Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಸೋದ್ಯಮ ಸಮಿತಿ ಸಭೆ : ಆನ್‍ಲೈನ್...

ಪ್ರವಾಸೋದ್ಯಮ ಸಮಿತಿ ಸಭೆ : ಆನ್‍ಲೈನ್ ಮೂಲಕ ಹೋಂ ಸ್ಟೇ ನೋಂದಣಿ ಕಡ್ಡಾಯ

ಜಾಗೃತಿ ಮೂಡಿಸಲು ವೀಣಾ ಅಚ್ಚಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 Sept 2017 10:55 PM IST
share
ಪ್ರವಾಸೋದ್ಯಮ ಸಮಿತಿ ಸಭೆ : ಆನ್‍ಲೈನ್ ಮೂಲಕ ಹೋಂ ಸ್ಟೇ ನೋಂದಣಿ ಕಡ್ಡಾಯ

ಮಡಿಕೇರಿ,ಸೆ.12 :ಹೋಂ ಸ್ಟೇ ಆರಂಭಿಸಲು ಪ್ರವಾಸೋದ್ಯಮ ಇಲಾಖೆಯಡಿ ಆನ್‍ಲೈನ್ ಮೂಲಕ ಕಡ್ಡಾಯ ನೋಂದಣಿ ಹಾಗೂ ಮಾರ್ಗದರ್ಶನ ಸಂಬಂಧಿಸಿದಂತೆ ಇನ್ನಷ್ಟು ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಸಲಹೆ ಮಾಡಿದ್ದಾರೆ.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಹೋಂ ಸ್ಟೇ ನೋಂದಣಿ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಇನ್ನಷ್ಟು ಮಾಹಿತಿ ನೀಡುವುದರ ಜೊತೆಗೆ, ಹೋಂ ಸ್ಟೇ ಪರವಾನಗಿ ಪಡೆಯಲು ಆನ್‍ಲೈನ್ ಮೂಲಕ ನೋಂದಣಿ, ಹೋಂ ಸ್ಟೇ ನಡೆಸಲು ಬೇಕಿರುವ ಮಾನದಂಡಗಳು ಮತ್ತಿತರ ಸಂಬಂಧ ಅಗತ್ಯ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವಂತೆ ವೀಣಾ ಅಚ್ಚಯ್ಯ ತಿಳಿಸಿದರು.  

ಕೆಲವರು ಸ್ಥಳೀಯ ಪಂಚಾಯಿತಿಗಳ ಮೂಲಕ ತೆರಿಗೆ ಪಾವತಿಸಿ ಹೋಂ ಸ್ಟೇ ನಡೆಸುತ್ತಿದ್ದಾರೆ. ಆದರೆ ಆನ್‍ಲೈನ್ ಮೂಲಕ ನೋಂದಣಿ ಮಾಡಬೇಕು ಎಂಬ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಈ ಬಗ್ಗೆ ವ್ಯಾಪಕ ಅರಿವು ಮೂಡಿಸುವಂತೆ ವಿಧಾನ ಪರಿಷತ್ ಸದಸ್ಯರು ಹೇಳಿದರು.  

ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಅನಧಿಕೃತವಾಗಿ ಹೋಂ ಸ್ಟೇ ನಡೆಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತವೆ. ಆದ್ದರಿಂದ ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ ಹೋಂ ಸ್ಟೇ ನೋಂದಣಿ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ರಕ್ಷಣೆ ದೃಷ್ಟಿಯಲ್ಲಿ ಎನ್‍ಒಸಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸಿಸಿಟಿವಿ ಅಳವಡಿಸಲಾಗಿದೆಯೇ, ಹೋಂ ಸ್ಟೇ ನೋಂದಣಿ ಮಾಡಿಸಲಾಗಿದೆಯೇ ಮತ್ತಿತರ ಮಾಹಿತಿಯನ್ನು ಪರಿಶೀಲಿಸಿ ಎನ್‍ಒಸಿ ನೀಡಲಾಗುತ್ತದೆ ಎಂದರು. 

ಸದ್ಯ ಪೊಲೀಸ್ ಇಲಾಖೆಯಿಂದ 150 ಹೋಂ ಸ್ಟೇಗಳಿಗೆ ಎನ್‍ಒಸಿ ನೀಡಲಾಗಿದೆ. ಹಾಗೆಯೇ 39 ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ತಿಳಿಸಿದರು. 

ಪೊಲೀಸ್ ಇಲಾಖೆ ವತಿಯಿಂದ ಎನ್‍ಒಸಿ ನೀಡುವ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಅನಗತ್ಯ ತೊಂದರೆ ನೀಡುವುದು ಕಂಡುಬಂದರೆ ನೇರವಾಗಿ ಕರೆ ಮಾಡಬಹುದು ಎಂದು ಪಿ.ರಾಜೇಂದ್ರ ಪ್ರಸಾದ್ ಅವರು ಹೇಳಿದರು.   

