Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ನೋಟು ಬದಲಾವಣೆಯೂ ಪ್ಲೇಟು ಬದಲಾವಣೆಯೂ

ನೋಟು ಬದಲಾವಣೆಯೂ ಪ್ಲೇಟು ಬದಲಾವಣೆಯೂ

ಸುರೇಶ್ ಭಟ್, ಬಾಕ್ರಬೈಲುಸುರೇಶ್ ಭಟ್, ಬಾಕ್ರಬೈಲು13 Sept 2017 12:14 AM IST
share
ನೋಟು ಬದಲಾವಣೆಯೂ ಪ್ಲೇಟು ಬದಲಾವಣೆಯೂ

ಕಪ್ಪುಹಣ, ಖೋಟಾ ನೋಟು, ಭಯೋತ್ಪಾದನೆ ನಿಗ್ರಹ ಎಂಬ ತ್ರಿವಳಿ ಗುರಿಗಳ ನೋಟು ರದ್ದತಿ ಕುರಿತಂತೆ, ಕಪ್ಪುಹಣಕ್ಕೆ ಸಂಬಂಧಿಸಿದಂತೆ ಮೋದಿಯಾದಿಯಾಗಿ ಸಂಘ ಪರಿವಾರದ ದೊಡ್ಡದೊಡ್ಡ ನಾಯಕರ ಹೇಳಿಕೆಗಳು, ಪ್ರತಿಪಾದನೆಗಳು ಮತ್ತು ಪ್ಲೇಟು ಬದಲಾವಣೆಗಳತ್ತ ದೃಷ್ಟಿ ಹರಿಸಲು ಇದು ಸೂಕ್ತ ಕಾಲ ಅನಿಸುತ್ತದೆ.

2014ರ ಚುನಾವಣಾ ಪ್ರಚಾರ ಕಾಲದಲ್ಲಿ ನೂರಾರು ಭರವಸೆಗಳೊಂದಿಗೆ ಅಂಗೈಯಲ್ಲಿ ಸ್ವರ್ಗವನ್ನೇ ತೋರುತ್ತಾ ತನ್ನ ಜಿಹ್ವಾಚಳಕದಿಂದ ಮತದಾರರಿಗೆ ಮಂಕುಬೂದಿ ಎರಚಿದ ನಟ ಸಾರ್ವಭೌಮ ನರೇಂದ್ರ ಮೋದಿಯ ಆಡಳಿತ ವೈಫಲ್ಯಗಳ ಸರಣಿ ಒಂದೊಂದಾಗಿ ಬಿಚ್ಚಿಕೊಳ್ಳುತ್ತಿದೆ. ಮೂರು ವರ್ಷಗಳ ನಂತರ ಆಡಳಿತದ ಎಲ್ಲಾ ರಂಗಗಳಲ್ಲೂ ಸೋತಿರುವ ಮೋದಿ ಸರಕಾರದ ಬಳಿ ಹೇಳಿಕೊಳ್ಳುವಂತಹ ಒಂದೇ ಒಂದು ಸಾಧನೆಯೂ ಇಲ್ಲ. ಲೋಕಪಾಲರ ಹುದ್ದೆಯೇ ಇನ್ನೂ ಖಾಲಿ ಬಿದ್ದಿರುವಾಗ ಮೋದಿಯ ತಥಾಕಥಿತ ಭ್ರಷ್ಟಾಚಾರ ವಿರೋಧಿ ಹೋರಾಟದ ಪ್ರಾಮಾಣಿಕತೆ ಎಷ್ಟೆಂದು ಯಾರೇ ಆದರೂ ಊಹಿಸಬಹುದು. ಕಪ್ಪುಹಣ, ಖೋಟಾ ನೋಟು, ಭಯೋತ್ಪಾದನೆ ನಿಗ್ರಹ ಎಂಬ ತ್ರಿವಳಿ ಗುರಿಗಳ ನೋಟು ರದ್ದತಿ ಕುರಿತಂತೆ, ಕಪ್ಪುಹಣಕ್ಕೆ ಸಂಬಂಧಿಸಿದಂತೆ ಮೋದಿಯಾದಿಯಾಗಿ ಸಂಘ ಪರಿವಾರದ ದೊಡ್ಡದೊಡ್ಡ ನಾಯಕರ ಹೇಳಿಕೆಗಳು, ಪ್ರತಿಪಾದನೆಗಳು ಮತ್ತು ಪ್ಲೇಟು ಬದಲಾವಣೆಗಳತ್ತ ದೃಷ್ಟಿ ಹರಿಸಲು ಇದು ಸೂಕ್ತ ಕಾಲ ಅನಿಸುತ್ತದೆ.

