Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಟರಿ ಸಂಸ್ಥೆ ಸಾಮಾಜಿಕ ಬದ್ದತೆ ಹೊಂದಿದೆ...

ರೋಟರಿ ಸಂಸ್ಥೆ ಸಾಮಾಜಿಕ ಬದ್ದತೆ ಹೊಂದಿದೆ : ಎಸ್.ಪಿ.ಎಂ

ವಾರ್ತಾಭಾರತಿವಾರ್ತಾಭಾರತಿ12 Sept 2017 10:37 PM IST
share

ತುಮಕೂರು,ಸೆ.12:ಸಾಮಾಜಿಕ ಬದ್ಧತೆಯೊಂದಿಗೆ ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಹಂಬಲವನ್ನು ರೋಟರಿ ಸಂಸ್ಥೆ ಹೊಂದಿದೆ ಎಂದು ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ.

ತುಮಕೂರು ತಾಲೂಕು ಬೆಳ್ಳಾವಿಯಲ್ಲಿ ರೋಟರಿ ತುಮಕೂರು, ರೀಡ್‍ಬುಕ್ ಫೌಂಡೇಶನ್, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಜೀವನ್ಮುಖಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೋಟರಿ ಸಂಸ್ಥೆ ಉಳ್ಳವರ ಸಂಸ್ಥೆಯಾಗಿದ್ದರೂ,ಸಮಾಜಮುಖಿ ಚಿಂತನೆಯಿಂದಾಗಿ ವಿಶ್ವದೆಲ್ಲೆಡೆ ಹರಡಿದೆ, ನಾನು ವಕೀಲನಾಗಿದ್ದ ರೋಟರಿ ಸದಸ್ಯನಾಗಿದ್ದೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ಧ್ಯೇಯದೊಂದಿಗೆ ರೋಟರಿ ಸಂಸ್ಥೆ,ರೀಡ್‍ಬುಕ್ ಫೌಂಡೇಶನ್ ಪ್ರಯತ್ನ ನಡೆಸುತ್ತಿರುವುದು ಉತ್ತಮವಾಗಿದ್ದು, ಓದಿನಿಂದಾಗಿ ಮಕ್ಕಳಲ್ಲಿ ಓದುವ ಆಸಕ್ತಿ ಹೆಚ್ಚಿಸುವುದರೊಂದಿಗೆ ಮಕ್ಕಳಲ್ಲಿ ಕೌಶಲ್ಯವನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ, ಸಿಎಂ ಸಿದ್ದರಾಮಯ್ಯರವರ ಕನಸಿನ ಕೌಶಲ್ಯ ಕರ್ನಾಟಕಕ್ಕೆ ಪೂರಕವಾಗಿ ರೋಟರಿ ಸಂಸ್ಥೆ ಕಾರ್ಯನಿರ್ವ ಹಿಸುತ್ತಿರುವುದು ಶ್ಲಾಘನೀಯವೆಂದರು.

ಸ್ವಾಮಿ ವಿವೇಕಾನಂದರ ಸ್ಫೂರ್ತಿಯೊಂದಿಗೆ ನವ ಕರ್ನಾಟಕವನ್ನು ನಿರ್ಮಿಸುವ ಸದಾಶಯದೊಂದಿಗೆ ಕೌಶಲ್ಯಾಭಿವೃದ್ಧಿ ನಿಗಮ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ, ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕಿದೆ ಎಂದು ಮುರುಳೀಧರ ಹಾಲಪ್ಪ ತಿಳಿಸಿದರು.

ಶ್ರೀ ವಿರೇಶಾನಂದ ಸರಸ್ವತಿ ಸ್ವಾಮಿಜಿ ಮಾತನಾಡಿ,ವಿದ್ಯಾರ್ಥಿಗಳು ಶಿಸ್ತು, ಸಂಯಮವನ್ನು ರೂಢಿಸಿಕೊಂಡು,ಉತ್ತಮ ವಿದ್ಯಾಭ್ಯಾಸವನ್ನು ಪಡೆದುಕೊಳ್ಳಬೇಕು,ಏಕಾಗ್ರತೆ ಮತ್ತು ಕಠಿಣ ಪರಿಶ್ರಮ ದಿಂದ ಮಾತ್ರ ಯಶಸ್ಸು ಸಿಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಸಸಿ ನೆಡುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುಸ್ತಕ, ತಟ್ಟೆ ಹಾಗೂ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಡಸ್ಟ್‍ಬಿನ್, ನೀರು ಉಳಿಸಲು ಸಿಂಟೆಕ್ಸ್ ಟ್ಯಾಂಕ್ ವಿತರಣೆ ಮಾಡಲಾಯಿತು.
ವೇದಿಕೆಯಲ್ಲಿ ಕಾರದಮಠದ ಶ್ರೀಕಾರದ ವೀರಬಸವ ಸ್ವಾಮೀಜಿಗಳು, ರೋಟರಿ ಜಿಲ್ಲಾ ಗೌವರ್ನರ್ ಆಶಾ ಪ್ರಸನ್ನಕುಮಾರ್,ರೋಟರಿ ಅಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ,ರೋಟರಿ ಪದಾಧಿಕಾರಿಗಳಾದ ಜಿ.ಎನ್.ಮಹೇಶ್, ಎಂ.ಎಸ್.ಉಮೇಶ್, ಮಲ್ಲೇಶಯ್ಯ, ಎಂ.ಎಸ್.ಪ್ರಕಾಶ್, ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X