651 ಅರ್ಜಿಗಳು ಸಲ್ಲಿಕೆ 
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿ.ಜಗನ್ನಾಥ್ ಅವರು ಮಾಹಿತಿ ನೀಡಿ ಹೋಂ ಸ್ಟೇ ನೋಂದಣಿ ಸಂಬಂಧಿಸಿದಂತೆ ಆನ್‍ಲೈನ್ ಮೂಲಕ 651 ಅರ್ಜಿಗಳು ಸಲ್ಲಿಕೆಯಾಗಿದ್ದು, ಹೋಂ ಸ್ಟೇ ನೋಂದಣಿ ಶುಲ್ಕವನ್ನು 295 ಮಂದಿ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.  

ಆನ್‍ಲೈನ್ ಮೂಲಕ ನೋಂದಣಿ ಮಾಡದ ಹೋಂ ಸ್ಟೇಗಳು ಅನಧಿಕೃತವಾಗಲಿವೆ. ಆದ್ದರಿಂದ ಆನ್‍ಲೈನ್ ಮೂಲಕವೇ ನೋಂದಣಿ ಮಾಡಬೇಕಿದೆ. ಉಳಿದಂತೆ ಸ್ಥಳೀಯ ಪಂಚಾಯಿತಿ ಮಟ್ಟದಲ್ಲಿ ತೆರಿಗೆ, ಹಾಗೆಯೇ ಪೊಲೀಸ್ ಇಲಾಖೆಯಿಂದ ಎನ್‍ಒಸಿ ಪಡೆಯಬೇಕಿದೆ ಎಂದು ಅವರು ತಿಳಿಸಿದರು.  
ಕೊಡಗು ಹೋಂ ಸ್ಟೇ ಅಸೋಷಿಯೇಷನ್‍ನ ಮಾಜಿ ಅಧ್ಯಕ್ಷರಾದ ಕರುಂಬಯ್ಯ ಅವರು ಕೊಡಗು ಹೋಂ ಸ್ಟೇ ಅಸೋಷಿಯೇಷನ್‍ನಡಿ 252 ಹೋಂ ಸ್ಟೇಗಳು ಸದಸ್ಯತ್ವ ಪಡೆದಿದ್ದು, ಈ ಹೋಂ ಸ್ಟೇಗಳು ಸರ್ಕಾರದ ನಿರ್ದೇಶನವನ್ನು ಚಾಚು ತಪ್ಪದೇ ಪಾಲಿಸುತ್ತವೆ ಎಂದು ಜಗನ್ನಾಥ್ ಮಾಹಿತಿ ನೀಡಿದರು.  
ಹೋಂ ಸ್ಟೇ ಅಸೋಷಿಯೇಷನ್‍ನ ಮೊಂತಿ ಗಣೇಶ್ ಅವರು ಹೋಂ ಸ್ಟೇ ನೋಂದಣಿ ಸಂಬಂಧಿಸಿದಂತೆ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದರು.    
ಹೋಟೆಲ್ ಹಿಲ್ ವ್ಯೂನ ಜಾಹೀರ್ ಅವರು ಅನಧಿಕೃತವಾಗಿ ಹೋಂ ಸ್ಟೇ ನಡೆಸುತ್ತಿರುವವರು ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ಇದರಿಂದಾಗಿ ಸರ್ಕಾರಿ ನೌಕರರಿಗೂ ವಾಸಕ್ಕೆ ಮನೆ ಸಿಗುತ್ತಿಲ್ಲ. ಮಡಿಕೇರಿ ನಗರ ಸೇರಿದಂತೆ ವಿವಿಧೆಡೆ ಜನ ಜೀವನ ನಿರ್ವಹಣೆ ದುಬಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.   

ಹೋಟೆಲ್ ಅಸೋಷಿಯೇಷನ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್ ಅವರು ಮಾತನಾಡಿ ಅನಧಿಕೃತವಾಗಿ ನಡೆಸುತ್ತಿರುವ ಹೋಂ ಸ್ಟೇಗಳು ಸರ್ಕಾರದ ನಿಯಮವನ್ನು ಪಾಲಿಸುತ್ತಿಲ್ಲ. ಹಾಗೆಯೇ ಟ್ರೇಡ್ ಪರವಾನಗಿಯನ್ನು ಅನಿಯಮಿತವಾಗಿ ಪಡೆಯುತ್ತಿದ್ದಾರೆ ಎಂದು ಅವರು ದೂರಿದರು. 
ಅನಧಿಕೃತ ಹೋಂ ಸ್ಟೇಗಳ ನಿಯಂತ್ರಣ ಸಂಬಂಧಿಸಿದಂತೆ ಸಾಕಷ್ಟು ಬಾರಿ ಚರ್ಚೆ ನಡೆದಿದೆ. ಆದರೆ ಕಾರ್ಯರೂಪಕ್ಕೆ ಬರದಿರುವುದಕ್ಕೆ ಜಿಲ್ಲಾಧಿಕಾರಿ ಅವರು ಅಸಮಾಧಾನ ವ್ಯಕ್ತಪಡಿಸಿದರು. 