ಕಪ್ಪುಹಣದ ಬಗ್ಗೆ ಅಂದು 

ಫೆಬ್ರವರಿ 1, 2011ರಂದು ನರೇಂದ್ರ ಮೋದಿ ಮಾಡಿದ್ದ ಟ್ವೀಟ್ ಹೀಗಿದೆ: ‘‘ನಾನಿಂದು ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ವಿಚಾರಿಸಿದ್ದೇನೆ, ‘ಅಕ್ರಮ ಹಣ ಸಕ್ರಮಗೊಳಿಸುವಿಕೆ ವಿರುದ್ಧದ ಕಾಯ್ದೆ’ಯನ್ನು (Anti Money Laundering Act) ನಾವ್ಯಾಕೆ ಕಪ್ಪುಹಣ ಕುರಿತ ತನಿಖೆಗೆ ಬಳಸುವುದಿಲ್ಲ?.’’ 2014ರ ಚುನಾವಣೆಗಳ ಸಂದರ್ಭದಲ್ಲಿ ಅವರು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ತಾನು ವಿದೇಶಗಳಲ್ಲಿರುವ ಕಪ್ಪುಹಣವನ್ನು ಮರಳಿ ತಂದಾಗ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ರೂ. 15ರಿಂದ 20 ಲಕ್ಷ ಸಿಗಲಿದೆ ಎಂದು ಘೋಷಿಸಿದ್ದರು.

2011ನೆ ಇಸವಿಯ ಜನವರಿ 18ರಂದು ನಿತಿನ್ ಗಡ್ಕರಿ ಕಪ್ಪುಹಣ ಕುರಿತಂತೆ ಯುಪಿಎ ಸರಕಾರವನ್ನು ಗುರಿಯಾಗಿಸಿ ಹೇಳಿಕೆಯೊಂದನ್ನು ನೀಡಿದ್ದರು: ‘‘ಸ್ವಿಸ್ ಬ್ಯಾಂಕು ಖಾತೆಗಳಲ್ಲಿ ಸುಮಾರು ರೂ. 21 ಲಕ್ಷ ಕೋಟಿ ಕಾಳಧನ ಜಮಾ ಆಗಿದೆ. ಸ್ವಿಸ್ ಬ್ಯಾಂಕುಗಳ ಖಾತೆದಾರರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸುವವರ ಪ್ರಾಮಾಣಿಕತೆ ಮತ್ತು ಋಜುತ್ವಗಳ ಬಗ್ಗೆ ಗಂಭೀರ ಪ್ರಶ್ನೆಗಳೇಳುತ್ತವೆ’’ ಎಂದವರು ಹೇಳಿದ್ದರು.

