Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ದಸರಾ ವಿಶೇಷ
  3. ಸೆ.18 ರಂದು “ಮಹಿಷ ದಸರಾ” ಆಚರಣೆ:...

ಸೆ.18 ರಂದು “ಮಹಿಷ ದಸರಾ” ಆಚರಣೆ: ಶಾಂತರಾಜು

ವಾರ್ತಾಭಾರತಿವಾರ್ತಾಭಾರತಿ14 Sept 2017 10:21 PM IST
share
ಸೆ.18 ರಂದು “ಮಹಿಷ ದಸರಾ” ಆಚರಣೆ: ಶಾಂತರಾಜು

ಮೈಸೂರು,ಸೆ.14: ಮೂಲ ನಿವಾಸಿಗಳ ಮಹಿಷ ಸಾಂಸ್ಕೃತಿಕ ಹಬ್ಬವಾದ ಮಹಿಷ ದಸರಾದ ಪ್ರಯುಕ್ತ ಮೂಲ ನಿವಾಸಿ ಶೋಷಿತ ಕೇರಿಗಳಿಂದ ಸೆ.18 ರಂದು  ಚಾಮುಂಡಿ ಬೆಟ್ಟಕ್ಕೆ ಬೈಕ್ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಅಂದೇ  ಮಧ್ಯಾಹ್ನ ಚಾಮುಂಡಿ ಬೆಟ್ಟದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ದಲಿತ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,  ದಲಿತ ವೆಲ್‍ ಫೇರ್ ಟ್ರಸ್ಟ್, ಅಶೋಕಪುರಂ ಅಭಿಮಾನಿಗಳ ಬಳಗ, ಗಂಗೋತ್ರಿ ಸಂಶೋಧನಾ ವಿದ್ಯಾರ್ಥಿ ಒಕ್ಕೂಟ ಮೈಸೂರು ಹಾಗೂ ಪ್ರಗತಿ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೂರನೆ ವರ್ಷದ ಮಹಿಷಾ ದಸರಾವನ್ನು ಸೆ.18 ರಂದು ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ ಶೋಷಿತ ಕೇರಿಗಳಿಂದ ಆಗಮಿಸುವ ಬೈಕ್ ರ್ಯಾಲಿ ಹಾರ್ಡಿಂಜ್ ವೃತ್ತದಲ್ಲಿ ಸಮಾವೇಶ ಗೊಂಡು  ಚಾಮುಂಡಿ ಬೆಟ್ಟ ತಲುಪಲಿದೆ. ನಂತರ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಹಿಷಾ ದಸರಾಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಮಹಿಷಾಸುರ ಮೈಸೂರಿನ ಪ್ರಥಮ ಮಹಾರಾಜ, ಆದರೆ ಕೆಲವು ವೈದಿಕ ಶಾಹಿಗಳು ಆತ ಒಬ್ಬ ರಾಕ್ಷಸ ಎಂದು ಬಿಂಬಿಸಿ ತಪ್ಪು ಕಲ್ಪನೆ ಮೂಡಿಸಿದ್ದಾರೆ. ಈತನ ಇರುವಿಕೆಯನ್ನು ಮರೆ ಮಾಚಲಾಗಿದೆ. ಅವನ ಮಹತ್ವವನ್ನು ಕಡೆಗಣಿಸಲಾಗಿದೆ. ಉದ್ದೇಶಪೂರ್ವಕವಾಗಿ ಉದಾಸೀನ ಮಾಡಲಾಗಿದೆ.ಯಾವ ಮಹಾಕಾವ್ಯವು ಇಂತಹ ಬೌದ್ಧ ಬಿಕ್ಕುವಿನ ಕುರಿತು ರಚನೆಯಾಗಿಲ್ಲ.  ನೆಲದ ಅಸಮಾನತೆಯನ್ನು ವಿರೋಧಿಸುತ್ತಿದ್ದನು. ಎರಡು ಸಾವಿರ ವರ್ಷಗಳ ಹಿಂದೆಯೇ ಆತ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಿದ ಮಹಾನ್ ವ್ಯಕ್ತಿ,  ಇಲ್ಲಿ ದೇವರುಗಳಿಗೆ ಸವಾಲುಗಳನ್ನು ಎಸೆಯುತ್ತಿದ್ದನು, ಪುರೋಹಿತಶಾಹಿಯ ವೈದಿಕ ಪ್ರವೃತ್ತಿಯನ್ನು ಖಂಡಿಸುತ್ತಿದ್ದನ್ನು ಎಂದು ವಿವರಿಸಿದರು.

ಚಾಮುಂಡಿ ತಾಯಿಗೆ ಹೇಗೆ ಗೌರವ ಸಲ್ಲುತ್ತದೋ ಅದೇ ರೀತಿ ಮಹಿಷಾಸುರನಿಗು ಗೌರವ ಸಲ್ಲಬೇಕು. ಆತ ಒಬ್ಬ ದಕ್ಷ ಆಡಳಿತಗಾರ ಈತನಿಗೆ ಮೂಲ ನಿವಾಸಿಗಳಾದ ನಾವು ಹಿಂದಿನಿಂದಲೂ ಗೌರ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ ಕಳೆದ ಮೂರು ವರ್ಷಗಳಿಂದ ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ದೊಡ್ಡಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಮೌಲ್ವಿಗಳು, ಕ್ರಿಶ್ಚಿಯನ್ ಧರ್ಮಗುರುಗಳು ಸೇರಿದಂತೆ ನಾಡಿನ ಶೋಷಿತ ಸಮುದಾಯದ ಹಲವಾರು ಪ್ರಮುಖರ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಾಹಿತಿಗಳಾದ ಬನ್ನೂರು ಕೆ.ರಾಜು, ಸಿದ್ದಸ್ವಾಮಿ, ಕೆ.ಗೋವಿಂದರಾಜು, ಸುರೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X