Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರ ಪ್ರಶಸ್ತಿ ಪಡೆದ ಸುರಿಬೈಲು...

ರಾಷ್ಟ್ರ ಪ್ರಶಸ್ತಿ ಪಡೆದ ಸುರಿಬೈಲು ಶಾಲೆಗೆ 'ಎಸ್ಐಒ' ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ12 Sept 2017 8:20 PM IST
share
ರಾಷ್ಟ್ರ ಪ್ರಶಸ್ತಿ ಪಡೆದ ಸುರಿಬೈಲು ಶಾಲೆಗೆ ಎಸ್ಐಒ ಅಭಿನಂದನೆ

ಬಂಟ್ವಾಳ, ಸೆ. 12: ಸುಮಾರು ಒಂದೂವರೆ ಎಕರೆ ವಿಸ್ತೀರ್ಣದ ಜಮೀನಿನಲ್ಲಿ ಅಡಕೆ ತೋಟ ಸಹಿತ ವಿವಿಧ ತರಕಾರಿ ಬೆಳೆಯೊಂದಿಗೆ ಕೃಷಿ ಚಟುವಟಿಕೆ ನಡೆಸಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಬಂಟ್ವಾಳ ತಾಲೂಕಿನ ಸುರಿಬೈಲು ಸರಕಾರಿ ಉನ್ನತೀಕರಿಸಿದ ಶಾಲೆಯು ಇತ್ತೀಚೆಗೆ ರಾಷ್ಟಮಟ್ಟದ ಸ್ವಚ್ಛ ವಿದ್ಯಾಲಯ (ಎಸ್ ವಿ ಪಿ) ಪ್ರಶಸ್ತಿ ಪಡೆದುಕೊಂಡ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್ ಐ ಒ) ಪಾಣೆಮಂಗಳೂರು ಶಾಖೆಯ ವತಿಯಿಂದ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿಯನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಐ ಒ ಜಿಲ್ಲಾ ಕಾರ್ಯದರ್ಶಿ ಇರ್ಷಾದ್ ವೇಣೂರ್, ಸರಕಾರಿ ಶಾಲೆ ಎಂದು ಕೀಳುಮಟ್ಟದ ಮನೋಭಾವನೆಯಿಂದ ನೋಡುವಂತಹ ಇಂದಿನ ಸಮಾಜದಲ್ಲಿ ಸುರಿಬೈಲು ಸರಕಾರಿ ಶಾಲೆ ಸ್ಚಚ್ಛತೆಯನ್ನು ಕಾಪಾಡಿಕೊಂಡು, ಕೃಷಿ ಚಟುವಟಿಕೆಯಲ್ಲಿಯೂ ತೊಡಗಿಸಿಕೊಂಡು ಖಾಸಗಿ ಶಾಲೆಗಳಿಗಿಂತ ಕಡಿಮೆ ಏನಿಲ್ಲ ಎಂದು ಸಾಬೀತುಪಡಿಸಿದೆ. ಸ್ವಚ್ಛ ವಿದ್ಯಾಲಯ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಣ್ಣ ವಿಚಾರವಲ್ಲ. ಈ ಪ್ರಶಸ್ತಿಯು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದರು.

ಇಂತಹ ರಾಷ್ಟ್ರ ಪ್ರಶಸ್ತಿ ಗಳಿಸಲು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಸಹಿತ ಎಲ್ಲರ ಶ್ರಮವಿದೆ. ಸರಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಖಾಸಗಿ ಶಾಲೆಗಿಂತ ಹೆಚ್ಚು ವೇಗದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ಉದ್ಯಮಿ ಎಸ್.ಎಂ. ಅಬೂಬಕ್ಕರ್ ರವರ ನಿಸ್ವಾರ್ಥ ಸೇವೆಗೆ ಸಂದ ಅರ್ಹ ಪ್ರಶಸ್ತಿಯಾಗಿದೆ. ಇದು ಶಾಲೆಯ ಎಲ್ಲರಿಗೂ ಸಂದ ಗೌರವವಾಗಿದೆ ಎಂದು ಇರ್ಷಾದ್ ವೇಣೂರ್ ಅಭಿನಂದಿಸಿದರು.

ಸೆ.1 ರಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಶಾಲೆಯನ್ನು ದತ್ತು ಪಡೆದುಕೊಂಡಿರುವ ಉದ್ಯಮಿ ಎಸ್.ಎಂ. ಅಬೂಬಕ್ಕರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂಭವಿಯವರಿಗೆ ಎಸ್ ಐ ಒ ಪಾಣೆಮಂಗಳೂರು ಅಧ್ಯಕ್ಷ ತಮೀಝ್ ಅಲಿ ಕಾರಾಜೆ ಸ್ಮರಣಿಕೆ ಹಾಗೂ ಫಲಪುಷ್ಪವನ್ನು ನೀಡಿ ಗೌರವಿಸಿದರು. ಶಾಲೆಯ ಶಿಕ್ಷಕಿ ನೀರಜ ಧನ್ಯವಾದವಿತ್ತರು.
ಈ ಸಂದರ್ಭದಲ್ಲಿ ಎಸ್ ಐ ಒ ಪಾಣೆಮಂಗಳೂರು ಕಾರ್ಯದರ್ಶಿ ಮುಬಾರಿಶ್ ಚೆಂಡಾಡಿ, ಸದಸ್ಯ ರಿಝ್ವಾನ್ ಬೋಳಂಗಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X