ಅದೇ ದಿನ ಮತ್ತೋರ್ವ ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಕೂಡಾ ‘‘ದುಪ್ಪಟ್ಟು ತೆರಿಗೆ ಹೇರದಿರುವಿಕೆ ಒಪ್ಪಂದದ ನಿಯಮಾನುಸಾರ ಕಾಳಧನಿಕರ ಹೆಸರುಗಳನ್ನು ಕೇವಲ ಸರ್ವೋಚ್ಚ ನ್ಯಾಯಾಲಯಕ್ಕಷ್ಟೆ ತೋರಿಸಬಹುದು ಹೊರತು ದೇಶದ ಪ್ರಜೆಗಳಿಗೆ ಅಲ್ಲ ಎಂದು ಸರಕಾರ ಹೇಳುತ್ತಿದೆ. ಈ ತರ್ಕಕ್ಕೆ ಆಧಾರವಿಲ್ಲ......... ವಿದೇಶಿ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವವರ ಹೆಸರುಗಳ ಪ್ರಕಟನೆಯನ್ನು ಯಾಕೆ ನಿಷೇಧಿಸಲಾಗಿದೆಯೆಂದು ತಿಳಿಯುವ ಹಕ್ಕು ದೇಶಕ್ಕಿದೆ. ಆ ಹೆಸರುಗಳು ತಕ್ಷಣ ಬಿಡುಗಡೆಗೊಳ್ಳುವುದನ್ನು ದೇಶ ಎದುರುನೋಡುತ್ತಿದೆ’’ ಎಂದು ಯುಪಿಎ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಎಪ್ರಿಲ್ 17, 2014ರಂದು ಮಾತನಾಡಿದ ಅಂದಿನ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ‘‘ನಾವು ಅಧಿಕಾರಕ್ಕೆ ಬಂದರೆ ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪುಹಣವನ್ನು 100 ದಿನಗಳೊಳಗಾಗಿ ಭಾರತಕ್ಕೆ ವಾಪಸು ತರುತ್ತೇವೆ’’ ಎಂದು ಭರವಸೆಯಿತ್ತಿದ್ದರು.

ಇನ್ನೊಬ್ಬ ಮುಖಂಡ ಪ್ರಕಾಶ್ ಜಾವಡೇಕರ್, ‘‘ಯುಪಿಎ ಸರಕಾರ ವಿದೇಶಗಳಲ್ಲಿರುವ ಕಪ್ಪುಹಣವನ್ನು ಭಾರತಕ್ಕೆ ಮರಳಿ ತರುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರ ಇದನ್ನು ಮುಚ್ಚಿಡಲು ಬಯಸುತ್ತಿದೆ; ಹಲವಾರು ದೇಶಗಳ ಜತೆ ದುಪ್ಪಟ್ಟು ತೆರಿಗೆ ಹೇರದಿರುವಿಕೆ ಒಪ್ಪಂದವಿರುವ ನೆಪವೊಡ್ಡುತ್ತಿದೆ. ಆ ಮೂಲಕ ಖಾತೆದಾರರ ಹೆಸರುಗಳನ್ನು ಬಹಿರಂಗಗೊಳಿಸದಿರಲು ಯತ್ನಿಸುತ್ತಿದೆ’’ ಎಂದು ಆರೋಪಿಸಿದರು.

ಕಪ್ಪುಹಣದ ಬಗ್ಗೆ ಇಂದು

ಮೋದಿ ಸರಕಾರ ಅಕ್ಟೋಬರ್ 17, 2014ರಂದು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿದಾವಿತ್‌ನಲ್ಲಿ ‘‘ದುಪ್ಪಟ್ಟು ತೆರಿಗೆ ಹೇರದಿರುವಿಕೆ ಒಪ್ಪಂದ ತನ್ನನ್ನು ಯಾವುದೇ ವಿವರಣೆ ನೀಡದಂತೆ ಕಟ್ಟಿಹಾಕಿದೆ........ ಸರಕಾರ ಕಾಳಧನಿಕರ ಹೆಸರುಗಳನ್ನು ಬಯಲುಗೊಳಿಸಿದರೆ ಅದು ಗೌಪ್ಯತೆ ಕಾಪಾಡುವ ನಿಯಮಗಳನ್ನು ಉಲ್ಲಂಘಿಸಿದಂತಾಗಲಿದೆ. ಇದರ ಪರಿಣಾಮವಾಗಿ ಭಾರತದ ಸ್ಥಾನಮಾನ ಕೆಳಗಿಳಿಯಲಿದೆ’’ ಎಂದು ತಿಳಿಸಲಾಗಿದೆ! ಇದು ಚುನಾವಣಾ ಕಾಲದ ಎಲ್ಲಾ ಹೇಳಿಕೆಗಳಿಗೆ ತದ್ವಿರುದ್ಧವಾಗಿದೆ!

