Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಮೀನಿಗೆ ತೆರಳದಂತೆ ಅಡ್ಡಿಪಡಿಸುವವರ...

ಜಮೀನಿಗೆ ತೆರಳದಂತೆ ಅಡ್ಡಿಪಡಿಸುವವರ ವಿರುದ್ದ ಕ್ರಮ ಜರುಗಿಸಲು ಒತ್ತಾಯಿಸಿ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ13 Sept 2017 6:34 PM IST
share

ಚಿಕ್ಕಮಗಳೂರು, ಸೆ.1: ನಮ್ಮ ಜಮೀನಿಗೆ ಹೋಗದಂತೆ ದಾರಿಗೆ ಬೇಲಿ ಹಾಕಿ ಅಡ್ಡಿಪಡಿಸುತ್ತಿರುವ ಹಾಗೂ ಜಮೀನಿಗೆ ನೀರು ಬಿಡದೆ ಅಡ್ಡಿಪಡಿಸಿ, ಬೆದರಿಕೆ ಹಾಕಿರುವವರ ವಿರುದ್ದ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬಸಗೋಡು ಗ್ರಾಮ, ವಸ್ತಾರೆ ಹೋಬಳಿ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದಾರೆ.

ಬಸಗೋಡು ಗ್ರಾಮದಲ್ಲಿ ಅನೇಕ ವರ್ಷಗಳಿಂದ ಕೃಷಿ ಮಾಡಿಕೊಂಡಿದ್ದೆವು. ಆದರೆ ಇತ್ತೀಚೆಗೆ ಬೊಂಬೈಲು ಗ್ರಾಮದ ಬಿ.ಉಮೇಶ್ ಎಂ¨ವರು ನಮ್ಮ ಜಮೀನಿಗೆ ತಿರುಗಾಡುವ ದಾರಿಗೆ ಬೇಲಿ ಹಾಕಿ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ಓಡಾಡಲು ಮತ್ತು ಬೇಸಾಯಕ್ಕೆ ತೊಂದರೆಯಾಗುತ್ತಿದೆ. ದನಕರುಗಳಿಗೂ ಓಡಾಡಲು ಸಮಸ್ಯೆಯಾಗಿದೆ. ಜಮೀನಿಗೆ ನೀರಿನ ಸೌಲಭ್ಯಕ್ಕಾಗಿ ಸರ್ಕಾರದಿಂದ ಕಾಲುವೆ ನಿರ್ಮಿಸಿ, ಅದಕ್ಕೆ ರಿವಿಟ್‍ಮೆಂಟ್ ಹಾಕಿ ಚಾನಲ್ ಇದೆ.

ಇದರಿಂದ ನಮ್ಮ ಜಮೀನುಗಳಿಗೆ ನೀರು ಹರಿದುಬರುವಂತೆ ಅನುಕೂಲ ಕಲ್ಪಿಸಿಕೊಡಲಾಗಿತ್ತು. ಉಮೇಶ್ ಇವರ ಜಮೀನಿನ ಮೂಲಕವೇ ನಮ್ಮ ಜಮೀನಿಗೆ ನೀರು ಹಾದು ಹೋಗಬೇಕಾಗಿದೆ. ಆದರೆ ಇವರು ನಮ್ಮ ಜಮೀನುಗಳಿಗೆ ಹಾದು ಬರುವ ಕಾಲುವೆ ನೀರನ್ನು ಅಡ್ಡಗಟ್ಟಲಾಗಿದ್ದು, ಜಮೀನಿಗೆ ನೀರು ಇಲ್ಲದೇ ಬೆಳೆಗಳು ಒಣಗಿ ಹೋಗುವ ಸ್ಥಿತಿಯಲ್ಲಿವೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಕೇಳಲು ಹೋದರೆ ಆವಾಚ್ಯ ಶಬ್ದಗಳಿಂದ ನಿಂದಿಸಿ ನೀವುಗಳು ಇದರ ಬಗ್ಗೆ ಮಾತನಾಡಲು ಬಂದರೆ ನಿಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ.

