Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಕ್ರಮ-ಸಕ್ರಮ: ಪ್ರತೀ ವಾರ ಸಭೆ ನಡೆಸಲು...

ಅಕ್ರಮ-ಸಕ್ರಮ: ಪ್ರತೀ ವಾರ ಸಭೆ ನಡೆಸಲು ಸಚಿವ ಕಾಗೋಡು ತಿಮ್ಮಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 Sept 2017 10:36 PM IST
share
ಅಕ್ರಮ-ಸಕ್ರಮ: ಪ್ರತೀ ವಾರ ಸಭೆ ನಡೆಸಲು ಸಚಿವ ಕಾಗೋಡು ತಿಮ್ಮಪ್ಪ ಸೂಚನೆ

ಮಂಗಳೂರು, ಸೆ.14 : ಅಕ್ರಮ ಸಕ್ರಮ ಪ್ರಕರಣಗಳ ಅರ್ಜಿ ವಿಲೇವಾರಿಗೆ ಪ್ರತೀ ವಾರ ಸಭೆ ನಡೆಸಲು ರಾಜ್ಯ ಸರಕಾರ ಸೂಚಿಸಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಅವರು ಗುರುವಾರ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಅತಿಥಿಗೃಹದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅಕ್ರಮ ಸಕ್ರಮ ಪ್ರಕರಣಗಳ ಅರ್ಜಿಗಳ ವಿಲೇವಾರಿಗೆ ಆಯಾ ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ಕಾರ್ಯನಿರ್ವಸುತ್ತಿದೆ. ಅರ್ಜಿಗಳ ತ್ವರಿತ ವಿಲೇವಾರಿಗೆ ವಾರಂ ಪ್ರತಿ ಸಭೆ ನಡೆಸಲು ತಹಶೀಲ್ದಾರ್‌ಗಳಿಗೆ ಸೂಚಿಸಲಾಗಿದ್ದು, ಸಮಿತಿಯ ಇಬ್ಬರು ಸದಸ್ಯರ ಕೋರಂನಲ್ಲೂ ಸಭೆ ನಡೆಸಬಹುದಾಗಿದೆ ಎಂದು ಸಚಿವರು ತಿಳಿಸಿದರು.

ಈ ವರ್ಷದ ಆಗಸ್ಟ್ ಅಂತ್ಯದವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫಾರಂ 50 ರಡಿ 46,470 ಅರ್ಜಿಗಳಿಗೆ ಭೂಮಿ ಮಂಜೂರಾತಿ ಮಾಡಲಾಗಿದೆ. ಅದೇ ರೀತಿ ಫಾರಂ 53ರಡಿ 29,915 ಪ್ರಕರಣಗಳಲ್ಲಿ ಭೂಮಿ ಮಂಜೂರಾತಿ ಮಾಡಲಾಗಿದೆ. ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುತ್ತಿರುವುದರಿಂದ ಅಂತಹ ಅರ್ಜಿಗಳನ್ನು ತಾತ್ಕಾಲಿಕ ವಿಲೇ ಇಡಲಾಗಿದೆ. ಬಾಕಿ ಇರುವ ಅಕ್ರಮ ಸಕ್ರಮ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಕಾಗೋಡು ತಿಮ್ಮಪ್ಪ ಹೇಳಿದರು.

ಅಕ್ರಮ ಸಕ್ರಮ ಸಭೆಯಲ್ಲಿ ಭೂಮಿ ಮಂಜೂರಾತಿಗೊಂಡವರಿಗೆ ಕೂಡಲೇ ಹಕ್ಕುಪತ್ರ ಹಾಗೂ ಆರ್‌ಟಿಸಿ ಒದಗಿಸಲು ಕ್ರಮ ಕೈಗೊಳ್ಳಬೇಕು. ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿ ಕುಳಿತವರ ಮನೆ ಅಡಿ ಸ್ಥಳ ಸಕ್ರಮೀಕರಣಕ್ಕೆ 94 ಸಿ ಅಡಿ ಇದುವರೆಗೆ ಜಿಲ್ಲೆಯಲ್ಲಿ 77,814 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 35,577 ಮನೆಗಳಿಗೆ ಮಂಜೂರಾತಿ ನೀಡಿ ಹಕ್ಕುಪತ್ರ ಒದಗಿಸಲಾಗಿದೆ. ಹಕ್ಕುಪತ್ರ ನೀಡಲು ಬಾಕಿ ಇದ್ದವರಿಗೆ ಶೀಘ್ರದಲ್ಲೇ ವಿತರಿಸಲಾಗುವುದು. ಅದೇ ರೀತಿ ನಗರ ಪ್ರದೇಶಗಳಲ್ಲಿ 94ಸಿಸಿ ಅಡಿ 30872 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇವುಗಳಲ್ಲಿ 9,309 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಕಂದಾಯ ಸಚಿವರು ವಿವರಿಸಿದರು.

ಪರಿಶಿಷ್ಟ ಜಾತಿ, ಪಂಗಡದ 6, ಹಿಂದುಳಿದ ವರ್ಗಗಳ 20 ಮತ್ತು ಅಲ್ಪಸಂಖ್ಯಾತರ ವರ್ಗದ 5 ವಿದ್ಯಾರ್ಥಿನಿಲಯಗಳಿಗೆ ಜಾಗ ಕೋರಿ 31 ಅರ್ಜಿಗಳು ವಿವಿಧ ಇಲಾಖೆಗಳಿಂದ ಬಂದಿದ್ದು, ಜಿಲ್ಲೆಯಲ್ಲಿ ಎಲ್ಲಾ ಪ್ರಕರಣಗಳಲ್ಲೂ ಹಾಸ್ಟೆಲ್‌ಗಳಿಗೆ ಜಾಗ ಮಂಜೂರುಗೊಳಿಸಿ, ಜಮೀನು ಹಸ್ತಾಂತರಿಸಲಾಗಿದೆ. ಅಂಗನವಾಡಿಗಳಿಗೆ ಮತ್ತು ಸಾರ್ವಜನಿಕ ರುದ್ರಭೂಮಿ, ಸ್ಮಶಾನಗಳಿಗೆ ಆದ್ಯತೆಯಲ್ಲಿ ಜಮೀನು ಮಂಜೂರಾತಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕಾಗೋಡು ತಿಮ್ಮಪ್ಪ ವಿವರಿಸಿದರು.

ಸಭೆಯಲ್ಲಿ ಆಹಾರ ಸಚಿವ ಯು.ಟಿ. ಖಾದರ್, ಮಂಗಳೂರು ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಉಪಭಾಗಾಧಿಕಾರಿಗಳಾದ ಎ.ಸಿ.ರೇಣುಕಾ ಪ್ರಸಾದ್, ಡಾ. ರಘುನಂದನಮೂರ್ತಿ, ಜಿಲ್ಲೆಯ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಮಂಗಳೂರು ವಿಶ್ವವಿದ್ಯಾನಿಲಯ ಆವರಣಕ್ಕೆ ಆಗಮಿಸಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಎ.ಎಂ. ಖಾನ್, ಹಣಕಾಸು ಅಧಿಕಾರಿ ಡಾ. ದಯಾನಂದ ನಾಯ್ಕಾ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X