ಯದಿಂದ ಇಂಧನ ಉತ್ಪಾದನೆ ಘಟಕವು ಬರುವ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಆಗುವ ನಿರೀಕ್ಷೆ ಇದೆ ಎಂದ ಅವರು, ಕಸ ವಿಲೇವಾರಿಗೆ ಏಳು ಕಾಂಪೋಸ್ಟ್ ಘಟಕಗಳನ್ನು ಆರಂಭಿಸಲಾಗಿದೆ ಎಂದರು.

ಕಸ ವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಪೌರ ಕಾರ್ಮಿಕರ ಖಾಯಂ ನೇಮಕಾತಿ, ಅವರಿಗೂ ಬಯೋಮೆಟ್ರಿಕ್ ವ್ಯವಸ್ಥೆ ರೂಪಿಸಲಾಗುತ್ತಿದೆ. ಅಲ್ಲದೆ, ಹೆಣ್ಣೂರಿನ ಕಲ್ಲುಕ್ವಾರಿ ಸೇರಿ ವಿವಿಧ ಪ್ರದೇಶದಲ್ಲಿ ನಮ ಕ್ವಾರಿಗಳಿಗೆ ಕಸವನ್ನು ಭರ್ತಿ ಮಾಡಿ, ಆ ಪ್ರದೇಶದಲ್ಲಿ ಅರಣ್ಯಾಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಶೀಘ್ರದಲ್ಲೆ ರಸ್ತೆ ದುರಸ್ತಿ: ಮಳೆ ನಿಂತ ಬಳಿಕ ನಗರದಲ್ಲಿನ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು. ಅಲ್ಲದೆ, ಗುಂಡಿಗಳನ್ನು ಮುಚ್ಚುವ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಕೆ.ಜೆ.ಜಾರ್ಜ್ ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು ಮಹಾನಗರ ಪಾಲಿಕೆಗೆ 110ಹಳ್ಳಿಗಳ ಸೇರ್ಪಡೆ ವೇಳೆ ರಾಜಕಾಲುವೆ, ಕುಡಿಯುವ ನೀರು, ಕಸ ವಿಲೇವಾರಿಗೆ ಯಾವುದೇ ಮುನ್ನಚ್ಚರಿಕೆ ಕೈಗೊಂಡಿಲ್ಲ. ಹೀಗಾಗಿ ಇದೀಗ ಮಳೆ ನೀರು, ಕುಡಿಯುವ ನೀರು, ಕಸ ವಿಲೇವಾರಿ ಸಮಸ್ಯೆ ಆಗುತ್ತಿದೆ ಎಂದು ಅವರು ಆಕ್ಷೇಪಿಸಿದರು.

‘ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ನೀಡುವ ಸಂಬಂಧ ಸಚಿವ ರಾಮಲಿಂಗಾರೆಡ್ಡಿ, ಆ ಪಕ್ಷದ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ಶೀಘ್ರದಲ್ಲೆ ತೀರ್ಮಾನಿಸಲಿದ್ದಾರೆ’

-ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X