ಈ ಸಮಸ್ಯೆ ಬಗ್ಗೆ ಆ.17ರಂದು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿ ಅವರ ಗಮನಕ್ಕೆ ತರಲಾಗಿದೆ. ಸೆ.5ರಂದು ಉಪವಿಭಾಗಾಧಿಕಾರಿ ಗಮನಕ್ಕೂ ತರಲಾಗಿತ್ತು. ಆರ್.ಐ. ಅವರು ಸೆ.7 ರಂದು ಬಸಗೋಡು ಗ್ರಾಮಕ್ಕೆ ಬಂದು ಜಾಗವನ್ನು ಪರಿಶೀಲಿಸಿ ಬೇಲಿ ತೆರವು ಮಾಡಿ ನೀರು ಬಿಡುವಂತೆ ಉಮೇಶ್‍ಗೆ ಹೇಳಿದರೂ ಅಧಿಕಾರಿಗಳ ಮಾತಿಗೆ ಬೆಲೆ ಕೊಡದೇ ಉಡಾಫೆಯಿಂದ ವರ್ತಿಸಿ ಸಮಸ್ಯೆಯನ್ನು ಜಠಿಲಗೊಳಿಸಿದ್ದಾರೆ ಎಂದಿದ್ದಾರೆ.

ಬಸಗೋಡು ಗ್ರಾಮದ ಕುಮಾರಸ್ವಾಮಿ ಎಂಬವರು ಗದ್ದೆಯನ್ನು ತೋಟ ಮಾಡಲು ಮುಂದಾಗಿದ್ದು ಜೆಸಿಬಿಯಿಂದ ಅವರ ಜಮೀನಿನಲ್ಲಿದ್ದ ದೊಡ್ಡ ದೊಡ್ಡ ಕಲ್ಲುಬಂಡೆಗಳನ್ನು ಮತ್ತು ಬಾಂದ್ ಕಲ್ಲುಗಳನ್ನು ತೆಗೆದು ಪಕ್ಕದಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಇರುವ ಹಳ್ಳಕ್ಕೆ ಅಡ್ಡಗಟ್ಟಲಾಗಿದೆ. ಇದರಿಂದ ಹಳ್ಳದಿಂದ ಬರುವ ನೀರು ನಮ್ಮ ಗದ್ದೆಯ ಮೇಲೆ ಹರಿದು ಬರುತ್ತಿದ್ದು ಬೆಳೆಗೆ ಹಾನಿಯುಂಟಾಗುವಂತಹ ಪರಿಸ್ಥಿತಿ ಎದುರಾಗಿದೆ.

ಇದನ್ನು ತೆಗೆಯುವಂತೆ ಕುಮಾರಸ್ವಾಮಿಗೆ ಹೇಳಿದರೆ ಉಡಾಫೆಯ ವರ್ತನೆ ನೀಡಿ ಆವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಆದ್ದರಿಂದ ನಮಗೆ ಮತ್ತು ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಹಳ್ಳದಲ್ಲಿ ಅಡ್ಡಗಟ್ಟಿರುವ ಕಲ್ಲುಬಂಡೆಗಳನ್ನು ತೆಗೆಸಬೇಕು. ಮತ್ತು ನಮಗೆ ಯಾವುದೇ ಬೆಳೆಗೆ ಹಾನಿಯಾಗದಂತೆ ತಡೆಯುವುದರೊಂದಿಗೆ ನಮಗೆ ಅನುಕೂಲ ಮಾಡಿಕೊಡಬೇಕಾಗಿದೆ. ಹಾಗೂ ಕೃಷಿಗೆ ಅಡ್ಡಿಪಡಿಸಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

 ಈ ಸಮಯದಲ್ಲಿ ಬಸಗೋಡು ಗ್ರಾಮದ ವಾಸಿಗಳಾದ ಚನ್ನಯ್ಯ, ಸೋಮಮ್ಮ, ಬಿ.ಎಸ್.ನಿಂಗಯ್ಯ, ಹೊನ್ನಯ್ಯ, ನಿಂಗಯ್ಯ, ರಮೇಶ್ ಮನವಿ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X