ಲಾರಿ - ಬೈಕ್ ಢಿಕ್ಕಿ : ಓರ್ವ ಸಾವು

ದಾವಣಗೆರೆ,ಸೆ.12:ಲಾರಿಯೊಂದು ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹ ಸವಾರ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಗರದ ಪಿಬಿ ರಸ್ತೆಯ ರಾಜಭವನ ಹೊಟೇಲ್ ಬಳಿ ನಡೆದಿದೆ.
ಹಳೆಬಾತಿ ಗ್ರಾಮದ ಕರಿಬಸಪ್ಪ (58) ಎಂಬಾತರೇ ಸ್ಥಳದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಳಿಗ್ಗೆ ದಾವಣಗೆರೆಗೆ ಆಗಮಿಸುತ್ತಿದ್ದ ಸಂದರ್ಭ ವೇಗವಾಗಿ ಬಂದ ಲಾರಿ ಬೈಕ್‍ಗೆ ಢಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಿರಿಜಮ್ಮ ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





