Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಂಪಿ ವಿವಿ ಕುಲಪತಿ ಮಲ್ಲಿಕಾ ಘಂಟಿಗೆ...

ಹಂಪಿ ವಿವಿ ಕುಲಪತಿ ಮಲ್ಲಿಕಾ ಘಂಟಿಗೆ ನೋಟಿಸ್: ಬಸವರಾಜರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ14 Sept 2017 8:23 PM IST
share

ಬೆಂಗಳೂರು, ಸೆ.14: ವಿಧಾನಸೌಧದಲ್ಲಿ ವಿಶ್ವವಿದ್ಯಾನಿಲಯದ ಕೆಲಸ ಮಾಡಿಸಿಕೊಳ್ಳಬೇಕಾದರೆ ಸೂಟ್‌ಕೇಸ್ ತುಂಬಾ ಹಣ ತೆಗೆದುಕೊಂಡು ಹೋಗಬೇಕೆಂದು ಹೇಳಿಕೆ ನೀಡಿರುವ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ.ಮಲ್ಲಿಕಾಘಂಟಿಗೆ ನೋಟಿಸ್ ನೀಡಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾ ಘಂಟಿ ಯಾವ ಕಾರಣಕ್ಕಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ವಿಧಾನಸೌಧಕ್ಕೆ ಯಾರಿಗಾಗಿ ಅವರು ಸೂಟ್‌ಕೇಸ್ ತೆಗೆದುಕೊಂಡು ಬಂದಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕಿತ್ತು ಎಂದರು.

ರಾಜ್ಯ ಸರಕಾರದ ಬಳಿ ವಿಶ್ವವಿದ್ಯಾನಿಲಯಕ್ಕೆ ಸಂಬಂಧಿಸಿದ ಯಾವ ಕೆಲಸಗಳು ಇರುವುದಿಲ್ಲ. ವಿಶ್ವವಿದ್ಯಾನಿಲಯಗಳ ಎಲ್ಲ ಕಾರ್ಯಚಟುವಟಿಕೆಗಳ ಹತೋಟಿಯು ರಾಜ್ಯಪಾಲರ ಬಳಿ ಇರುತ್ತದೆ. ಆದರೂ, ಮಲ್ಲಿಕಾ ಘಂಟಿ ರಾಜ್ಯ ಸರಕಾರದ ವಿರುದ್ಧ ಆರೋಪಿಸಿರುವುದು ಬೇಜವಾಬ್ದಾರಿತನದಿಂದ ಕೂಡಿದೆ. ಈ ಸಂಬಂಧ ಸ್ಪಷ್ಟಣೆ ಕೋರಿ ನೋಟಿಸ್ ನೀಡಿ, ಆನಂತರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ಹಂಪಿ ವಿಶ್ವವಿದ್ಯಾಲಯ ಸಂಶೋಧನೆಗೆ ಹೆಚ್ಚು ಒತ್ತು ನೀಡುತ್ತಿದೆ. ಇತ್ತೀಚೆಗಷ್ಟೇ ವಿವಿಯ ಬೆಳ್ಳಿ ಹಬ್ಬದ ಆಚರಣೆಗೆ 25 ಕೋಟಿ ರೂ.ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಅದರಲ್ಲಿ 23 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ಕೇಳಿದ್ದ ಅನುಮತಿಗೆ ಸರಕಾರ ಒಪ್ಪಿಗೆ ನೀಡಿದೆ. ಕಟ್ಟಡ ಕಾಮಗಾರಿಗೆ ವಿವಿಯೆ ಟೆಂಡರ್ ಕರೆಯಬೇಕಿದೆ ಎಂದು ತಿಳಿಸಿದರು.

ವಿವಿಯಲ್ಲಿ ಖಾಲಿಯಿರುವ ಕೆಲವು ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ವಿಷಯ ಹೊರತುಪಡಿಸಿದರೆ, ರಾಜ್ಯ ಸರಕಾರದಿಂದ ಯಾವುದೆ ಕೆಲಸಗಳು ವಿವಿಗೆ ಆಗುವುದು ಬಾಕಿಯಿಲ್ಲ ಎಂದರು.

ಬೆಂಗಳೂರು, ಮೈಸೂರು, ತುಮಕೂರು ಹಾಗೂ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಗಳು ಖಾಲಿಯಿವೆ. ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಶೋಧನಾ ಸಮಿತಿಯು ಪ್ರತಿ ವಿವಿಗೆ ಮೂರು ಹೆಸರುಗಳನ್ನು ಸೂಚಿಸಿದೆ. ಈ ಪೈಕಿ ತಲಾ ಒಂದು ಹೆಸರನ್ನು ಸರಕಾರದ ವತಿಯಿಂದ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಈವರೆಗೂ ಕುಲಪತಿಗಳ ನೇಮಕವಾಗಿಲ್ಲ ಎಂದರು.

ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕನ್ನಡಿಗರಿಗೆ ಶೇ.50ರಷ್ಟು ಸ್ಥಾನಗಳನ್ನು ಮೀಸಲಿರಿಸುವ ಸಂಬಂಧ ವಿಧಾನಮಂಡಲದಲ್ಲಿ ಕಾಯ್ದೆ ಅಂಗೀಕರಿಸಿ ಕಳುಹಿಸಲಾಗಿತ್ತು. ಆದರೆ, ಕಾಯ್ದೆಗೆ ಅಂಕಿತ ಹಾಕದೆ, ಕೆಲವು ಸ್ಪಷ್ಟಣೆಗಳನ್ನು ಕೋರಿ ಕಡತವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಬಸವರಾಜರಾಯರೆಡ್ಡಿ ಹೇಳಿದರು.

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮಾನ್ಯತೆ ನವೀಕರಿಸುವಂತೆ ಕೋರಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ)ದ ಅಧ್ಯಕ್ಷರನ್ನು ಎರಡು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅಲ್ಲದೆ, ಪ್ರಧಾನಮಂತ್ರಿಗೆ ಮುಖ್ಯಮಂತ್ರಿ ಮೂಲಕ ಪತ್ರವನ್ನು ಬರೆಸಿದ್ದೇನೆ. ಆದರೆ, ಈವರೆಗೆ ಯಾವುದೆ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿವಿಗಳ ಆಡಳಿತದಲ್ಲಿ ರಾಜ್ಯ ಸರಕಾರಕ್ಕೆ ಯಾವುದೆ ಹಿಡಿತವಿಲ್ಲ. ಹೀಗಾಗಿ ಸಮಗ್ರ ಕಾಯ್ದೆ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ ವಿವಿ ಅವ್ಯವಹಾರಗಳ ತನಿಖೆಗೆ ಸರಕಾರದ ಅನುಮತಿ ಪಡೆಯದೆ ನ್ಯಾ.ಕೇಶವನಾರಾಯಣ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಇದರಿಂದಾಗಿ, ಆ ಸಮಿತಿಗೆ ಕಾನೂನಿನ ಮಾನ್ಯತೆಯಿಲ್ಲ. ಹಾಗಾಗಿ, ನಿನ್ನೆಯಷ್ಟೆ ಹೊಸ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X