Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಅರಮನೆಯಲ್ಲಿ ಖಾಸಗಿ ದರ್ಬಾರ್‍ಗೆ ಭರದ...

ಅರಮನೆಯಲ್ಲಿ ಖಾಸಗಿ ದರ್ಬಾರ್‍ಗೆ ಭರದ ಸಿದ್ಧತೆ: ರತ್ನಖಚಿತ ಸಿಂಹಾಸನ ಜೋಡಣೆ ಪ್ರಕ್ರಿಯೆ ಸೆ.15ರಿಂದ ಆರಂಭ

ಮೈಸೂರು ದಸರಾ

ವಾರ್ತಾಭಾರತಿವಾರ್ತಾಭಾರತಿ14 Sept 2017 2:56 PM IST
share
ಅರಮನೆಯಲ್ಲಿ ಖಾಸಗಿ ದರ್ಬಾರ್‍ಗೆ ಭರದ ಸಿದ್ಧತೆ: ರತ್ನಖಚಿತ ಸಿಂಹಾಸನ ಜೋಡಣೆ ಪ್ರಕ್ರಿಯೆ ಸೆ.15ರಿಂದ ಆರಂಭ

ಮೈಸೂರು, ಸೆ.14: ಅರಸೊತ್ತಿಗೆ ಹೋಗಿ ಪ್ರಜಾಪ್ರಭುತ್ವ ಸ್ಥಾಪನೆಯಾದ ಮೇಲೆಯೂ ಅರಸೊತ್ತಿಗೆ ಕಾಲದಲ್ಲಿ ನಡೆಯುತ್ತಿದ್ದ ದಸರಾ (ನವರಾತ್ರಿ) ನಾಡಹಬ್ಬವಾಗಿ ಪರಿವರ್ತನೆಗೊಂಡು 'ಜನರ ದಸರಾ' ಆಗಿದೆ. ಅಂದಿನ ಪರಂಪರೆ ಜೊತೆಗೆ ಆಧುನಿಕತೆಯ ಮೆರುಗು ನೀಡಿ ಸರಕಾರವೇ ದಸರಾ ಮಹೋತ್ಸವವನ್ನು ನಾಡಹಬ್ಬವಾಗಿ ಆಚರಿಸುತ್ತಿದೆ.

ರಾಜವಂಶಸ್ಥರು ಖಾಸಗಿಯಾಗಿ ಅರಮನೆಯಲ್ಲಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಂದಿದ್ದಾರೆ. ಇದರ ಪ್ರಮುಖ ಆಕರ್ಷಣೆಯಾದ ಹಾಗೂ ಐತಿಹಾಸಿಕ ಸಿಂಹಾಸನವನ್ನು ಭದ್ರತಾ ಕೊಠಡಿಯಿಂದ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಂತೆ ಹೊರ ತೆಗೆದು ಅದನ್ನು ಜೋಡಿಸುವ ಕಾರ್ಯ ಆರಂಭಿಸಲಾಗುತ್ತದೆ. ಅದರಂತೆ ಈ ಬಾರಿ ಸೆ.15ರಂದು ಬೆಳಗ್ಗೆ ಸಿಂಹಾಸನ ಜೋಡಣೆ ಕಾರ್ಯ ಆರಂಭಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿಗಣನೆ ಆರಂಭವಾಗಿದ್ದು, ಈ ಮಧ್ಯೆ ಅರಮನೆಯಲ್ಲಿ ಯದುವಂಶಸ್ಥರು ಖಾಸಗಿ ದಸರಾ ಆಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಾಡಹಬ್ಬದ ಜತೆಗೆ ಖಾಸಗಿ ದರ್ಬಾರ್ ಕೂಡ ಪ್ರಾಮುಖ್ಯತೆ ಪಡೆದುಕೊಂಡಿದೆ. ದಸರಾ ಸಂದರ್ಭದಲ್ಲಿ ಅಂಭಾವಿಲಾಸ ಅರಮನೆಯಲ್ಲಿ ರಾಜಾಡಳಿತದ ವೈಭವ ಮೇಳೈಸುತ್ತದೆ. ಆ ವೈಭವಕ್ಕೆ  ಸಿದ್ಧತೆಗಳು ಭರದಿಂದ ಸಾಗಿವೆ.

ಯದುವಂಶದ ಪ್ರಮೋದಾದೇವಿ ಒಡೆಯರ್ ಮಾರ್ಗದರ್ಶನದಲ್ಲಿ ಖಾಸಗಿ ದರ್ಬಾರ್‍ಗೆ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರಂಪರೆಯ ಸಂಪ್ರದಾಯ ಮಂದುವರಿಸಲಿದ್ದು, ರತ್ನ ಖಚಿತ ಸಿಂಹಾಸನವೇರಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ಸೆ.15 ರಂದು ಬೆಳಿಗ್ಗೆ 7.45 ರಿಂದ 8.45 ನವಗ್ರಹ ಹೋಮ, 9.45 ರಿಂದ 10.15 ರವರೆಗೆ ಶಾಂತಿ ಪೂಜೆ ಬಳಿಕ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ.

ರತ್ನ ಖಚಿತ ಸಿಂಹಾಸನವನ್ನು ದಸರಾ ಮಹೋತ್ಸವದ ಸಂದರ್ಭದಲ್ಲಿ ಮಾತ್ರ ಜೋಡಿಸಿ ರಾಜವಂಶಸ್ಥರ ಖಾಸಗಿ ದರ್ಬಾರಿಗೆ ಬಳಸಲಾಗುವುದು. ನಂತರ ಸ್ವಲ್ಪ ದಿನದವರೆಗೆ ಸಾರ್ವಜನಿಕ ದರ್ಶನಕ್ಕೂ ಅವಕಾಶ ನೀಡಲಾಗುವುದು. ಕರಿಮರ, ದಂತ, ಚಿನ್ನ, ಬೆಳ್ಳಿ ಗಳಿಂದ  ನಿರ್ಮಿಸಿರುವ ಸಿಂಹಾಸನಕ್ಕೆ ಬೆಲೆಬಾಳುವ ವಜ್ರ, ಮುತ್ತು, ರತ್ನಗಳನ್ನು ಅಳವಡಿಸಲಾಗಿದೆ. ಅನುವಂಶಿಕ ಸಿಂಹಾಸನವನ್ನು ರಾಜವಂಶಸ್ಥರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಮಹೋತ್ಸವದ ಸಂದರ್ಭ ನಡೆಯುವ ರಾಜ ಸಭೆಯ ಸಮಯದಲ್ಲಿ ಪೂಜೆ ಸಲ್ಲಿಸಿ ಆರೋಹಣ ಮಾಡುವರು. ಸಿಂಹಾಸನದ ಜೋಡಣೆ ಕಾರ್ಯವನ್ನು ಗೆಜ್ಜಗಳ್ಳಿ ಗ್ರಾಮಸ್ಥರು ನಡೆಸಿಕೊಂಡು ಬಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X