Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ದಶಕಗಳ ಹಿಂದಿನ ಕಡತಗಳ...

'ದಶಕಗಳ ಹಿಂದಿನ ಕಡತಗಳ ಕಂಪ್ಯೂಟರೀಕರಣಕ್ಕೆ ಕ್ರಮ' :ಇಸ್ಮಾಯಿಲ್ ಖಾನ್

ವಾರ್ತಾಭಾರತಿವಾರ್ತಾಭಾರತಿ13 Sept 2017 6:57 PM IST
share
ದಶಕಗಳ ಹಿಂದಿನ ಕಡತಗಳ ಕಂಪ್ಯೂಟರೀಕರಣಕ್ಕೆ ಕ್ರಮ :ಇಸ್ಮಾಯಿಲ್ ಖಾನ್

ಶಿವಮೊಗ್ಗ, ಸೆ. 13: 'ನಗರಾಭಿವೃದ್ದಿ ಪ್ರಾಧಿಕಾರದ ಕಡತಗಳನ್ನು ಸಂಪೂರ್ಣವಾಗಿ ಕಂಪ್ಯೂಟರೀಕರಣಗೊಳಿಸಿ, ಸಂರಕ್ಷಣೆಗೆ ಕ್ರಮಕೈಗೊಳ್ಳಲಾಗಿದೆ' ಎಂದು ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ (ಸೂಡಾ) ದ ಅಧ್ಯಕ್ಷ ಇಸ್ಮಾಯಿಲ್ ಖಾನ್ ತಿಳಿಸಿದ್ದಾರೆ. 

ಬುಧವಾರ ಅಧ್ಯಕ್ಷರು ಪ್ರಾಧಿಕಾರದ ಕಚೇರಿಯ ವಿವಿಧ ವಿಭಾಗಗಳಿಗೆ ದಿಢೀರ್ ಭೇಟಿಯಿತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಪರಿಶೀಲಿಸಿದರು. ಈ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 
1978 ರಿಂದ ಇಂದಿನವರೆಗಿನ ಎಲ್ಲ ಪ್ರಮುಖ ಕಡತಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ. ಈಗಾಗಲೇ ಸಾವಿರಾರು ಕಡತಗಳ ಮಾಹಿತಿಯನ್ನು ಕಂಪ್ಯೂಟರ್‍ನಲ್ಲಿ ದಾಖಲಿಸುವ ಕೆಲಸ ನಡೆಸಲಾಗಿದ್ದು, ಪ್ರಕ್ರಿಯೆ ಮುಂದುವರಿದಿದೆ. ದಾಖಲೀಕರಣ ಪೂರ್ಣಗೊಂಡರೆ ಸಾರ್ವಜನಿಕರು ತಮಗೆ ಅಗತ್ಯವಿರುವ ಕಡತಗಳನ್ನು ನಿಯಮಾನುಸಾರ ಸುಲಭವಾಗಿ ಪಡೆದುಕೊಳ್ಳಬಹುದಾಗಿದೆ ಎಂದರು. 

ತಾವು ಅಧ್ಯಕ್ಷರಾಗಿ ನಿಯೋಜನೆಗೊಂಡ ನಂತರ ಪ್ರಾಧಿಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಾಲೋಚನೆ ಕೂಡ ನಡೆಸಲಾಗಿದ್ದು, ತಮ್ಮ ಅವಧಿಯಲ್ಲಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ತಿಳಿಸಿದರು. 

ಪ್ರಾಧಿಕಾರದ ಕಚೇರಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಕೆಲ ಹುದ್ದೆಗಳ ಖಾಲಿಯಿರುವುದನ್ನು ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಕುರಿತಂತೆ ತಾವು ಸರ್ಕಾರದ ಹಂತದಲ್ಲಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಜರುಗಿಸುತ್ತೆನೆ ಎಂದು ತಿಳಿಸಿದ್ದಾರೆ. 
ಯಾವುದೆ ಗೊಂದಲ-ಗಡಿಬಿಡಿಗೆ ಆಸ್ಪದವಾಗದಂತೆ ಕಾಲಮಿತಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಕಾಲಮಿತಿಯಲ್ಲಿ ಕಡತಗಳ ವಿಲೇವಾರಿಗೊಳಿಸಬೇಕು ಎಂದು ಅಧಿಕಾರಿ - ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ ಎಂದು ಇಸ್ಮಾಯಿಲ್ ಖಾನ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X