ಮಡಿಕೇರಿ : ಬಾಲ ಕಾರ್ಮಿಕರು ಪತ್ತೆ

ಮಡಿಕೇರಿ, ಸೆ.13 :ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಸಂಸ್ಥೆ ಮತ್ತು ಮಕ್ಕಳ ಸಹಾಯವಾಣಿ ಸದಸ್ಯರ ತಂಡದೊಂದಿಗೆ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಅನಿರೀಕ್ಷಿತ ದಾಳಿ ನಡೆಸಿದ ಸಂದರ್ಭದಲ್ಲಿ ಸುಮಾರು 60 ಸಂಸ್ಥೆಗಳನ್ನು ಭೇಟಿ ಮಾಡಿದಾಗ 16 ವರ್ಷದೊಳಗಿನ ಎರಡು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡು ಬಂದಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ರಾಮಚಂದ್ರ ಅವರು ತಿಳಿಸಿದ್ದಾರೆ.
ಈ ಸಂಬಂಧ ಸಂಸ್ಥೆಯ ಮಾಲೀಕರಿಗೆ ಸ್ಥಳದಲ್ಲಿಯೇ ನೋಟೀಸ್ ನೀಡಲಾಗಿದ್ದು, ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಅನಿರೀಕ್ಷಿತ ದಾಳಿ ಮುಂದುವರೆಯಲಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಎಂ.ಎಂ.ಯತ್ನಟ್ಟಿ, ಮಹದೇವಸ್ವಾಮಿ, ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶೀರಜ್ ಅಹಮ್ಮದ್ ಇತರರು ಹಾಜರಿದ್ದರು.
Next Story





