ಚಿಕ್ಕಮಗಳೂರು: ಸೆ.17 ರಂದು ವಿಶ್ವಕರ್ಮ ಜಯಂತಿ
ಚಿಕ್ಕಮಗಳೂರು, ಸೆ.14: ಜಿಲ್ಲಾಡಳಿತ, ಚಿಕ್ಕಮಗಳೂರು ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆ.17 ರಂದು ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಆರ್. ರೋಷನ್ ಬೇಗ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಸಿ.ಟಿ ರವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಹಾಗೂ ಸಂಸದ ಹೆಚ್.ಡಿ.ದೇವೇಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ಜಿಪಂ ಅಧ್ಯಕ್ಷೆ ಬಿ.ಎಸ್.ಚೈತ್ರಶ್ರೀ ಮಾಲತೇಶ್, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕರುಗಳಾದ ಡಿ.ಎನ್.ಜೀವರಾಜ್, ಬಿ.ಬಿ.ನಿಂಗಯ್ಯ, ವೈ.ಎಸ್.ವಿ.ದತ್ತ, ಜಿ.ಹೆಚ್.ಶ್ರೀನಿವಾಸ್, ಎಂಎಲ್‍ಸಿಗಳಾದ ಮೋಟಮ್ಮ, ಎಂ.ಕೆ.ಪ್ರಾಣೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಎ.ಎನ್. ಮಹೇಶ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಪಿ.ಮೋಹನ್, ನಗರಸಭೆ ಅಧ್ಯಕ್ಷೆ ಕವಿತಾ ಶೇಖರ್, ಸಿಡಿಎ ಅಧ್ಯಕ್ಷ ಸೈಯದ್ ಹನೀಫ್, ತಾಪಂ ಅಧ್ಯಕ್ಷ ಈ.ಆರ್.ಮಹೇಶ್, ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ, ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ ನಿಗಮದ ಸದಸ್ಯ ರತೀಶ್ ಬಿ.ಪಿ., ಜಿಲ್ಲಾಧಿಕಾರಿ ಜಿ.ಸತ್ಯವತಿ, ಎಸ್ಪಿ ಕೆ.ಅಣ್ಣಾಮಲೈ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.