ಪ್ರವಾಸಿ ಟ್ಯಾಕ್ಸಿ ಸಂಬಂಧಿಸಿದಂತೆ ಒಟ್ಟು 30 ಅರ್ಜಿಗಳು ಮಾತ್ರ ಬಂದಿದೆ. ಇದರಲ್ಲಿ 17 ಅಭ್ಯರ್ಥಿಗಳು ಅರ್ಹರಾಗಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಅವರು ಮಾಹಿತಿ ನೀಡಿದರು. 

ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 24 ಅರ್ಜಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ 6 ಅರ್ಜಿಗಳು ಮಾತ್ರ ಬಂದಿವೆ. ಸರ್ಕಾರ ಶೇ.50ರಷ್ಟು ಸಹಾಯಧನ ನೀಡುತ್ತದೆ. ಆದರೆ ಯಾರೂ ಮುಂದೆ ಬರುತ್ತಿಲ್ಲ ಎಂದು ಅವರು ಹೇಳಿದರು. ಈ ಬಗ್ಗೆ ಮಾತನಾಡಿದ ವೀಣಾ ಅಚ್ಚಯ್ಯ ಅವರು ಸಾರ್ವಜನಿಕರಿಗೆ ಇನ್ನಷ್ಟು ಮಾಹಿತಿ ನೀಡುವಂತೆ ಸಲಹೆ ನೀಡಿದರು. 
ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಅವರು ಹೋಂ ಸ್ಟೇ ನಡೆಸುವವರು ಸ್ಥಳೀಯ ಪಂಚಾಯಿತಿಗಳಲ್ಲಿ ತೆರಿಗೆ ಪಾವತಿಸಿ ನಡೆಸುತ್ತಿದ್ದಾರೆ ಎಂದು ಹೇಳಿದರು. 

ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಕೊಡವ ಹೆರಿಟೇಜ್ ಕೇಂದ್ರ ನಿರ್ಮಾಣ, ಮಲ್ಲಳ್ಳಿ ಜಲಪಾತ ಬಳಿ ಇರುವ ಮೆಟ್ಟಿಲುಗಳ ನಿರ್ಮಾಣ ಕಾಮಗಾರಿ, ಅಬ್ಬಿ ಜಲಪಾತ ಪ್ರದೇಶದಲ್ಲಿ ಪ್ಲಾಟ್ ಫಾರಂ, ರೈಲಿಂಗ್ಸ್, ಪಾಥ್ ವೇ ಮೆಟ್ಟಿಲು ದುರಸ್ತಿ ಮತ್ತಿತರ ಅಭಿವೃದ್ಧಿ ಕಾಮಗಾರಿಗಳು, ಚೆನ್ನರಾಯಪಟ್ಟಣದಿಂದ ದುಬಾರೆವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ, ದುಬಾರೆಯ ಕಾವೇರಿ ನದಿ ಭಾಗದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. 

ಚೇಂಬರ್ ಆಫ್ ಕಾಮರ್ಸ್‍ನ ಜಿಲ್ಲಾ ಅಧ್ಯಕ್ಷರಾದ ಬಿ.ಎಂ.ಪ್ರಕಾಶ್, ಕೊಡಗು ಹೋಂ ಸ್ಟೇ ಅಸೋಷಿಯೇಷನ್‍ನ ವಿಜು ಚಂಗಪ್ಪ, ಹೋಂ ಸ್ಟೇ ಅಸೋಷಿಯೇಷನ್‍ನ ನವೀನ್ ಅಂಬೆಕಲ್, ಕೇಶವ ಕಾಮತ್, ಪೌರಾಯುಕ್ತರಾದ ಬಿ.ಶುಭಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ಜಯ, ತಾ.ಪಂ.ಇಒ ಜೀವನ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಹೋಟೆಲ್ ಅಸೋಷಿಯೇಷನ್ ಭಾಸ್ಕರ್, ದುಬಾರೆ ರಿವರ್ ರ್ಯಾಪ್ಟಿಂಗ್ ರತೀಶ್, ಸದಸ್ಯರು, ನಾನಾ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X