ಇವರಿಗ್ಯಾಕೆ ರಕ್ಷಣೆ ಒದಗಿಸುತ್ತೀರಿ ಎಂದು ನ್ಯಾಯಾಲಯ ಪ್ರಶ್ನಿಸಿದಾಗ ಸಂಕಷ್ಟಕ್ಕೆ ಸಿಲುಕಿದ ಸರಕಾರ ಕ್ಷಣಮಾತ್ರದಲ್ಲಿ ಯೂ ಟರ್ನ್ ಹೊಡೆದು ಕೆಲವೊಂದು ಪ್ರಮುಖ ವ್ಯಕ್ತಿಗಳ ಹೆಸರುಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿತು. ಈ ದುರುದ್ದೇಶಪೂರ್ವಕ ಕಾರ್ಯತಂತ್ರದಿಂದ ಕೆರಳಿದ ನ್ಯಾಯಾಲಯ ಅಕ್ಟೋಬರ್ 28, 2014ರ ಒಳಗಾಗಿ ಎಲ್ಲಾ ಖಾತೆದಾರರ ಪಟ್ಟಿಯನ್ನು ತನಗೆ ಸಲ್ಲಿಸುವಂತೆ ತಾಕೀತು ಮಾಡಿತು. ಅದರಂತೆ ಮೋದಿ ಸರಕಾರ ನ್ಯಾಯಾಲಯಕ್ಕೆ ಕೊಟ್ಟಿರುವ ಹೆಸರುಗಳು ಮಾತ್ರ ಈಗಾಗಲೇ ಯುಪಿಎ ಸರಕಾರ ಬಿಡುಗಡೆ ಮಾಡಿರುವ ಹೆಸರುಗಳೇ ಆಗಿವೆ!! ಅಸಲಿ ಸಂಗತಿ ಏನೆಂದರೆ ಮೋದಿ ಸರಕಾರ ಕಳೆದ ಮೂರು ವರ್ಷಗಳಲ್ಲಿ ವಿದೇಶಗಳಿಂದ ಒಂದು ನಯಾಪೈಸೆ ಕಪ್ಪುಹಣವನ್ನೂ ವಾಪಸ್ ತಂದಿಲ್ಲ!! ಈಚಿನ ಒಂದು ‘ಮನ್ ಕಿ ಬಾತ್’ನಲ್ಲಿ ‘‘ವಿದೇಶಗಳಲ್ಲಿರುವ ಕಪ್ಪುಹಣದ ಪ್ರಮಾಣ ಎಷ್ಟೆಂದು ತನಗೆ ತಿಳಿದಿಲ್ಲ’’ ಎಂದು ಖುದ್ದು ಮೋದಿಯೇ ಒಪ್ಪಿಕೊಂಡಿದ್ದಾರೆ!!

ಕಿಸಾನ್ ವಿಕಾಸ್ ಪತ್ರಗಳು (ಕೆವಿಪಿ) ಕಪ್ಪುಹಣವನ್ನು ಬಿಳಿಯಾಗಿಸಲು, ಭಯೋತ್ಪಾದನೆಗೆ ಹಣಕಾಸು ಒದಗಿಸಲು ದುರ್ಬಳಕೆ ಆಗುತ್ತಿವೆ ಎಂದು ಜೂನ್ 7, 2011ರಂದು ವರದಿ ನೀಡಿದ್ದ ಶ್ಯಾಮಲಾ ಗೋಪಿನಾಥ್ ಸಮಿತಿ ಸದರಿ ಯೋಜನೆಯನ್ನು ಸ್ಥಗಿತಗೊಳಿಸಲು ಸೂಚಿಸಿತ್ತು (ಪುಟ 51). ಆ ಸೂಚನೆಯ ಮೇರೆಗೆ ಯುಪಿಎ ಸರಕಾರ ನಿಲ್ಲಿಸಿದ್ದ ಈ ಕೆವಿಪಿ ಯೋಜನೆಯನ್ನು ಮೋದಿ ಸರಕಾರ ಸೆಪ್ಟಂಬರ್ 23, 2014ರಂದು ಪುನಾರಂಭಿಸಿದೆ! 

share
ಸುರೇಶ್ ಭಟ್, ಬಾಕ್ರಬೈಲು
ಸುರೇಶ್ ಭಟ್, ಬಾಕ್ರಬೈಲು
Next Story
X